KC General Hospital: 200 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆಧುನೀಕರಣ

ಬೆಂಗಳೂರು, ಜುಲೈ 03: ಬೆಂಗಳೂರಿನ ಜನರ ಜೀವನಾಡಿಯಾಗಿರುವ ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವ ಬಗ್ಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಟ್ರಾಮಾ ಸೆಂಟರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ 200 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಕ್ರಮ ವಹಿಸುವುದಾಗಿ ತಿಳಿಸಿದರು..

Work Underway To Upgrade Bengaluru s KC General Hospital

50 ಹಾಸಿಗೆಗಳ ಸಾಮರ್ಥ್ಯದ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಸೇರಿದಂತೆ ಇತರ ಕಾಮಗಾರಿಯನ್ನು ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆ.ಸಿ. ಜನರಲ್ ಆಸ್ಪತ್ರೆಯನ್ನು ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುತ್ತಿದೆ. ಬೆಂಗಳೂರಿನ ಜನಸಾಮಾನ್ಯರಿಗೆ ಅತ್ಯುತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ತಿಳಿಸಿದರು.

ಆಸ್ಪತ್ರೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ವಿವರ

* 35 ಕೋಟಿ ವೆಚ್ಚದ ನೂತನ ಟ್ರಾಮಾ ಕೇರ್ ಸೆಂಟರ್ ಮುಂದಿನ ಮಾರ್ಚ್ ವೇಳೆಗೆ ಕಾರ್ಯಾರಂಭ

* 66 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಾಮಗಾರಿ

* 38 ಕೋಟಿ ವೆಚ್ಚದಲ್ಲಿ ಭೋದಕ ವಿಭಾಗ ಕಟ್ಟಡ ಕಾಮಗಾರಿ

* 4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ, 4.80 ಕೋಟಿ ವೆಚ್ಚದ ಅಗ್ನಿ ಶಾಮಕ ವ್ಯವಸ್ಥೆ ಕಾಮಗಾರಿ

*10 ಕೋಟಿ ವೆಚ್ಚದಲ್ಲಿ ಹಳೆ ಕಟ್ಟಡಗಳ ದುರಸ್ಥಿ ಕಾಮಗಾರಿ

*ಮುರಿದು ಬಿದ್ದಿರುವ ಆರ್‌ಸಿಸಿ ಸಜ್ಜಾಗಳ ಮರು ನಿರ್ಮಾಣ, ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆ ಸೇರಿ ಆಸ್ಪತ್ರೆಯ ಹಳೆಯ ಕಟ್ಟಡಗಳ ದುರಸ್ತಿಗಾಗಿ ಸರ್ಕಾರಕ್ಕೆ 9.98 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಲು ಕ್ರಮ ತೆಗೆದುಕೊಳ್ಳಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+