ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪ ಸಹಿಸುವುದಿಲ್ಲ: ಸುಧಾಕರ್

|
Google Oneindia Kannada News

ಬೆಂಗಳೂರು, ಜೂನ್ 23: ''ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ತಂದೆ, ಪತ್ನಿ ಮತ್ತು ಪುತ್ರಿಗೆ ಕೊರೋನಾ ಸೋಂಕು ತಗುಲಿ ಸ್ವಯಂ ಗೃಹಬಂಧನದಲ್ಲಿರುವ ಸಚಿವರು ಮಂಗಳವಾರ ನಿವಾಸದಿಂದಲೇ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಸಂವಾದದ ಮೂಲಕ ಕೋವಿಡ್‌ ಬೆಳವಣಿಗೆಗಳ ಪರಾಮಶೆ೯ ನಡೆಸಿದರು.

ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಸೋಂಕು ಚಿಕಿತ್ಸೆಗೆ ಮಾರ್ಗಸೂಚಿ ಸಿದ್ಧ; ಸುಧಾಕರ್ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಸೋಂಕು ಚಿಕಿತ್ಸೆಗೆ ಮಾರ್ಗಸೂಚಿ ಸಿದ್ಧ; ಸುಧಾಕರ್

ರೋಗಿಗಳನ್ನು ದಾಖಲು ಮಾಡಿಕೊಳ್ಳುವ ವಿಷಯದಲ್ಲಿ ಆಗುತ್ತಿರುವ ಗೊಂದಲಗಳು, ಕಳಪೆ ಆಹಾರ ವಿತರಣೆ ಆಗತ್ತಿರುವ ಮತ್ತು ಸ್ವಚ್ಛತೆ ಸರಿಯಿಲ್ಲದಿರುವುದಕ್ಕೆ ಸಂಬಂಧಿಸಿದಂತೆ ಎರಡು ಮೂರು ದಿನಗಳಿಂದ ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿವೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಹಗಲು - ರಾತ್ರಿ ಎನ್ನದೆ ಕಷ್ಟಪಟ್ಟು ಎಲ್ಲರೂ ಕೆಲಸ ಮಾಡಿ, ಬೆಂಗಳೂರು ನಗರ ಮತ್ತು ರಾಜ್ಯದ ಬಗ್ಗೆ ದೇಶವೇ ಮೆಚ್ಚುವಂತಹ ಕೆಲಸ ಮಾಡಿದ್ದು ಈಗ ಇಂತಹ ದೂರುಗಳು ಬಂದರೆ ಸಹಿಸಲು ಆಗುವುದಿಲ್ಲ ಎಂದರು.

 ಸೌಲಭ್ಯಗಳ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ

ಸೌಲಭ್ಯಗಳ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ

ಕೋವಿಡ್‌ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ. ಇನ್ನು ಮುಂದೆ ದೂರು ಮರುಕಳಿಸದಂತೆ ಎಚ್ಚರವಹಿಸಬೇಕು. ಎಚ್ಚರಿಕೆಯಿಂದ ಕತ೯ವ್ಯ ನಿವ೯ಹಿಸುವಂತೆ ಸೂಚಿಸಿದ್ದರೂ, ಲೋಪಗಳು ಆಗುತ್ತಿದ್ದರೆ ನಿದೇ೯ಶಕರುಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದ ಸಚಿವರು, ವಿಕ್ಟೋರಿಯಾ, ಬೌರಿಂಗ್‌ ಮತ್ತು ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ ನಿದೇ೯ಶಕರುಗಳ ಜತೆ ಮಾತನಾಡಿ ಮಾಧ್ಯಮ ವರದಿಗಳ ಬಗ್ಗೆ ವಿವರಣೆ ಪಡೆದರು.

ಸಂಸ್ಥೆಯ ಮುಖ್ಯಸ್ಥರಿಗೆ ಇದು ಕೊನೆಯ ಎಚ್ಚರಿಕೆ. ಮುಂದೆ ಈ ರೀತಿ ಮಾತನಾಡುವುದಿಲ್ಲ, ಬದಲಿಗೆ ದೂರು ಬಂದ ಸಂಸ್ಥೆಗಳ ಹೊಣೆಯನ್ನು ಹಿರಿಯ ಕೆಎಎಸ್‌ ಅಧಿಕಾರಿಗಳಿಗೆ ವಹಿಸಲಾಗುವುದು. ಒಟ್ಟಾರೆ ವ್ಯವಸ್ಥೆ ಪಾರದಶ೯ಕವಾಗಿ ಗರಿಷ್ಠ ಬದ್ಧತೆಯಿಂದ ಇರುವಂತೆ ನೋಡಿಕೊಳ್ಳಬೇಕು. ಸಕಾ೯ರ ಎಲ್ಲಾ ರೀತಿಯ ನೆರವು ನೀಡುತ್ತದೆ ಎಂದು ಭರವಸೆ ನೀಡಿದರು.

