ಬಾನು ಮುಷ್ತಾಕ್ ದಸರಾ ಉದ್ಘಾಟನೆಗೂ ಮುನ್ನ ಸ್ಪಷ್ಟನೆ ನೀಡಲಿ: ಸಂಸದ ಯದುವೀರ್ ಯೂಟರ್ನ್
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರವಾಗಿ ಪರ-ವಿರೋಧದ ಚರ್ಚೆಗಳು ಜೋರಾಗಿವೆ. ಬಿಜೆಪಿ ನಾಯಕರು ಬಾನು ಅವರು ಉದ್ಘಾಟನೆ ಮಾಡುವುದು ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರೂ ಆದ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದರು. ಇದು ಬಿಜೆಪಿಯವರ ಮುಖಭಂಗಕ್ಕೂ ಕಾರಣವಾಗಿತ್ತು. ಇದೀಗ ಯದುವೀರ್ ಒಡೆಯರ್ ಯೂಟರ್ನ್ ಹೊಡೆದಿದ್ದು, ದಸರಾ ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್ ಅವರು ಈ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಯದುವೀರ್ ಒಡೆಯರ್, 'ಶ್ರೀಮತಿ ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ. ಆದರೆ, ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ' ಎಂದು ಹೇಳಿದ್ದಾರೆ.

'ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವ. ಈ ಪವಿತ್ರ ಪರಂಪರೆಯನ್ನು ಗಮನಿಸಿದರೆ, ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಬಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ' ಎಂದು ಆಗ್ರಹಿಸಿದ್ದಾರೆ.
ಸರ್ಕಾರದ ನಿರ್ಧಾರ ಸರಿ ಎಂದಿದ್ದ ಯದುವೀರ್
ಮೈಸೂರು ಬಿಜೆಪಿ ಸಂಸದ ಹಾಗೂ ರಾಜವಂಶಸ್ಥರೂ ಆಗಿರುವ ಯದುವೀರ್ ಒಡೆಯರ್ ಅವರು 'ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿರುವುದು ಸ್ವಾಗತಾರ್ಹ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಸರಿ ಇದೆ' ಎಂದಿದ್ದರು. 'ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದು, ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು ಹಾಗೂ ಮಸೀದಿಗಳಿಗೆ ಅವಕಾಶ ಕೋಡಬೇಕೆಂದು ಬಾನು ಮುಷ್ತಾಕ್ ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಸಹ ಎದುರಿಸಿದ್ದರು. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ, ನಾವು ಅದನ್ನ ಗೌರವಿಸುತ್ತೇವೆ. ರಾಜ್ಯ ಸರ್ಕಾರ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವುದನ್ನ ಸ್ವಾಗತಿಸುತ್ತೇನೆ' ಎಂದಿದ್ದರು.
ಹಲವು ಬಿಜೆಪಿ ನಾಯಕರು ಬಾನು ಮುಷ್ತಾಕ್ ಬದಲಿಗೆ ಬೇರೆಯವರನ್ನು ಉದ್ಘಾಟಕರಾಗಿ ಮಾಡಿ ಎಂಬ ಕೂಗು ಎತ್ತಿದ್ದಾರೆ. ಹಿಂದೂ ದೇವರ ಈ ಕಾರ್ಯವನ್ನು ಮುಸ್ಲಿಂ ಸಮುದಾಯದ ಬಾನು ಅವರಿಂದ ಮಾಡಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಯದುವೀರ್ ಅವರ ಹೇಳಿಕೆಯು ಬಿಜೆಪಿ ನಾಯಕರಿಗೆ ತೀವ್ರ ಮುಖಭಂಗಕ್ಕೆ ಕಾರಣವಾಗಿತ್ತು. ಇದೀಗ ದಿಢೀರ್‌ನೆ ಅವರು ಕೂಡ ತಮ್ಮ ಹೇಳಿಕೆ ಬದಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications