H S Venkatesh Murthy: 'ಮರೆಯಾದ ಭಾವ ಗೀತೆಗಳ ಭಾವ' ಎಚ್‌ಎಸ್‌ವಿ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು, ಮೇ 30: ಕನ್ನಡ ಅಕ್ಷರ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರು ಇಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಳಗ್ಗೆ ಕೆಂಗೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಗಮ ಸಂಗೀತ ಕ್ಷೇತ್ರದಲ್ಲೂ ಸಕ್ರಿಯವಾಗಿದ್ದ ಇವರು 'ಎಚ್‌ಎಸ್‌ವಿ' ಎಂದೇ ಹೆಸರುವಾಸಿಯಾದವರು. ಅವರ ಅಗಲಿಕೆಗೆ ಆಪ್ತ ಬಳಗ, ಗಣ್ಯರು, ಸಾಹಿತ್ಯಾಸಕ್ತರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು, ಕನ್ನಡದ ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ತಮ್ಮ ಕವನಗಳ ಮೂಲಕ ನಾಡಿನ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಅವರು ಟ್ವೀಟ್ (ಎಕ್ಸ್) ಮಾಡಿದ್ದಾರೆ.

85 ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾದಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ, ಓಂ ಶಾಂತಿಃ ಎಂದು ಪ್ರಾರ್ಥಿಸಿದ್ದಾರೆ.
'ಮರೆಯಾದ ಭಾವ ಗೀತೆಗಳ ಭಾವ'
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು, 'ಮರೆಯಾದ ಭಾವಗೀತೆಗಳ ಭಾವ'. ಅಗಲಿದ ಕಾವ್ಯ ಚೇತನ ಡಾ.ಹೆಚ್ ಎಸ್ ವೆಂಕಟೇಶಮೂರ್ತಿ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಅವರ ನಿಧನ ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿದೆ ಎಂದು ಹೇಳಿದ್ದಾರೆ.
ಡಾ. ಎಚ್ಎಸ್ ವಿ ಅವರ ನಿಧನದ ಸುದ್ದಿ ಬಂದ ಕೂಡಲೇ ದಿಗ್ಭ್ರಮೆ ಆಯಿತು. ಕನ್ನಡ ಸಾಹಿತ್ಯದ ಕಾವ್ಯ ಪರಂಪರೆಗೆ ಹೊಸ ಭಾಷ್ಯ ಬರೆದ ಕವಿ ಎಚ್ಎಸ್ ವಿ ಅವರು. ಸದಾ ನಮ್ಮ ಕಿವಿಗಳಲ್ಲಿ ಅನುರಣಿಸುವ ಅವರ ಗೀತೆಗಳು ಸೊಗಸು ಅನನ್ಯವಾಗಿದೆ. ಅದು ತೂಗು ಮಂಚದಲ್ಲಿ, ಅಮ್ಮ ನಾನು ದೇವರಾಣೆ, ಲೋಕದ ಕಣ್ಣಿಗೆ ರಾಧೆಯು ಕೂಡ, ಹುಚ್ಚು ಕೋಡಿ ಮನಸು, ಇಂತಹ ಯಾವುದೇ ಗೀತೆಗಳು ನಮ್ಮನ್ನು ಬೇರೊಂದು ಲೋಕದ ಭಾವಲಹರಿಗೆ ಕೊಂಡೊಯ್ಯುತ್ತವೆ.
ಇಂತಹ ಗೀತೆಗಳನ್ನು ಕೊಟ್ಟ ಕವಿ ನಮ್ಮನ್ನು ಇಂದು ಅಗಲಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಡಾ. ಎಚ್ ಎಸ್ ವಿ ಬರೀ ಕವಿಯಾಗಿಯಲ್ಲ, ನಾಟಕಕಾರರಾಗಿ, ಅಂಕಣಕಾರರಾಗಿ, ಅನುವಾದ ,ಶಿಶು ಸಾಹಿತ್ಯ, ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ತಮ್ಮ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ಬುದ್ಧ ಚರಣ ಮಹಾ ಕಾವ್ಯದ ಮೂಲಕ ಅವರು ಸಾಹಿತ್ಯದ ಮತ್ತೊಂದು ಮಜಲನ್ನು ಸ್ಪರ್ಶಿಸಿದ್ದಾರೆ ಎಂದು ಕವಿಗಳ ಕಾರ್ಯ ಸ್ಮರಿಸಿದರು.
ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ನೂರಾರು ಗೌರವ ಸನ್ಮಾನಗಳಿಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮಹತ್ವದ ಚೇತನವೊಂದನ್ನು ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ವಿಶಿಷ್ಟ ಬರಹಗಾರ: ಅಲಿಕೆಯಿಂದ ಸಾರಸ್ವತ ಲೋಕ ಬಡ
ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ನಗುತ ಹುಟ್ಟಿ ನಗುತ ಮುಗಿವ ನಗುವ ಹೂವೆ ಮಾದರಿ
ಕನ್ನಡ ಸಾಹತ್ಯ ಲೋಕ ಶ್ರೀಮಂತಿಕೆಯನ್ನು ಭಾವಗೀತೆಗಳ ಮೂಲಕ ಹೆಚ್ಚಿಸಿದ ಹಿರಿಯ ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರು. ಎಚ್‌ಎಸ್‌ವಿ ಎಂದೇ ಜನಜನಿತರಾಗಿದ್ದ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ಕನ್ನಡದಲ್ಲಿ ಕಾದಂಬರಿ, ಕತೆ, ವಿಮರ್ಶೆ, ಕವನ, ಮಕ್ಕಳ ಸಾಹಿತ್ಯ, ಸಿನಿಮಾ ಸಾಹಿತ್ಯ, ರಂಗಭೂಮಿ ಹೀಗೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲೂ ಎಚ್ಚೆಸ್ವಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಅಪಾರ ಅಭಿಮಾನಿ ವರ್ಗಕ್ಕೆ, ಕುಟುಂಬಕ್ಕೆ, ಆಪ್ತರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಅಪರೂಪದ ಕೊಡುಗೆ ನೀಡಿದ ಸಾಹಿತಿ: ಎಂಬಿ ಪಾಟೀಲ್
ಕನ್ನಡದ ಖ್ಯಾತ ಕವಿ, ನಾಟಕಕಾರ ಹಾಗೂ ಸಾಹಿತಿ ಪ್ರೊ. ಎಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದೆ. ಸಾಹಿತ್ಯಿಕ ಕೃತಿಗಳ ಮೂಲಕ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಷ್ಟು ಮಾತ್ರವಲ್ಲದೇ ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ ಮೊದಲಾದ ಪ್ರಕಾರಗಳಲ್ಲಿ ಅವರ ಸೇವೆ ಮಹತ್ವದ್ದಾಗಿದ. ಅವರ ನಿಧನದಿಂದ ನಮ್ಮ ಸಾಹಿತ್ಯ ವಲಯಕ್ಕೆ, ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ತಿಳಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications