ಯಾದಗಿರಿಯಲ್ಲಿ ಸಿಡಿಲು ಬಡಿದು ನಾಲ್ವರು ಸಾವು
ಯಾದಗಿರಿ, ಸೆಪ್ಟೆಂಬರ್ 28 : ಯಾದಗಿರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.
ತಾಲೂಕಿನ ಗೌಡಗೇರಾ ಗ್ರಾಮದ ಬಳಿ ಕುರಿ ಮೇಯಿಸಲು ತೆರಳಿದ್ದ ಕರೆಪ್ಪ (15), ನಾಗರಾಜ್ (6) ಮತ್ತು ಮೀನಾಕ್ಷಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಕುರಿತು ಸೈದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸುರಪುರ ತಾಲೂಕಿನ ಎಣ್ಣೆ ವಡಗೇರಾ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗಪ್ಪ ಹೊಸಮನಿ (40) ಎಂದು ಗುರುತಿಸಲಾಗಿದೆ.
ಗಾಯಗೊಂಡ ಮೂವರನ್ನು ಬಾಗಾಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ. ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರ ಸಾವು : ರಾಯಚೂರು ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಚಂದ್ರಮ್ಮ (35), ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ದಾಟನಾಳ ಗ್ರಾಮದ ರಾಮಪ್ಪ (40) ಸಿಡಿಲು ಬಡಿದು ಮೃತಪಟ್ಟಿದ್ದಾರೆ.












Click it and Unblock the Notifications