ರಾಘವೇಶ್ವರ ಸ್ವಾಮೀಜಿ ಬಂಧನಕ್ಕೆ ಸಂಘಟನೆಗಳ ಒತ್ತಾಯ
ಬೆಂಗಳೂರು, ಸೆಪ್ಟೆಂಬರ್.04: ಎರಡು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿವಿಧ ಮಹಿಳಾ ಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಭಾರತ ಪ್ರಜಾಸತಾತ್ಮಕ ಫೆಡರೇಷನ್, ಮತ್ತು ಭಾರತ ವಿದ್ಯಾರ್ಥಿ ಪೆಡರೇಷನ್ ಸ್ವಾಮೀಜಿಯನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದವು. [ರಾಘವೇಶ್ವರ ಶ್ರೀ ಮೇಲಿನ ಎರಡೂ ಪ್ರಕರಣ ಸಿಐಡಿಗೆ]

ಒಬ್ಬ ವ್ಯಕ್ತಿಯ ಮೇಲೆ ಎರಡು ಅತ್ಯಾಚಾರ ಪ್ರಕರಣ ದಾಖಲಾದರೂ ಬಂಧನಕ್ಕೆ ವಿಳಂಬ ಮಾಡುತ್ತಿರುವುದು ಏಕೆ? ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಮಾತ್ರ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಲು ಸಾಧ್ಯ ಎಂದು ಸಂಘಟನೆಗಳ ಪ್ರಮುಖರಾದ ಕೆ.ಎಸ್.ಲಕ್ಷ್ಮಿ, ಬಿ.ರಾಜಶೇಖರ ಮೂರ್ತಿ, ಕೆ. ವೆಂಕಟೇಶ್ ಚಿಕ್ಕರಾಜು ಶಾರದಾ.ಕೆ.ಎಸ್ ಹೇಳಿದರು[ಪ್ರೇಮಲತಾ ಪ್ರಕರಣವೇನು?]
ದೂರು ನೀಡಿರುವ ಸಂತ್ರಸ್ತೆಯ ನೆರವಿಗೆ ನಿಂತವರ ತೇಜೋವಧೆ ಮಾಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿದವು.
ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲೆ ಪ್ರೇಮಲತಾ ದಿವಾಕರ್ ಸಲ್ಲಿಸಿದ್ದ ಅತ್ಯಾಚಾರ ಆರೋಪದ ವಿಚಾರಣೆಯನ್ನು ನಡೆಸುತ್ತಿರುವ ಸಿಐಡಿ ತಂಡಕ್ಕೆ ಯಕ್ಷಗಾನ ಕಲಾವಿದೆ ಸಲ್ಲಿಕೆ ಮಾಡಿರುವ ಎರಡನೇ ದೂರಿನ ವಿಚಾರಣೆಯನ್ನು ವಹಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications