Free Bus Travel: ಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ: ಸುನೀಲ್ ಕುಮಾರ್
ಬೆಂಗಳೂರು,ಮೇ 30: ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಆದಷ್ಟು ಬೇಗ ಕೊಟ್ಟ 5 ಗ್ಯಾರಂಟಿಗಳನ್ನ ಜಾರಿಗೊಳಿಸಲು ಬಿಜೆಪಿ ನಾಯಕರು ಒತ್ತಾಯಿಸಿದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರವನ್ನ ತೆಗೆದುಕೊಳ್ಳಲಿದೆ ಎನ್ನಲಾಗಿದ್ದು, ಇದೀಗ ಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚಾಗಿ ಖಾಸಗಿ ಬಸ್ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. (1/2)
— Sunil Kumar Karkala (@karkalasunil) May 30, 2023
ಇನ್ನೂ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಮಂಗಳವಾರ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಭೆ ಬಳಿಕ ರಾಮಲಿಂಗರೆಡ್ಡಿ ಘೋಷಣೆ ಮಾಡಿದ್ದಾರೆ.












Click it and Unblock the Notifications