 ಹೆಚ್ಚುವರಿ ಹಣವನ್ನು ಸಕಾ೯ರ ಭರಿಸಲು ಸಿದ್ಧ

ಹೆಚ್ಚುವರಿ ಹಣವನ್ನು ಸಕಾ೯ರ ಭರಿಸಲು ಸಿದ್ಧ

ಇನ್ನು ಮುಂದೆ ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಕಳುಹಿಸಿ ನಿಗಾ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳಿದ್ದು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಮಾತ್ರವೇ ಕೋವಿಡ್‌ ಆಸ್ಪತ್ರೆಗಳಲ್ಲಿ ಇರಿಸಿಕೊಂಡು ಚಿಕಿತ್ಸೆ ನೀಡಬೇಕು. ಇವರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಹಾರ ನೀಡುವ ಜತೆಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಸ್ವಚ್ಛತೆ ವಿಷಯದಲ್ಲೂ ಎಚ್ಚರಿಕೆ ವಹಿಸಬೇಕು. ಆಹಾರದ ವಿಷಯದಲ್ಲಿ ಕಟ್ಟುನಿಟ್ಟಿನ ಸೂಚನೆಗಳನ್ನು ಸರಬರಾಜುದಾರರಿಗೆ ನೀಡಬೇಕು. ಪ್ರಮಾಣ ಹೆಚ್ಚು ನೀಡಿದರೂ ಪರವಾಗಿಲ್ಲ. ಹೆಚ್ಚುವರಿ ಹಣವನ್ನು ಸಕಾ೯ರ ಭರಿಸಲು ಸಿದ್ಧ ಎಂದರು.

ರೋಗ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ರೋಗ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್

 ತಜ್ಞ ಮತ್ತು ಹಿರಿಯ ವೈದ್ಯರು ಬರುತ್ತಿಲ್ಲ ಎಂಬ ದೂರು

ತಜ್ಞ ಮತ್ತು ಹಿರಿಯ ವೈದ್ಯರು ಬರುತ್ತಿಲ್ಲ ಎಂಬ ದೂರು

ಚಿಕಿತ್ಸೆ ನೀಡಲು ತಜ್ಞ ಮತ್ತು ಹಿರಿಯ ವೈದ್ಯರು ಬರುತ್ತಿಲ್ಲ ಎಂಬ ದೂರುಗಳಿವೆ. ಕತ೯ವ್ಯಕ್ಕೆ ನಿಯೋಜನೆಗೊಂಡಿರುವ ತಜ್ಞರು, ವೈದ್ಯರು ಮತ್ತು ಪಿಜಿ ವಿದ್ಯಾಥಿ೯ಗಳ ಪಟ್ಟಿಯನ್ನು ಆಯಾ ವಾಡು೯, ಐಸಿಯು ಮುಂದೆ ಪ್ರಕಟಣಾ ಫಲಕದಲ್ಲಿ ಹಾಕಬೇಕು. ಜತೆಗೆ ಕ್ಯಾಮೇರಾ ಅಳವಡಿಸಿ ಕತ೯ವ್ಯಕ್ಕೆ ಹಾಜರಾಗುವವರು ತಮ್ಮ ಹೆಸರು ಹೇಳಿ ಒಳ ಹೋಗಬೇಕು. ಒಳಗೆ ಮತ್ತು ಹೊರಗೆ ಹೋಗುವ ಮುನ್ನ ಕಡ್ಡಾಯವಾಗಿ ಸಮಯ ನಮೂದಿಸಿ ಸಹಿ ಮಾಡಲೇಬೇಕು. ಈ ವ್ಯವಸ್ಥೆ ಬುಧವಾರದಿಂದಲೇ ಎಲ್ಲ ಕೋವಿಡ್‌ ಆಸ್ಪತ್ರೆಗಳಲ್ಲಿ ಜಾರಿಯಾಗಬೇಕು ಎಂದು ಸೂಚನೆ ನೀಡಿದರು.

