ಚುನಾವಣಾ ಕರ್ತವ್ಯ; ಮಹಿಳಾ ಸಿಬ್ಬಂದಿಗೆ ಮಹತ್ವದ ಮಾಹಿತಿ

ಬೆಂಗಳೂರು, ಏಪ್ರಿಲ್ 27: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ಮುಕ್ತಾಯಗೊಂಡಿದೆ. ಶೇ 69.23ರಷ್ಟು ಮತದಾನ ನಡೆದಿದ್ದು, ಮೇ 7ರಂದು ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಚುನಾವಣಾ ಕಾರ್ಯಕ್ಕೆ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳು ನೇಮಕಗೊಂಡಿದ್ದಾರೆ. ಇವರಲ್ಲಿ ಮಹಿಳೆಯರು ಸಹ ಇದ್ದಾರೆ. ಚುನಾವಣೆ ಕೆಲಸಕ್ಕೆ ನಿಯೋಜಿಸಲ್ಪಟ್ಟ ಮಹಿಳಾ ನೌಕರರು ಎದುರಿಸುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಯವರನ್ನು ನೇಮಿಸುವ ಕುರಿತು ಈಗಾಗಲೇ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸಿ.ಆ.ಸು.ಇ (ಚುನಾವಣೆಗಳು) ಪತ್ರದ ಮೂಲಕ ಸೂಚಿಸಿದ್ದಾರೆ.

Women On Election Duty Nodal Officer Appointed

ಸಹಾಯವಾಣಿ ಸ್ಥಾಪನೆ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಡುವ ಮುಹಿಳಾ ಸಿಬ್ಬಂದಿಗಳು ಎದುರಿಸುವ ಸವಾಲುಗಳಾದ ಸಾರಿಗೆ ವ್ಯವಸ್ಥೆ, ಆಹಾರ, ಶೌಚಾಲಯ ಮತ್ತಿತರ ಮೂಲಭೂತ ಸೌಲಭ್ಯಗಳು, ವೈದ್ಯಕೀಯ ನೆರವು, ರಕ್ಷಣೆ, ಭದ್ರತೆ ಮುಂತಾದ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ಜಿಲ್ಲೆಯಲ್ಲಿ ಚುನಾವಣಾ ನಿರತ ಮಹಿಳಾ ಅಧಿಕಾರಿ/ ಸಿಬ್ಬಂದಿಗಳ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು.

ಸದರಿ ಅಧಿಕಾರಿಗಳು ಮತದಾನದ ದಿನದಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಮತದಾನದ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಮೇಲೆ ತಿಳಿಸಿರುವ ಸೌಲಭ್ಯಗಳು ದೊರೆಯುವಂತೆ ಅವಶ್ಯಕ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದೆ.

ಪ್ರತಿಮತಟ್ಟೆ ಕೇಂದ್ರ ಮಾಸ್ಟರಿಂಗ್ ಮತ್ತು ಡಿಮಾಸ್ಟರಿಂಗ್ ಸ್ಥಳದಲ್ಲಿ ಚುನಾವಣಾ ಸಂಬಂಧಿತ ಕಾರ್ಯ ನಿರ್ವಹಣೆ ಮಾಡುವ ಮಹಿಳಾ ಸಿಬ್ಬಂದಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಕುರಿತು ನೋಡೆಲ್ ಅಧಿಕಾರಿ ಕ್ರಮ ಕೈಗೊಳ್ಳಬೇಕು.

ಈ ನೋಡೆಲ್ ಅಧಿಕಾರಿಗಳು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಸೂಕ್ತವಾದ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿಕೊಂಡು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ.

ಈ ಅಧಿಕಾರಿಗಳು ಏಪ್ರಿಲ್ 30ರಂದು ನಡೆಯುವ 2ನೇ ಹಂತದ ತರಬೇತಿಯಲ್ಲಿ ಪಾಲ್ಗೊಳ್ಳುವ ಜೊತೆಗೆ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1/5/2024 ರಂದು ನಡೆಯುವ ತರಬೇತಿಯಲ್ಲಿ ಪಾಳ್ಗೊಳ್ಳಬೇಕು. ಮೇ 6ರಂದು ನಡೆಯುವ ಮಾಸ್ಟರಿಂಗ್ ಮತ್ತು ಮೇ 7ರಂದು ನಡೆಯುವ ಡಿ-ಮಾಸ್ಟರಿಂಗ್ ಕೇಂದ್ರಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

ಏಪ್ರಿಲ್ 26ರ ಶುಕ್ರವಾರ ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಕೊಡಗು-ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತದಾನ ಮುಕ್ತಾಯಗೊಂಡಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+