ಹಿಂದಿ ಸಮರ್ಥನೆ: ಸಾಹಿತಿ ದೊಡ್ಡರಂಗೇಗೌಡ ಕ್ಷಮಾಪಣೆ
ಬೆಂಗಳೂರು, ಜನವರಿ 27: ಹಿಂದಿ ಭಾಷೆಯ ಬಳಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ತುತ್ತಾಗಿದ್ದ ಹಿರಿಯ ಕವಿ, 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡ ಅವರು ತಮ್ಮ ಹೇಳಿಕೆಗೆ ಕ್ಷಮಾಪಣೆ ಕೋರಿದ್ದಾರೆ.
ಮುಂದಿನ ತಿಂಗಳು ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡರಂಗೇಗೌಡ ಅವರು, ಕನ್ನಡ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಿಂದಿ ರಾಷ್ಟ್ರಭಾಷೆ ಎಂದು ಹೇಳಿಕೆ ನೀಡಿದ್ದರು. ವಿದೇಶದ ಇಂಗ್ಲಿಷ್‌ಅನ್ನು ಒಪ್ಪುವುದಾದರೆ ದೇಶದ್ದೇ ಆದ ಭಾಷೆಗೆ ವಿರೋಧ ಏಕೆ. ಇದು ಅರ್ಥವಾಗದ ಸಂಗತಿ ಎಂದಿದ್ದರು. ಬಳಿಕ ಬೇರೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿಯೂ ಅವರು ಹಿಂದಿ ಭಾಷೆಯ ಹೇರಿಕೆಯಾಗುತ್ತಿಲ್ಲ. ಹಿಂದಿಗೆ ಮಹತ್ವ ನೀಡುವುದರಲ್ಲಿ ತಪ್ಪಿಲ್ಲ ಎಂದಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿಯಂತಹ ಮಹತ್ವದ ಗೌರವ ಪಡೆದುಕೊಂಡ ವ್ಯಕ್ತಿ, ಹಿಂದಿ ಹೇರಿಕೆಯಿಂದ ಆಗುತ್ತಿರುವ ಸಮಸ್ಯೆಗಳು, ಕನ್ನಡ ಭಾಷೆಯ ಮೇಲಾಗುತ್ತಿರುವ ದಬ್ಬಾಳಿಕೆ ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ಅರಿತುಕೊಳ್ಳದೆ, ಹಿಂದಿಯನ್ನು ರಾಷ್ಟ್ರಭಾಷೆ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅನೇಕರು ಟೀಕಿಸಿದ್ದರು. ಮುಂದೆ ಓದಿ.

ಕನ್ನಡವನ್ನು ಆರಾಧಿಸುತ್ತೇನೆ
ಅದಕ್ಕೆ ತಮ್ಮದೇ ಕೈ ಬರಹದಲ್ಲಿ ಕ್ಷಮಾಪಣೆ ಹಾಗೂ ಸ್ಪಷ್ಟನೆ ನೀಡಿರುವ ದೊಡ್ಡರಂಗೇಗೌಡರ ಪತ್ರ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. 'ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ-ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ' ಎಂದು ಅವರು ತಿಳಿಸಿದ್ದಾರೆ.

ಕ್ಷಮೆ ಯಾಚಿಸುತ್ತೇನೆ
'ಕನ್ನಡಿಗರ ಮೇಲೆ ಹಿಂದಿ ಭಾಷೆಯ ಮತ್ತು ಇಂಗ್ಲಿಷ್ ಹೇರಿಕೆಯ ರೀತಿ-ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ' ಎಂದು ದೊಡ್ಡರಂಗೇಗೌಡ ತಿಳಿಸಿದ್ದಾರೆ.

ಹಿಂದಿಯನ್ನು ತಿರಸ್ಕರಿಸುವುದು ಏಕೆ?
ಇಂಗ್ಲೀಷಿಗೆ ನಾವು ಮಣೆ ಹಾಕುತ್ತೇವೆ. ಹಿಂದಿಯನ್ನು ಏಕೆ ತಿರಸ್ಕಾರ ಮಾಡಬೇಕು. ಹಿಂದಿ ನಮ್ಮ ರಾಷ್ಟ್ರ ಭಾಷೆ, ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಹೆಚ್ಚಿನ ಸ್ಥಾನಮಾನವಿದೆ ಎಂದು ಹೇಳಿದ್ದಾರೆ. ಇಂಗ್ಲೀಷ್ ಒಪ್ಪುವ ನಾವು, ಹಿಂದಿ ಭಾಷೆಯನ್ನು ಏಕೆ ಒಪ್ಪಿಕೊಳ್ಳಬಾರದು ಎಂದು ದೊಡ್ಡರಂಗೇಗೌಡ ಪ್ರಶ್ನಿಸಿದ್ದರು.
Recommended Video

ಯಾವ ದೇಶಕ್ಕೆ ರಾಷ್ಟ್ರಭಾಷೆ?
ಹಿಂದಿ ಯಾವ ದೇಶಕ್ಕೆ ರಾಷ್ಟ್ರಭಾಷೆ? ಭಾರತದಲ್ಲಿರುವ ಎಲ್ಲವೂ ರಾಷ್ಟ್ರಭಾಷೆಗಳೇ. ದೊಡ್ಡರಂಗೇಗೌಡರಿಗೆ ಕನ್ನಡ ಎದುರಿಸುತ್ತಿರುವ ಸವಾಲು ಅರ್ಥವಾಗುತ್ತಿಲ್ಲ. ಅಥವಾ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮರೆತಿದ್ದಾರೆ. ಕನ್ನಡಕ್ಕೆ ಸಂಚಕಾರ ಬರುತ್ತಿರುವುದು ಹಿಂದಿಯಿಂದಲೇ ಹೊರತು ಇಂಗ್ಲಿಷ್‌ನಿಂದ ಅಲ್ಲ. ಕರ್ನಾಟಕದ ಎಲ್ಲ ಕಡೆಯೂ ಹಿಂದಿಯವರು ತುಂಬಿಕೊಳ್ಳುತ್ತಿದ್ದಾರೆ. ಹಿಂದಿಯಿಂದ ಆಗುತ್ತಿರುವ ಆಕ್ರಮಣದ ಬಗ್ಗೆ ದನಿ ಎತ್ತಬೇಕಾದವರೇ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications