GruhaLakshmi Scheme: ಗೃಹಲಕ್ಷ್ಮಿ ಯೋಜನೆ ಹಣದಿಂದ ತಯಾರಾದ ಮನೆ ಬಾಗಿಲು ಹೇಗಿದೆ ಗೊತ್ತಾ? ಇಲ್ಲಿದೆ ವಿಡಿಯೋ
GruhaLakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಾಕಲಾಗುತ್ತಿದೆ. ಬಹುತೇಕರು ಈ ಹಣವನ್ನು ಮನೆಯ ಅಗತ್ಯತೆಗಳಿಗೆ ಬಳಸಿಕೊಂಡಿರುವ ಉದಾಹರಣೆಗಳಿವೆ. ಆದರೆ, ಇಲ್ಲೊಬ್ಬ ಮಹಿಳೆ ಹೊಸ ಮನೆ ಬಾಗಿಲಿಗೆ ಬಳಕೆ ಮಾಡಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈಲ್ ಆಗಿದೆ.
ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿಯರ ಖಾತೆಗೆ 2,000 ರೂಪಾಯಿ ಹಾಕಲಾಗುತ್ತದೆ. ಇದೇ ಹಣವನ್ನು ಎಷ್ಟೋ ಮಹಿಳೆಯರು ಗೃಹಪಯೋಗಿ, ಕೃಷಿ ಸಲಕರಣೆಗಳು, ವಾಹನಗಳನ್ನು ಖರೀದಿ ಮಾಡಿರುವ ಉದಾಹರಣೆಗಳಿವೆ.

ಇದೀಗ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ತಮ್ಮ ಮನೆಯ ಬಾಗಿಲಿನಲ್ಲಿ ಕೆತ್ತನೆ ಮಾಡಿಸಿ ಗಮನ ಸೆಳೆದಿದ್ದಾರೆ. ಇದರಲ್ಲಿ "ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಲಕ್ಷ್ಮಿ ಯೋಜನೆ" ಎಂದು ಬರೆಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಲ್ಲಿ ಮನೆ ಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿರುವ ಘಟನೆ ವಿಜಯನಗರ ಜಿಲ್ಲೆ, ಕೊಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಫೋಟೋ ಭಾರೀ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಮ್ಮ ಎಂಬುವರು ಗೃಹಲಕ್ಷ್ಮೀ ಯೋಜನೆಯ 15 ತಿಂಗಳ ಹಣದಿಂದ ಈ ಫೋಟೋವನ್ನು ಕೆತ್ತಿಸಿದ್ದಾರೆ. ಇವರ ಪತಿ ಕೆ.ಎಂ.ತಿಪ್ಪೇಸ್ವಾಮಿ ಅವರು ಕಳೆದ ಎರಡು ವರ್ಷಗಳ ಹಿಂದೆಯೇ ಮನೆಯನ್ನು ಕಟ್ಟಿಸಿದ್ದರು. ಆದರೆ, ಹಣಕಾಸಿನ ಸಮಸ್ಯೆ ಹಿನ್ನೆಲೆ ಅವರು ಬಾಗಿಲನ್ನು ಮಾಡಿಸಿರಲಿಲ್ಲ. ಇದೀಗ ಆ ಸಮಯ ಬಮದಿದ್ದು, ಅವರು ತಮ್ಮ ಪತ್ನಿ ಪಾರ್ವತಮ್ಮ ಅವರಿಗೆ ಕಳೆದ 15 ತಿಂಗಳಿನಿಂದ ಬಂದಿದ್ದ ಹಣದಿಂದ ಮನೆಗೆ ಮುಂಬಾಗಿಲನ್ನು ಮಾಡಿಸಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಾಗಿಲ ಮಾಡಿಸಲು ಸಾಧ್ಯ ಆಗಿರಲಿಲ್ಲ. ಇದೀಗ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಣದಿಂದ ಇದು ಸಾಧ್ಯ ಆಗಿದೆ. ಈ ಹಣಕಾಸಿನ ನೆರವಿನಿಂದ ಅವರು ಹೊಸ ಬಾಗಿಲನ್ನು ಮಾಡಿಸಿಕೊಂಡು ಗಮನ ಸೆಳೆದಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮೀ ಸೇರಿದಂತೆ ಹಲವು ಯೋಜನೆಗಳಿಂದ ನಾವು ಉತ್ತಮ ಬದುಕು ಕಂಡುಕೊಳ್ಳಲು ಸಾಧ್ಯವಾಗಿದೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ.
ಮನೆ ಮುಂಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಹಾಕುವುದರ ಜೊತೆಗೆ, ದಂಪತಿ ಹೊಸ ಬಾಗಿಲಿನ ಮುಂದೆ ನಿಂತು ಫೋಟೋಗೆ ಫೋಸ್ ಕೊಟ್ಟಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅದೆಷ್ಟೋ ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಂಡಿರುವ ಉದಾಹರಣೆಗಳಿವೆ. ಇದೀಗ ಅದೇ ರೀತಿಯಲ್ಲಿ ಈ ಕುಟುಂಬ ಗೃಹಲಕ್ಷ್ಮಿ ಹಣದಿಂದಲೇ ಸಿಎಂ ಸಿದ್ದರಾಮಯ್ಯಗೆ ವಿನೂತನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಈ ಬಾಗಿಲನ್ನು ನೋಡಲೆಂದೇ ದೂರದ ಊರುಗಳುಂದ ಜನರು ಸರದಿಯಲ್ಲಿ ಹರಿದುಬರುತ್ತಿದ್ದಾರೆ. ಒಟ್ಟಿನಲ್ಲಿ ಹೇಳೋದಾದ್ರೆ, ಈ ಗ್ಯಾರಂಟಿ ಯೋಜನೆಯಿಂದ ಅದೆಷ್ಟೋ ಮಹಿಳೆಯರಿಗೆ ತುಂಬಾ ಸಹಾಯ ಆದಂತಾಗಿದೆ.












Click it and Unblock the Notifications