• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಚ್‌ಎಸ್‌ವಿಗೆ ಒಲಿದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ

|

ಬೆಂಗಳೂರು, ಡಿಸೆಂಬರ್ 4; ಹಿರಿಯ ಸಾಹಿತಿ ಡಾ.ಎಚ್ ಎಸ್ ವೆಂಕಟೇಶಮೂರ್ತಿ ಅವರು ಮುಂದಿನ ವರ್ಷ ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು. 2020 ಫೆಬ್ರುವರಿ 5, 6 ಮತ್ತು 7 ರಂದು ಶರಣರ ನಾಡು ಕಲಬುರಗಿಯಲ್ಲಿ, ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?

ಸದ್ಯ ಬೆಂಗಳೂರಿನಲ್ಲಿ ನೆಲಸಿರುವ, ಕನ್ನಡದ ಪ್ರಮುಖ ಕವಿ, ಕಥೆಗಾರ, ನಾಟಕಕಾರ ಡಾ ಎಚ್ ಎಸ್ ವೆಂಕಟೇಶಮೂರ್ತಿ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದವರು. ತಂದೆ ನಾರಾಯಣ ಭಟ್ಟ್ರು, ತಾಯಿ ನಾಗರತ್ನಮ್ಮ.

76 ವಯಸ್ಸಿನ ಎಚ್ ಎಸ್ ವೆಂಕಟೇಶಮೂರ್ತಿ ಅವರು, ಕನ್ನಡ ಸಾರಸ್ವತ ಲೋಕದಲ್ಲಿ ಎಚ್‌ಎಸ್‌ವಿ ಮೇಷ್ಟ್ರು ಎಂದೇ ಜನಜನಿತರಾಗಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಪ್ ಕಾಮರ್ಸ್ ಕಾಲೇಜಿನಲ್ಲಿ ದಶಕಗಳ ಕಾಲ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ಕಟ್ಟುವ ಕಾಯಕದಲ್ಲಿ ಇಂದಿಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಈ ಹಿಂದೆ 1928 ರಲ್ಲಿ, 1949 ರಲ್ಲಿ ಹಾಗೂ 1987 ರಲ್ಲಿ ಕಲಬುರಗಿಯಲ್ಲಿ ಅಖಿಲ ಬಾರತ ಸಾಹಿತ್ಯ ಸಮ್ಮೇಳನ ನಡೆದಿದ್ದವು.. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು.

English summary
Writter H S Venkateshmurthy Appointed As 85th Kannada Litarary Fest President. its declred by KSP president manu baligar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X