ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: ಕುಮಾರಸ್ವಾಮಿ ಪುನರುಚ್ಚಾರ

By Sachhidananda Acharya
|
Google Oneindia Kannada News

ಬೆಂಗಳೂರು, ಜೂನ್ 15: ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.

ಈ ಕುರಿತು ಟ್ಟೀಟ್ ಮಾಡಿರುವ ಅವರು, ಸಾಲ ಮನ್ನಾದಿಂದ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಪ್ರಯೋಜನ ಸಿಗಬೇಕು. ಈ ನಿಟ್ಟಿನಲ್ಲಿ ಸಾಲ ಮನ್ನಾದ ಮಾದರಿಗಳ ಬಗ್ಗೆ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Working on modalities of farm loan waiver: Kumaraswamy

ಬಜೆಟ್ ನಲ್ಲಿ ಸಾಲಮನ್ನಾ ಘೋಷಿಸುತ್ತೇನೆ: ಕುಮಾರಸ್ವಾಮಿಬಜೆಟ್ ನಲ್ಲಿ ಸಾಲಮನ್ನಾ ಘೋಷಿಸುತ್ತೇನೆ: ಕುಮಾರಸ್ವಾಮಿ

"ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ," ಎಂದು ಸಾಲ ಮನ್ನಾ ಘೋಷಣೆಗಾದ ವಿಳಂಬದ ಬಗ್ಗೆ ಮುಖ್ಯಮಂತ್ರಿ ಟ್ಟೀಟ್ ಮಾಡಿದ್ದಾರೆ.

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ನಂತರ ರೈತ ನಾಯಕ ಸಭೆ ನಡೆಸಿ 15 ದಿನ ಕಾಲವಕಾಶ ಕೋರಿದ್ದು. ಈ ಅವಧಿಗೆ ನಿನ್ನೆಗೆ ಮುಗಿದಿದ್ದು, ಬಜೆಟ್ ನಲ್ಲಿ ಸಾಲ ಮನ್ನಾ ಘೋಷಿಸುವುದಾಗಿ ಹೇಳಿದ್ದಾರೆ.

ಸಾಲ ಮನ್ನಾದಿಂದ ಕುಮಾರಸ್ವಾಮಿ ಹಿಂದಕ್ಕೆ ಸರಿಯುತ್ತಾರೆ ಎಂಬ ಭಯ ರೈತ ಸಮುದಾಯದಲ್ಲಿದೆ. ಇದೇ ಸಂದರ್ಭದಲ್ಲಿ ಸಾಲ ಮನ್ನಾ ಮಾಡಲು ಬದ್ಧ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದ್ದಾರೆ.

English summary
Karnataka Chief Minister HD Kumaraswamy said his government is working on the modalities of farm loan waivers. Taking to Twitter, the Chief Minister said the government is looking to develop a scientifically-procured process so that farmers can reap the maximum benefit from the loan waiver.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X