KSRTC; ಹಬ್ಬ, ರಜೆ ದಿನದಂದು ಕೆಲಸ ಮಾಡುವ ಸಿಬ್ಬಂದಿಗೆ ಸಿಹಿಸುದ್ದಿ

ಬೆಂಗಳೂರು, ಸೆಪ್ಟೆಂಬರ್ 19; ವಾರಾಂತ್ಯದ ಸರಣಿ ರಜೆ ಮತ್ತು ಗಣೇಶ ಚತುರ್ಥಿ ರಜೆ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಹೆಚ್ಚುವರಿ ಬಸ್ ಓಡಿಸುತ್ತದೆ. ರಜೆ ಸಂದರ್ಭದಲ್ಲಿಯೂ ಚಾಲಕ, ನಿರ್ವಾಹಕರು ಜನರನ್ನು ಅವರ ಊರಿಗೆ ತಲುಪಿಸುವ ಕೆಲಸ ಮಾಡುತ್ತಾರೆ.

ಕೆಎಸ್ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಾ) ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವ ಕುರಿತು ಸೂಚನೆ ನೀಡಿದ್ದಾರೆ.

Working On Holiday And Festival Holiday Double Wages For KSRTC Employees

ಈ ಸುತ್ತೋಲೆ ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವ ಕುರಿತು ಎಂಬ ವಿಷಯ ಒಳಗೊಂಡಿದೆ. ದಿನಾಂಕ 6/11/2020, ದಿನಾಂಕ 9/1/2023 ಮತ್ತು ದಿನಾಂಕ 7/9/2023ರ ಆದೇಶ/ ಸುತ್ತೋಲೆಗಳನ್ನು ಉಲ್ಲೇಖಿಸಲಾಗಿದೆ.

ಸುತ್ತೋಲೆಯ ವಿವರಗಳು; ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರೇ ಆದಾಯವು ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ಸವೇತನ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ನಿರ್ದೇಶನಗಳನ್ನು ನೀಡಲಾಗಿತ್ತು ಎಂದು ಹೇಳಿದೆ.

ತದನಂತರ ಜನದಟ್ಟಣೆ ಹೆಚ್ಚಿರುವ ಪೀಕ್ ಸೀಜನ್‌ಗಳಲ್ಲಿ ವಾಹನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಡಿಸೆಂಬರ್-2022 ರಿಂದ ಜೂನ್-2023ರ ವರೆಗೆ ಮಾತ್ರ ಸವೇತನ ರಜೆ ಸೌಲಭ್ಯವನ್ನು ವಿಸ್ತರಣೆ ಮಾಡಲಾಗಿತ್ತು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ 'ಶಕ್ತಿ ಯೋಜನೆ'ಯ ಹಿನ್ನಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತ ಹೆಚ್ಚುವರಿ ವೇತನವನ್ನು (Double Wages) ಪಾವತಿಸುವುದು ಹಾಗೂ ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಗಳನ್ನು ಕರ್ತವ್ಯದ ಮೇಲೆ ನಿಯೋಜಿಸುವುದು ಎಂದು ಸ್ಪಷ್ಟಪಡಿಸಿದೆ.

ಪ್ರಸ್ತುತ ಕೆಎಸ್‌ಆರ್‌ಟಿಸಿ ಚಾಲಕ & ನಿರ್ವಾಹಕರಾಗಿ ಕಾರ್ಯ ನಿರ್ವಹಣೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳುತ್ತದೆ. ದೂರದ ಮಾರ್ಗದಲ್ಲಿ ಸಂಚಾರ ನಡೆಸುವ ಹಲವು ಬಸ್‌ಗಳಲ್ಲಿ ಒಬ್ಬರೇ ಚಾಲಕ & ನಿರ್ವಾಹಕರ ಕೆಲಸ ಮಾಡುತ್ತಾರೆ. ಹಬ್ಬ, ರಜಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿದ್ದು, ಹೆಚ್ಚುವರಿ ಬಸ್ ಓಡಿಸುವುದರಿಂದ ಅವರಿಗೆ ತೊಂದರೆ ಆಗುತ್ತಿತ್ತು.

ಈ ಹಿಂದೆ ಕೆಎಸ್‌ಆರ್‌ಟಿಸಿ ನೌಕರರ ಸಂಘ ಸರ್ಕಾರದೊಂದಿಗೆ ಸಭೆಗಳನ್ನು ನಡೆಸಿದಾಗ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಇದರಲ್ಲಿ ಹಬ್ಬ/ ರಜೆ ದಿನಗಳಲ್ಲಿ ಕೆಲಸ ಮಾಡಿದರೆ ಹೆಚ್ಚುವರಿ ವೇತನ ಪಾವತಿ ಮಾಡಬೇಕು ಎಂಬುದು ಸಹ ಪ್ರಮುಖ ಬೇಡಿಕೆಯಾಗಿತ್ತು. ಹಿಂದೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ನಿರ್ದೇಶನಗಳನ್ನು ನೀಡಲಾಗಿತ್ತು.

ಈ ವರ್ಷದ ಜನವರಿಯಲ್ಲಿ ಕೆಎಸ್ಆರ್‌ಟಿಸಿ ಸಾರ್ವತ್ರಿಕ/ ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುವವರಿಗೆ ಹೆಚ್ಚುವರಿ ವೇತನ ನೀಡುವ ಬಗ್ಗೆ ಆದೇಶ ಹೊರಡಿಸಿತ್ತು. ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ಈ ಕುರಿತು ಹಿರಿಯ/ ವಿಭಾಗ ನಿಯಂತ್ರಣಾಧಿಕಾರಿಗಳು/ ಕಾರ್ಯ ವ್ಯವಸ್ಥಾಪಕರು ಕರಾರಸಾ ನಿಗಮ ಇವರಿಗೆ ಮಾಹಿತಿ ನೀಡಿದ್ದರು.

ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಸದರಿ ಸಾರ್ವತ್ರಿಕ/ ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಹೆಚ್ಚುವರಿ ವೇತನ (Double, Wages) ಪಾವತಿ ಮಾಡಲು ಅಧಿಕಾರಿಗಳು ಮಂಜೂರಾತಿ ನೀಡಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+