Get Updates
Get notified of breaking news, exclusive insights, and must-see stories!

ತಂದೆಯ ಮುಂದೆ ಪರಿಷತ್ ಸದಸ್ಯರಾಗಿ ಡಾ. ಯತೀಂದ್ರ ಪ್ರಮಾಣ ವಚನ

ಬೆಂಗಳೂರು, ಜೂನ್ 24: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ 11 ಮಂದಿ ಸದಸ್ಯರ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಸೋಮವಾರ ನಡೆಯಿತು. ಡಾ. ಯತೀಂದ್ರ ಸಿದ್ದರಾಮಯ್ಯ ಪರಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸೋಮವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು & ಸಂಸದೀಯ ವ್ಯವಹಾರ ಸಚಿವ ಎಚ್. ಕೆ. ಪಾಟೀಲ್ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಿದರು.

Yathindra Siddaramaiah Take Oath As Legislative Council Member

ವರುಣ ಕ್ಷೇತ್ರದ ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ತಂದೆ ಸಿದ್ದರಾಮಯ್ಯ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ತಂದೆಯಿಂದಲೇ ಸೂಟ್‌ಕೇಸ್‌ ಪಡೆದರು.

ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವಿಧಾನ ಪರಿಷತ್‌ಗೆ ಹೊಸದಾಗಿ ಆಯ್ಕೆಯಾದ 11 ಮಂದಿ ಸದಸ್ಯರ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂತನ ಸದಸ್ಯರಿಗೆ ಜನರ ದನಿಯಾಗಿ ಕೆಲಸ ಮಾಡುವಂತೆ ಸಲಹೆ ನೀಡಿ ಶುಭ ಕೋರಲಾಯಿತು ಎಂದು ಹೇಳಿದ್ದಾರೆ.

ಪರಿಷತ್ ಸದಸ್ಯರಾಗಿ ಆಯ್ಕೆ: ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್ ಸದಸ್ಯರಾಗಲು ಆಯ್ಕೆ ಮಾಡಿತ್ತು. ಈ ಮೂಲಕ 2023ರ ವಿಧಾನಸಭೆ ಚುನಾವಣೆಯಲ್ಲಿ ತಂದೆಗಾಗಿ ಕ್ಷೇತ್ರತ್ಯಾಗ ಮಾಡಿದ್ದ ಯತೀಂದ್ರಗೆ ಪಕ್ಷ ಉಡುಗೊರೆ ನೀಡಿತ್ತು.

ರಾಜಕೀಯಕ್ಕೆ ಬರುವ ಮೊದಲು ಯತೀಂದ್ರ ಸಿದ್ದರಾಮಯ್ಯ ತಮ್ಮದೇ ಖಾಸಗಿ ಡಯಗ್ನಾಸ್ಟಿಕ್ ಸಂಸ್ಥೆಯೊಂದನ್ನು ನಡೆಸುತ್ತಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದರು.

ವರುಣ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ
96,435 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಆದರೆ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರು. ಆದರೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿಯೂ ಕಣಕ್ಕಿಳಿದಿದ್ದ ಅವರು ಚುನಾವಣೆಯಲ್ಲಿ ಗೆದ್ದರು.

ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಮಾಡಲು ಬಯಸಿದರು. ಅವರು ಪುನಃ ವರುಣದಿಂದ ಕಣಕ್ಕಿಳಿಯಲು ತೀರ್ಮಾನಿಸಿದರು. ಆದ್ದರಿಂದ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ಕೈತಪ್ಪಿತು. ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಅವರನ್ನು ವಿಧಾನ ಪರಿಷತ್ ಸದಸ್ಯರಾಗಲು ಪಕ್ಷ ಅವಕಾಶ ನೀಡಿತು.

ತಂದೆ ಮುಖ್ಯಮಂತ್ರಿಯಾಗಿ ವಿಧಾನ ಪರಿಷತ್ ಸಭಾ ನಾಯಕರಾಗಿ ಕಲಾಪದಲ್ಲಿ ಪಾಲ್ಗೊಳ್ಳುತ್ತಾರೆ. ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯರಾಗಿ ಕಲಾಪದಲ್ಲಿ ಭಾಗವಹಿಸುತ್ತಾರೆ. ಈ ಮೂಲಕ ವಿಧಾನ ಪರಿಷತ್ ತಂದೆ-ಮಗನ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದ ಡಾ. ಯತೀಂದ್ರ ಶಾಸಕರಾಗಿ ಕೆಲಸ ಮಾಡಿದರು. ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ್ದ ಅವರು ಸದನದಲ್ಲಿ ಹಲವು ವಿಚಾರಗಳ ಕುರಿತು ಧ್ವನಿ ಎತ್ತಿದ್ದರು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗಲಿಲ್ಲ. ಈಗ ತಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಯತೀಂದ್ರಗೆ ವಿಧಾನ ಪರಿಷತ್ ಸದಸ್ಯರಾಗುವ ಅವಕಾಶ ಸಿಕ್ಕಿದೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಹೆಸರು ಕೇಳಿ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಈ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದಾಗ ಡಾ. ಯತೀಂದ್ರ ಸಿದ್ದರಾಮಯ್ಯಗೆ ಹೆಸರು ಘೋಷಣೆ ಮಾಡಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+