Breaking; ಹೈಕಮಾಂಡ್ ತಾಳಕ್ಕೆ ಕುಣಿಯುವ ಬಿಜೆಪಿ, ಜೆಡಿಎಸ್ ಟ್ವೀಟ್ ಬಾಣ
ಬೆಂಗಳೂರು, ಜನವರಿ 10; 'ಹೈಕಮಾಂಡ್ ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ ಬಿಜೆಪಿ ಕರ್ನಾಟಕದವರೇ ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು' ಎಂದು ಜೆಡಿಎಸ್ ಟ್ವೀಟ್ ಮೂಲಕ ಟೀಕೆ ಮಾಡಿದೆ.
ಮಂಗಳವಾರ ಜೆಡಿಎಸ್ #ವಿಶ್ವಹಿಂದಿದಿವಸನಿಲ್ಲಿಸಿ, #StopWorldHindiDay ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ಸರಣಿ ಟ್ವೀಟ್ ಮಾಡಿದೆ. ಬಿಜೆಪಿ ನಾಯಕರ ಹಿಂದಿ ಪ್ರೇಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಹಿಂದಿ ಭಾಷಿಕ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? @BJP4India ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ @BJP4Karnataka ದವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು.
— Janata Dal Secular (@JanataDal_S) January 10, 2023
4/5
ಜೆಡಿಎಸ್ ಪಕ್ಷ ಟ್ವೀಟ್‌ನಲ್ಲಿ, 'ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ' ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ, ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಧಿಕ್ಕಾರವೇ ಸೈ ಎಂದು ಹೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ, 'ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ @BJP4Karnataka ದವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ 'ಬೆನ್ನು ಮೂಳೆ' ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ' ಎಂದು ತಿಳಿಸಿದೆ.
'ಹಿಂದಿ ಭಾಷಿಕ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? @BJP4India ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ @BJP4Karnataka ದವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು' ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕನ್ನಡ, ಕರ್ನಾಟಕದ ನೆಲ, ಜಲ, ಭಾಷೆ ಪರವಾಗಿ ಜೆಡಿಎಸ್ ಸದಾ ಧ್ವನಿ ಎತ್ತುತ್ತಿದೆ. ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿಕೊಂಡು ಬಂದಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಾಣೆಯಾದಾಗ ಆ ಕುರಿತು ಸಹ ಸರ್ಕಾರದ ಕಿವಿ ಹಿಂಡುವ ಕಾರ್ಯ ಮಾಡಿದೆ.












Click it and Unblock the Notifications