Yaduveer Wadiyar: ಕೇರಳದವರ ಮೇಲೆ ಡಿಕೆಶಿ ವಿಶೇಷ ಪ್ರೀತಿ! ರಾಜ್ಯದ ಹಿತ ಕಾಪಾಡಿ ಎಂದ ಯದುವೀರ್

ಕರ್ನಾಟಕದ ಅರಣ್ಯ, ನೆಲ, ಜಲ, ಪ್ರಾಣಿ ಸಂಕುಲವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ. ಆದರೆ ಕೆಲವೊಮ್ಮೆ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ತೆಗೆದುಕೊಳ್ಳುವ ತೀರ್ಮಾನಗಳು ರಾಜ್ಯದ ಪ್ರಕೃತಿ ಸಂಪತ್ತನ್ನೇ ಹಾಳು ಮಾಡುತ್ತವೆ. ಇದೀಗ ಕರ್ನಾಟಕ ಉಪಮುಖ್ಯಮಂತ್ರಿ ಕೇರಳದಲ್ಲಿ ಚುನಾವಣಾ ಪ್ರಚಾರದಲ್ಲಿ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೂಡ ಡಿಕೆ ಶಿವಕುಮಾರ್ ಹೇಳಿಕೆಯನ್ನು ಖಂಡಿಸಿದ್ದಾರೆ.

ಕೇರಳ-ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ಬಂಡೀಪುರ ಅಭಯಾರಣ್ಯದ ಮಧ್ಯೆ ಹಾದುಹೋಗಿದ್ದು, ಇಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದೀಗ ಡಿಕೆ ಶಿವಕುಮಾರ್ ರಾತ್ರಿ ವೇಳೆ ವಾಹನ ಸಂಚಾರ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಕೇರಳ ವಯನಾಡಿನಲ್ಲಿ ಭರವಸೆ ನೀಡಿರುವುದು ರಾಜ್ಯದ ಜನತೆಗೆ ಆಘಾತ ಕೊಟ್ಟಿದೆ.

yaduveer wadiyar criticises dk shivakumar lift night travel ban kerala

ರಾಜ್ಯದ ಹಿತಾಸಕ್ತಿ ಬಲಿಕೊಡಬೇಡಿ

ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿರುವ ಸಂಸದ ಯದುವೀರ್ ಒಡೆಯರ್ ಇಂತಹ ಬೇಜವಾಬ್ದಾರಿ ಹೇಳಿಕೆ ಕೊಡಬೇಡಿ ಎಂದು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು. ವಯನಾಡ್ ಉಪಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ನಮ್ಮ ರಾಜ್ಯದ ನೈಸರ್ಗಿಕ ಸಂಪತ್ತಾದ ಬಂಡಿಪುರ ಅಭಯಾರಣ್ಯದ ಮಧ್ಯೆ ಹಾದು ಹೋಗುವ ಎನ್‌ಎಚ್ 766 ರ ರಾತ್ರಿ ಪ್ರಯಾಣ ನಿಷೇಧವನ್ನು ತೆಗೆದುಹಾಕುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇತ್ತೀಚೆಗೆ ಕೇರಳದಲ್ಲಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ ಎಂದು ಹೇಳಿದ್ದಾರೆ.

ಬಂಡೀಪುರದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ವೈವಿಧ್ಯತೆಯು ಅದರೊಳಗೆ ಅಭಿವೃದ್ಧಿ ಹೊಂದುತ್ತಿರುವ ವಿವಿಧ ಪ್ರಭೇದಗಳ ವನ್ಯಜೀವಿಗಳಿಗೆ ಸೇರಿದ ಸಂಪತ್ತು. ಈ ಅಭಯಾರಣ್ಯದ ಮೂಲಕ ರಾತ್ರಿ ಪ್ರಯಾಣಕ್ಕೆ ಅವಕಾಶ ನೀಡುವುದರಿಂದ ವನ್ಯಜೀವಿಗಳಿಗೆ ಅಪಾಯವಿದೆ ಮತ್ತು ಮಾನವ-ವನ್ಯಜೀವಿ ಸಂಘರ್ಷಕ್ಕೆ ಇದು ಎಡೆ ಮಾಡಿಕೊಡುತ್ತದೆ.

ಬೇರೆ ರಾಜ್ಯದಲ್ಲಿನ ಚುನಾವಣಾ ಲಾಭಕ್ಕಾಗಿ ಕರ್ನಾಟಕದ ವನ್ಯಜೀವಿಗಳಿಗೆ ಧಕ್ಕೆ ತರುವುದು ಸಮಂಜಸವಲ್ಲ. ನಮ್ಮ ಸರ್ಕಾರವು ಈ ಪರಿಸರ ವಲಯಗಳ ರಕ್ಷಣೆಯ ನಿಟ್ಟಿನಲ್ಲಿ ಯಾವುದೆ ರಾಜಿ ಮಾಡಿಕೊಳ್ಳದೆ ರಕ್ಷಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಎನ್‌ಎಚ್ 766 ರಲ್ಲಿ ರಾತ್ರಿ ಪ್ರಯಾಣ ನಿಷೇಧಿಸಲು ಕೇರಳ ಲಾಭಿ ಮೊದಲಿನಿಂದಲೂ ಕೆಲಸ ಮಾಡುತ್ತಿದೆ. ವಯನಾಡಿನಲ್ಲಿ ಇದೀಗ ಲೋಕಸಭಾ ಉಪ ಚುನಾವಣೆ ನಡೆಯುತ್ತಿದ್ದು ಪ್ರಿಯಾಂಕ ಗಾಂಧಿ ಪರವಾಗಿ ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ತೆರಳಿದ್ದು ಅಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+