ಕಾಂಗ್ರೆಸ್ ತೊರೆಯುವ ಎ.ಬಿ.ಮಾಲಕ ರೆಡ್ಡಿ ಮುಂದಿನ ನಡೆ ಏನು?

Posted By: Gururaj
Subscribe to Oneindia Kannada

ಯಾದಗಿರಿ, ನವೆಂಬರ್ 16 : ಶಾಸಕ ಡಾ.ಎ.ಬಿ.ಮಾಲಕ ರಡ್ಡಿ ಕಾಂಗ್ರೆಸ್ ತೊರೆಯಲು ಸಿದ್ಧರಾಗಿದ್ದಾರೆ. ಯಾವ ಪಕ್ಷ ಸೇರುತ್ತಾರೆ? ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

ಸಿಎಂ ಮುಂದೆಯೇ ಪಕ್ಷ ತೊರೆಯುತ್ತೇನೆ ಅಂತ ಹೇಳಿ ಬಂದ್ರು!

ಈಗಾಗಲೇ ಕಾಂಗ್ರೆಸ್ ತೊರೆಯುವುದಾಗಿ ಯಾದಗಿರಿ ಶಾಸಕ ಎ.ಬಿ.ಮಾಲಕ ರಡ್ಡಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಮಾತುಕತೆಯೂ ಮುರಿದು ಬಿದ್ದಿದೆ.

Yadgir MLA AB Malakareddy may join BJP

ಮಾಲಕ ರಡ್ಡಿ ಅವರು ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಚಿವ ಸ್ಥಾನ ಸಿಗಲಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿಲ್ಲ ಮುಂತಾದ ವಿಚಾರಗಳಲ್ಲಿ ಮಾಲಕ ರಡ್ಡಿ ಅಸಮಾಧಾನಗೊಂಡಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಬಳಿಕ ಮಾಲಕ ರಡ್ಡಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆದರೆ, ಅವರು ಯಾವ ಪಕ್ಷ ಸೇರುತ್ತಾರೆ? ಎಂಬುದು ಅಂತಿಮವಾಗಿಲ್ಲ.

'ರಾಜಕೀಯ ನಿವೃತ್ತಿ ಪಡೆಯಬೇಕು ಎಂದಿದ್ದೇನೆ. ಆದರೆ, ಜನ ಚುನಾವಣೆ ಎದುರಿಸುವಂತೆ ಒತ್ತಾಯಿಸುತ್ತಿದ್ದಾರೆ. ಡಿಸೆಂಬರ್‌ನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ' ಎಂದು ಮಾಲಕ ರಡ್ಡಿ ಹೇಳಿದ್ದಾರೆ.

ಹಿರಿಯರಾದ ಮಾಲಕ ರಡ್ಡಿ ಅವರು ಅಪಾರವಾದ ರಾಜಕೀಯ ಅನುಭವ ಉಳ್ಳವರು. ಅವರನ್ನು ಪಕ್ಷಕ್ಕೆ ಸೆಳೆದರೆ ಯಾದಗಿರಿ ಜಿಲ್ಲೆಯಲ್ಲಿ ಪಕ್ಷದ ಬಲವೂ ಹೆಚ್ಚಲಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದ್ದರಿಂದ, ಬಿಜೆಪಿ ಸೇರುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Yadgir MLA A.B Malakareddy set to quit Congress. Malakareddy may join BJP .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