ಜಗದ್ವಿಖ್ಯಾತ ಗಣಿತಶಾಸ್ತ್ರಜ್ಞ ಎಂ ಆರ್ ಎಸ್ ರಾವ್ ನಿಧನ: ಸಿಎಂ ಸಂತಾಪ
ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಮೆರಿಕಾದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಸಿ.ಆರ್ ರಾವ್ ಅವರಿಗೆ 102 ವರ್ಷ ವಯಸ್ಸಾಗಿತ್ತು.
ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದರು. ಸಿ.ಆರ್ ರಾವ್ ಅವರು ಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಣಿತರಾಗಿದ್ದರು.

ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ 'ಪದ್ಮವಿಭೂಷಣ' ಮಾತ್ರವಲ್ಲದೆ, 'ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ - 2023', 'ನ್ಯಾಷನಲ್ ಮೆಡಲ್ ಆಫ್ ಸೈನ್ಸ್' ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು.
ರಾವ್ ರವರು 1943 ರಲ್ಲಿ ಆಂಧ್ರ ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರದಲ್ಲಿ ಎಂ.ಎಸ್ಸಿ. ಮತ್ತು ಕಲ್ಕತ್ತಾ ಯುನಿವರ್ಸಿಟಿಯಲ್ಲಿ ಎಮ್.ಎ ಪದವಿಯನ್ನು ಪಡೆದರು. 1948 ರಲ್ಲಿ ಆರ್.ಎ.ಫಿಶರ್ ಅವರ ನೇತೃತ್ವದಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಕಿಂಗ್ಸ್ ಕಾಲೇಜಿನಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದರು. ೧೯೬೫ ರಲ್ಲಿ ಕೇಂಬ್ರಿಡ್ಜ್ ನಿಂದ ಇವರು ಎಸ್‌ಸಿ.ಡಿ ಪದವಿಯನ್ನು ಪಡೆದರು. ಬಳಿಕ ಕೇಂಬ್ರಿಡ್ಜ್ ನಿಂದ ಇವರು ಎಸ್‌ಸಿ.ಡಿ ಪದವಿಯನ್ನು ಪಡೆದರು.
ರಾವ್ ರವರು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ಮತ್ತು ಕೇಂಬ್ರಿಡ್ಜ್ ನ ಮಾನವಶಾಸ್ತ್ರದ ಮ್ಯೂಸಿಯಂನಲ್ಲಿ ಕೆಲಸ ಮಾಡಿದ್ದು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ನ ನಿರ್ದೇಶಕ, ಜವಹರಲಾಲ್ ನೆಹರೂ ಪ್ರಾಧ್ಯಾಪಕ ಮತ್ತು ಭಾರತದ ರಾಷ್ಟ್ರೀಯ ಪ್ರೊಫೆಸರ್, ಪಿಟ್ಸ್‌ಬರ್ಗ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಅಂಕಿಅಂಶಗಳ ಅಧ್ಯಕ್ಷರು ಪೆನ್ಸಿಲ್ವೇನಿಯಾ ಸ್ಟೇಟ್ ಯುನಿವರ್ಸಿಟಿಯ ಮಲ್ಟಿವೇರಿಯೇಟ್ ಅನಾಲಿಸಿಸ್ ಕೇಂದ್ರದ ನಿರ್ದೇಶಕರಾಗಿದ್ದು ಹೀಗೆ ಇವರು ಹಲವಾರು ಪ್ರಮುಖ ಸ್ಥಾನಗಳನ್ನು ಹೊಂದಿದ್ದರು.
ಎಂ ಆರ್ ಎಸ್ ರಾವ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ 'ಪದ್ಮವಿಭೂಷಣ' ಮಾತ್ರವಲ್ಲದೆ, 'ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ - 2023', 'ನ್ಯಾಷನಲ್ ಮೆಡಲ್ ಆಫ್ ಸೈನ್ಸ್' ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications