ದೇವೇಗೌಡ-ಕುಮಾರಸ್ವಾಮಿ ಬೆಂಬಲವಿಲ್ಲದೆ ನಾಲ್ಕು ಬಾರಿ ಗೆದ್ದಿದ್ದೆ: ಮರಿತಿಬ್ಬೇಗೌಡ
ಮಂಡ್ಯ, ಜೂನ್ 09: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲವಿಲ್ಲದೇ ಕಳೆದ ನಾಲ್ಕು ಬಾರಿ ವಿಧಾನ ಪರಿಷತ್ ಚುನಾವಣೆ ಎದುರಿಸಿ ಗೆದ್ದಿದ್ದೇನೆ, ಈ ಚುನಾವಣೆಯಲ್ಲಿ ಇವರ ಅನುಪಸ್ಥಿತಿ ಪರಿಣಾಮ ಬೀರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮರಿತಿಬ್ಬೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನಿಂದಲೇ ನಾನು ಅಂತರ ಕಾಯ್ದುಕೊಂಡಿದ್ದೆ ಆದರೆ ಇದು ಬಹಿರಂಗವಾಗಿರಲಿಲ್ಲ, ಯಾವಾಗಲು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿಕೊಂಡು ಬಂದಿದ್ದೇನೆ, ಈ ಬಾರಿ ನನಗೆ ಸೋಲಾಗಿರಬಹುದು ಆದರೂ ಸಹ ಶಿಕ್ಷಕರ ಪರವಾಗಿ ಇಡೀ ನಾಲ್ಕು ಜಿಲ್ಲೆಯಲ್ಲಿಯೂ ಹೋರಾಟ ಮಾಡುವುದು ನಿರಂತರವಾಗಿರುತ್ತದೆ ಎಂದು ಭರವಸೆ ನೀಡಿದರು.

ನಾಲ್ಕು ಜಿಲ್ಲೆಯ ಅಭಿವೃದ್ಧಿಗೆ ನನ್ನ ಅಧಿಕಾರದ ಅವಧಿಯಲ್ಲಿ ಕೆಲಸ ಮಾಡಿದ್ದೇನೆ, ಸಹಕಾರಿ ಕ್ಷೇತ್ರದಲ್ಲಿ ಹಲವು ಸಹಕಾರಿ ಬ್ಯಾಂಕ್‌ಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದೇನೆ, ಕಾಂಗ್ರೆಸ್ ಪಕ್ಷದ ವರಿಷ್ಠರು ನನಗೆ ಯಾವ ಜವಾಬ್ದಾರಿ ವಹಿಸುವರೋ ಅದರಂತೆ ನಾಲ್ಕು ಜಿಲ್ಲೆಯಲ್ಲಿಯೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿ ಸದೃಢವಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಶಿಕ್ಷಕರು ಯಾವ ಕಾಣರಣಕ್ಕೆ ಸೋಲಿಸಿದರು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ನೈತಿಕತೆ ಇಟ್ಟುಕೊಂಡು ಕೆಲಸ ಮಾಡಿದ್ದೇನೆ, ತತ್ವಸಿದ್ಧಾಂತ ಬಿಟ್ಟು ಎಂದಿಗೂ ರಾಜಕಾರಣ ಮಾಡಿದವನಲ್ಲ, ಆದರೂ ನನ್ನ ಸೋಲಿಗೆ ಕಾರಣ ತಿಳಿದು ಬಂದಿಲ್ಲ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತೇನೆ, ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸುವ ಹಂತದಲ್ಲಿ ನನ್ನ ಸೋಲು ಶಿಕ್ಷಕರ ಸೋಲಾಗಿದೆ, ಆಡಳಿತ ಪಕ್ಷ ಇರುವಾಗ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೆ ಆದರೆ, ಶಿಕ್ಷಕ ಸಮುದಾಯ ಈ ಬಾರಿ ತಿರಸ್ಕರಿಸಿದೆ ಎಂದು ವಿಷಾದಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಾನು ಸೋತಿಲ್ಲ, ನನ್ನನ್ನು ಸೋಲಿಸಿ ಶಿಕ್ಷಕರೇ ಸೋಲಿಸಿದ್ದಾರೆ, ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಅನಿವಾರ್ಯ, ಇಬ್ಬರು ಮೂರ್ಖರನ್ನ ನೋಡಿ ಒಬ್ಬ ಸಮರ್ಥ ಅಭ್ಯರ್ಥಿಯನ್ನ ಸೋಲಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ? ಏಕೆ ಈ ರೀತಿ ಶಿಕ್ಷಕರು ಚಿಂತನೆ ಮಾಡಿದರು ಎಂಬುವ ಪ್ರಶ್ನೆ ಈಗಲೂ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 24 ವರ್ಷಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲದೇ ಅದರಲ್ಲಿಯೂ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲವಿಲ್ಲದೆ ನಾಲ್ಕು ಬಾರಿ ವಿಧಾನ ಪರಿಷತ್ ಚುನಾವಣೆ ಎದುರಿಸಿ ಗೆದ್ದಿದ್ದೇನೆ, ಈ ಚುನಾವಣೆಯಲ್ಲಿ ಇವರ ಅನುಪಸ್ಥಿತಿ ಪರಿಣಾಮ ಬೀರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚುನಾವಣಾ ಸಂದರ್ಭದಲ್ಲಿ ನನ್ನ ಸಾಧನೆಗಳ ಕಿರುಹೊತ್ತಿಗೆಯನ್ನ ಹೊರ ತಂದಿದ್ದು, ನಾನು ಮಾಡಬೇಕಿದ್ದ ಕೆಲಸಗಳ ಬಗ್ಗೆಯೂ ಉಲ್ಲೇಖಿಸಿದ್ದೆ, ಜೊತೆಗೆ ಮಾಡಿರುವ ಸಾಧನೆಗಳ ಕುರಿತಂತೆ ಬೆಳಕು ಚೆಲ್ಲಿದ್ದೆ, ಆದರೆ ಇದೊಂದು ಅಚ್ಚರಿ ಅನಿರೀಕ್ಷಿತ ಬೆಳವಣಿಗೆಯಾಗಿದೆ, ಚಿಂತಕರು, ಸಾಹಿತಿಗಳು ಬೇರೆ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದಾರೆ, ಈ ಬಾರಿ ಗೆಲುವು ಸಿಗುತ್ತದೆ ಎಂಬ ಅಂಚಲ ನಂಬಿಕೆಯಿತ್ತು, ಇದು ಸುಳ್ಳಾಯಿತು. ಸೋತಿದಿದ್ದರೂ ಹೋರಾಟ ಬಿಡಲ್ಲ ಅದು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ನೆಲಕಚ್ಚಿದೆ, ಮುಂದಿನ ದಿನಗಳಲ್ಲಿ ಆ ಪಕ್ಷಕ್ಕೆ ಮರು ಜೀವ ಬರಲು ಸಾಧ್ಯವೇ ಇಲ್ಲ, ಈಗಾಗಲೇ ಆ ಪಕ್ಷದ ಬಹುತೇಕ ನಾಯಕರು ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ, ಅದೇನಿದ್ದರು ಮುಳುಗುವ ದೋಣಿ, ಕಾಂಗ್ರೆಸ್ ಗ್ಯಾರಂಟಿಗಳ ನಡುವೆ ಈ ಪಕ್ಷ ಚೇತರಿಸಿಕೊಳ್ಳುತ್ತದೆ ಎಂಬುವ ವಿಶ್ವಾಸವೇ ಇಲ್ಲ ಎಂದು ಭವಿಷ್ಯ ನುಡಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications