ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ: ಪ್ರತಾಪ್‌ ಸಿಂಹ ಹೀಗೆ ಹೇಳಿದ್ಯಾಕೆ?

ಮೈಸೂರು, ಜನವರಿ 09: ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್‌ ಕೊಟ್ಟಿದ್ದಾರೆ.

ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ನಾನು ಖಂಡಿತವಾಗಿಯೂ ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ.

Yathindra Siddaramaiah Is The True National Leader Pratap Simha Said

ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್‌ಗೆ ಗುತ್ತಿಗೆ ಪಡೆಯುವವರು ನ್ಯಾಷನಲ್ ಲೀಡರ್ ಎಂದು ಟೀಕಿಸಿದ ಅವರು, ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್, ತಾನು ಹೇಳಿದ ವರ್ಗಾವಣೆ ಲಿಸ್ಟ್‌ಗೆ ಸಹಿ ಮಾಡಿ ಅಂತ ಮುಖ್ಯಮಂತ್ರಿ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೇ ಕಾಂಗ್ರೆಸ್ ಎಂಬ ಕೈ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್‌ ಸಿಂಹ ಅವರು, ರಾಮನನ್ನು ಕಾಂಗ್ರೆಸಿಗರೆ ಭಕ್ತಿ ಭಾವದಿಂದ ಪೂಜಿಸಿದ್ದರೆ ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು? ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟಾ ಎಂದು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ ? ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

ಅಯೋಧ್ಯೆ ಮಂತ್ರಾಕ್ಷತೆಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ ಹೋಗುವುದು ಬಿಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+