ಶಾಸಕ ಮುನಿರತ್ನಗೆ ಹೊಸ ಹೆಸರಿಟ್ಟ ಮಹಿಳಾ ಕಾಂಗ್ರೆಸ್‌; ಏನದು?

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದ ಮೇರೆಗೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರ ಹಾಗೂ ಮುನಿರತ್ನ ಅವರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಮುನಿರತ್ನ ಅವರು ಎರಡು ಸಮುದಾಯಗಳ ಬಗ್ಗೆ ಅವಾಚ್ಯವಾಗಿ ನಿಂದಿಸಿದ್ದು, ಮಹಿಳೆಯರ ಬಗ್ಗೆಯೂ ನಾಲಿಗೆ ಹರಿಬಿಟ್ಟಿದ್ದಾರೆ ಎನ್ನುವ ಆರೋಪವಿದೆ. ಇದನ್ನು ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್‌ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಮುನಿರತ್ನ ಅವರಿಗೆ ಹೊಸ ಹೆಸರು ನಾಮಕರಣ ಮಾಡುವ ಮೂಲಕ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. "30 ಪರ್ಸೆಂಟ್‌ ಮನಿ ರತ್ನ" ಎನ್ನುವ ಫಲಕಗಳನ್ನು ಹಿಡಿದು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Women Congress Workers Staged A Protest In Bengaluru

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸೌಮ್ಯಾರೆಡ್ಡಿ ಎಐಸಿಸಿಯ ಶಿಲ್ಪಾ ಅರೋರಾ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು. ದಲಿತರು ಹಾಗೂ ಒಕ್ಕಲಿಗ ಮಹಿಳಾ ಸಮುದಾಯದ ಘನತೆಗೆ ಧಕ್ಕೆ ತರುವ ಮಾತುಗಳನ್ನಾಡಿದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದರು.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಮುನಿರತ್ನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗಳು ನಡೆದವು. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರು, ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುವ ಜೊತೆಗೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ದಲಿತ, ಒಕ್ಕಲಿಗ ಮಹಿಳೆಯರ ಪರವಾಗಿ ಪೋಲಿಸ್ ಕಚೇರಿಗೆ ತೆರಳಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕಾಗಿ ಮನವಿ ಕೂಡ ಸಲ್ಲಿಸಿದರು.

Women Congress Workers Staged A Protest In Bengaluru

ಮತ್ತೊಂದೆಡೆ ಹಾಸನ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರು ಇತರ ಕಾಂಗ್ರೆಸ್ ಮುಖಂಡರೊಂದಿಗೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ, ಪೋಲಿಸ್ ಕಚೇರಿಗೆ ತೆರಳಿ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದರು.

ಏನಿದು ಪ್ರಕರಣ?: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದಾರೆ ಎನ್ನಲಾದ ಆಡಿಯೋ ಎಲ್ಲೆಡೆ ಹರಿದಾಡಿತ್ತು. ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

Women Congress Workers Staged A Protest In Bengaluru

ಬಳಿಕ ಮುನಿರತ್ನ ಅವರ ಪತ್ತೆಗೆ ಪೊಲೀಸರು ಮುಂದಾದಾಗ ಅವರು ಕೋಲಾರ ಜಿಲ್ಲೆಯಲ್ಲಿ ಇರುವ ಮಾಹಿತಿ ಸಿಕ್ಕಿತ್ತು. ಕೊನೆಗೆ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ಲಾಕ್‌ ಮಾಡಿದ್ದರು. ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಮುನಿರತ್ನ ಅವರ ಮೊಬೈಲ್‌ ಲೊಕೇಶನ್‌ ಟ್ರ್ಯಾಕ್‌ ಮಾಡಿ ಸ್ಥಳವನ್ನು ಪೊಲೀಸರು ಪತ್ತೆ ಹಚ್ಚಿದ್ದರು.

ರಾಜಕೀಯ ಪಿತೂರಿಯಿಂದಾಗಿ ಈ ರೀತಿಯ ಆರೋಪಗಳನ್ನು ನನ್ನ ಮೇಲೆ ಮಾಡಿದ್ದಾರೆ. ನಾನೆಲ್ಲೂ ನಾಪತ್ತೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆ ಆಡಿಯೋ ನನ್ನದೇ ಎಂದು ಸಾಬೀತಾದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಮುನಿರತ್ನ ಹೇಳಿದ್ದರು.

ಇದಾದ ಕೆಲವೇ ಹೊತ್ತಿನಲ್ಲಿ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದರು. ಮತ್ತೊಂದೆಡೆ ಬಿಜೆಪಿಯು ಮುನಿರತ್ನ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿಯಾಗಿದೆ. ಮುಂದಿನ ಐದು ದಿನಗಳಲ್ಲಿ ಈ ಘಟನೆಯ ಕುರಿತು ಸ್ಪಷ್ಟೀಕರಣ ನೀಡುವಂತೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+