 ಖಾಸಗಿ ಆಸ್ಪತ್ರೆಗಳಲ್ಲಿಯೂ ಹಾಸಿಗೆಗಳು ಮೀಸಲು

ಖಾಸಗಿ ಆಸ್ಪತ್ರೆಗಳಲ್ಲಿಯೂ ಹಾಸಿಗೆಗಳು ಮೀಸಲು

ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಹಾಸಿಗೆಗಳನ್ನು ಮೀಸಲು ಇರಿಸಲಾಗಿದೆ. ಅದನ್ನು ಸರಿಯಾಗಿ ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ, ಕೋವಿಡ್‌ ಕೇರ್‌ ಸೆಂಟರ್‌ಗಳು, ಅಲ್ಲಿ ನೀಡುವ ಸೌಲಭ್ಯಗಳಲ್ಲೂ ಲೋಪಗಳಾಗದಂತೆ ನೋಡಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಆಸ್ಪತ್ರೆಗಳಿಂದ ಆಂಬ್ಯುಲೆನ್ಸ್‌ ಅಥವಾ ಸಕಾ೯ರಿ ಬಸ್‌ಗಳ ಮೂಲಕ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು ಎಂದು ಸಚಿವ ಸುಧಾಕರ್‌ ಸಲಹೆ ನೀಡಿದರು.

ಕೋವಿಡ್‌ ಕಾಯ೯ಚಟುವಟಿಕೆಗಳಿಗೆ ನಿಯೋಜನೆಗೊಂಡಿರುವ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್‌ ಆಸ್ಪತ್ರೆ ಮುಖ್ಯಸ್ಥರು, ಕಾಯ೯ದಶಿ೯, ಅಪರ ಮುಖ್ಯಕಾಯ೯ದಶಿ೯ಯವರೊಂದಿಗೆ ಸಮನ್ವಯ ಇಟ್ಟುಕೊಂಡು ಆಯಾ ದಿನದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿ ಸೂಚನೆಗಳನ್ನು ಪಾಲಿಸಬೇಕು. ಈ ವಿಷಯದಲ್ಲಿ ನಿಲ೯ಕ್ಷ್ಯ ತೋರಿಸಿದರೆ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು. ರೋಗ ಲಕ್ಷಣಗಳು ಇಲ್ಲದವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡುವ ಮತ್ತು ನಿಗಾ ವಹಿಸುವುದಕ್ಕೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ಮಾಗ೯ಸೂಚಿ ಬಿಡುಗಡೆ ಮಾಡಲಾಗುವುದು ಎಂದರು.

 ಕ್ವಾರಂಟೈನ್‌ನಲ್ಲೂ ಕಾಯ೯ನಿವ೯ಹಣೆ…..

ಕ್ವಾರಂಟೈನ್‌ನಲ್ಲೂ ಕಾಯ೯ನಿವ೯ಹಣೆ…..

ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಸ್ವಯಂ ಗೃಹಬಂಧನದಲ್ಲಿರುವ ಸಚಿವ ಸುಧಾಕರ್‌ ಮನೆಯಲ್ಲಿ ಇದ್ದುಕೊಂಡೇ ಮಾಮೂಲಿನಂತೆ ಕಾಯ೯ ನಿವ೯ಹಿಸಿದರು. ಬೆಳಗ್ಗೆ ಮೊಬೈಲ್‌ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಬೆಳವಣಿಗೆಗಳ ಬಗ್ಗೆ ಚಚಿ೯ಸಿದ ಸಚಿವರು ಮಧ್ಯಾಹ್ನದ ನಂತರ ಕೋವಿಡ್‌ ಬೆಳವಣಿಗೆಗಳ ಮಾಹಿತಿ ಪಡೆದರು. ಬಳಿಕ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್‌ ಆಸ್ಪತ್ರೆ ನಿದೇ೯ಶಕರುಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಕುಟುಂಬ ಸದಸ್ಯರಿಗೆ ಸೋಂಕು ತಗುಲಿರುವ ಬಗ್ಗೆ ಸುದ್ದಿ ತಿಳಿದು ಹಾರೈಕೆಗಳ ಮಹಾಪೂರವೇ ಸಚಿವರಿಗೆ ಹರಿದು ಬಂದಿದ್ದು ತಮ್ಮ ಹಾಗೂ ಕುಟುಂಬ ಸದಸ್ಯರ ಬಗ್ಗೆ ಜನರು ತೋರಿಸಿದ ಅಭಿಮಾನ ಮತ್ತು ಕಾಳಜಿಗೆ ಧನ್ಯವಾದಗಳನ್ನು ಅಪಿ೯ಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

English summary
The directors of institutions will be held responsible if any there are any complaints and lack of facilities in treatment of covid patients, warned Medical Equation Minister Dr.KSudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X