ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರ ಟಿಪ್ಪು ಇತಿಹಾಸ ತಿರುಚಲು ಬಿಡಲ್ಲ: ಡಿ.ಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 28: ಟಿಪ್ಪು ಸುಲ್ತಾನ್ ವಿಚಾರ ಒಂದು ಜಾತಿ, ವರ್ಗಕ್ಕೆ ಸೇರಿದ್ದಲ್ಲ. ಅವರು ಈ ದೇಶದ ಇತಿಹಾಸದ ಭಾಗ. ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.

Recommended Video

Andre Russell wasn't unhappy with me : Dinesh Karthik | Oneindia Kannada

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪಠ್ಯದಿಂದ ಟಿಪ್ಪು ಸುಲ್ತಾನ್ ಅವರ ಪಾಠಗಳನ್ನು ಕೈಬಿಡುವ ಬಗ್ಗೆ ರಾಜ್ಯ ಸರ್ಕಾರದ ಪ್ರಸ್ತಾವನೆ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...

ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ತೆಗೆದುಹಾಕಲು ಮುಂದಾದ ಬಿಜೆಪಿ ಸರ್ಕಾರಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ತೆಗೆದುಹಾಕಲು ಮುಂದಾದ ಬಿಜೆಪಿ ಸರ್ಕಾರ

''ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದು ಬಿಡುವುದು ಆ ಸರ್ಕಾರಕ್ಕೆ ಬಿಟ್ಟ ವಿಚಾರ. ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ಕೋವಿಂದ್ ಅವರು ವಿಧಾನಸೌಧಕ್ಕೆ ಬಂದು ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ. ಇವತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಅಂತಾ ಇತಿಹಾಸ ಬದಲಿಸಲು ಹೊರಟಿರುವುದು ಹಾಗೂ ಸಂವಿಧಾನವನ್ನು ತಿರುಚಿ ಬರೆಯಲು ಪ್ರಯತ್ನ ನಡೆಯುತ್ತಿರುವುದು ಖಂಡನೀಯ. ನಮ್ಮ ಇತಿಹಾಸ ಬದಲಾವಣೆ ಆಗಬಾರದು'' ಎಂದು ಹೇಳಿದರು.

ಪಠ್ಯದಿಂದ ಟಿಪ್ಪು ವಿಷಯ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆಪಠ್ಯದಿಂದ ಟಿಪ್ಪು ವಿಷಯ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆ

Wont Allow Bjp Govt To Defame Tipu Sultan History: Dk Shivakumar

''ಇವರು ಜನರನ್ನು ದಾರಿ ತಪ್ಪಿಸಲು ನಾವು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ನಿಲುವು. ಇದರ ಸಾಧಕ ಬಾಧಕ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುತ್ತೇವೆ. ಇದು ಒಂದು ವರ್ಗ, ಜಾತಿಗೆ ಸೀಮಿತವಾದುದಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಇದು ದೇಶದ ಚರಿತ್ರೆ ವಿಚಾರ. ಜಗತ್ತಿನ ಹಲವು ರಾಷ್ಟ್ರಗಳು ಭಾರತದ ಸಂವಿಧಾನವನ್ನು ಪ್ರಶಂಸೆ ಮಾಡಿ ತಾವು ಅಳವಡಿಸಿಕೊಳ್ಳಬೇಕು ಎಂಬ ಇಂಗಿತ ವ್ಯಕ್ತಪಡಿಸಿದ್ದವು. ಆದರೆ ಬಿಜೆಪಿ ಇದನ್ನು ಮೊಟಕು ಮಾಡಲು ಪ್ರಯತ್ನಿಸುತ್ತಿದೆ. ನಮ್ಮ ಮಕ್ಕಳಿಗೆ ತಿಳುವಳಿಕೆ ಹೇಳಿಕೊಡಬೇಕು. ಇದರ ಬಗ್ಗೆಯೂ ನಮ್ಮ ತಂಡ ಅಧ್ಯಯನ ಮಾಡಲಿದೆ'' ಎಂದರು.

English summary
KPCC president DK Shivakumar said Karnataka government has taken wrong decision to drop a chapter on Mysore ruler Tipu Sultan, Congress won t allow defame history.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X