ಹೈಕಮಾಂಡ್‌ಗೆ ಠಕ್ಕರ್; ಹೊಸ ಪಕ್ಷದ ಹೆಸರು ಘೋಷಿಸಿದ ಯತ್ನಾಳ್: ಪಾರ್ಟಿ ಕಟ್ಟಲು 'ಕೈ' ಜೋಡಿಸಿದ್ದು ಯಾರ ಜೊತೆ ಗೊತ್ತಾ?
ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿರುವ ಹೆಸರು ಬಸವನಗೌಡ ಪಾಟೀಲ ಯತ್ನಾಳ್. ಇತ್ತೀಚೆಗೆ ಅವರು ತಮ್ಮದೇ ಹೊಸ ಪಕ್ಷದ ಘೋಷಣೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ, ಕುತೂಹಲಕ್ಕೆ ಕಾರಣರಾಗಿದ್ದಾರೆ. ಹಿಂದೂ ಫೈರ್ ಬ್ರ್ಯಾಂಡ್ , ಬಿಜೆಪಿ ಉಚ್ಛಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಹಿಂದಿನಿಂದಲೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ದ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪವನ್ನ ಮಾಡಿದ್ದರು.
ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್ ನೇಮಕ ಮಾಡಿದ ಬಳಿಕ ಯತ್ನಾಳ್ ಅವರು ಮತ್ತಷ್ಟು ಅಸಮಾಧಾನವನ್ನ ಹೊರ ಹಾಕಿದ್ರು. ಇದಾದ ಬಳಿಕ ಯತ್ನಾಳ್ ಅವರು ಬಹಳ ದಿನಗಳಿಂದ ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಕೊನೆಗೂ ಅವರು ತಮ್ಮದೇ ಪಕ್ಷವನ್ನು ಘೋಷಿಸುವ ಮೂಲಕ ಹೊಸ ರಾಜಕೀಯ ಪಯಣಕ್ಕೆ ಚಾಲನೆ ನೀಡಿದ್ದಾರೆ. ಹೊಸ ಪಕ್ಷದ ಹೆಸರು, ಚಿಹ್ನೆ ಮತ್ತು ಅದರ ಧ್ಯೇಯವಾಕ್ಯವನ್ನು ಬಹಿರಂಗಪಡಿಸಿರುವುದು ಕಾರ್ಯಕರ್ತರು ಮತ್ತು ಜನರಲ್ಲಿ ದೊಡ್ಡ ಕುತೂಹಲ ಮೂಡಿಸಿದ್ದು, ಬಿಜೆಪಿ ಹೈಕಮಾಂಡ್‌ಗೂ ಸಹ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ದ ವಿರೋಧಿ ಬಣವನ್ನ ಕಟ್ಟಿಕೊಂಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹಲವು ಅಸಮಾಧಾನಿತರು ಒಟ್ಟುಗೂಡಿ ಗುಪ್ತವಾಗಿ ಸಭೆಯನ್ನ ನಡೆಸುವ ಮೂಲಕ ವಿಜಯೇಂದ್ರ ಅವರ ವಿರುದ್ದ ಅಸಮಾಧಾನ ಹೊರ ಹಾಕಿದ್ರು. ಸ್ವಪಕ್ಷದವರ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ ಕಾರಣಕ್ಕೆ ಬಿಜೆಪಿ ಹೈಕಮಾಂಡ್ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಯತ್ನಾಳ್ ಅವರನ್ನ ಉಚ್ಚಾಟಿಸಿದೆ.
ಇದೀಗ ಉಚ್ಚಾಟನೆ ಬಳಿಕ ಸೈಲೆಂಟ್ ಆಗಿದ್ದ ಯತ್ನಾಳ್ ಅವರು ತಮ್ಮ ಪಕ್ಷವನ್ನ ಘೋಷಣೆಯ ಜೊತೆಗೆ ನೇರವಾಗಿ ಬಿಜೆಪಿ ಹೈಕಮಾಂಡ್‌ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. "ಜನರ ಧ್ವನಿಯನ್ನು ನಿರ್ಲಕ್ಷಿಸಿದರೆ, ನಮ್ಮ ಕಾರ್ಯಕರ್ತರ ಹಿತಾಸಕ್ತಿಯನ್ನು ಕಡೆಗಣಿಸಿದರೆ, ನಾವು ಬಲವಾದ ಪರ್ಯಾಯವನ್ನು ನಿರ್ಮಿಸುತ್ತೇವೆ ಎಂದು ಅವರು ಸ್ಪಷ್ಟವಾಗಿ ಘೋಷಿಸಿದ್ದಾರೆ. ಇದರಿಂದ ಬಿಜೆಪಿ ನಾಯಕತ್ವಕ್ಕೆ ಒಂದು ರೀತಿಯಲ್ಲಿ ಯತ್ನಾಳ್ ಸಂದೇಶ ರವಾನಿಸಿದ್ದಾರೆ.
ಹಿಂದೂ ಫೈರ್ ಬ್ರ್ಯಾಂಡ್ , ಬಿಜೆಪಿ ಉಚ್ಛಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೊಸ ಪಕ್ಷದ ಘೋಷಣೆ ರಾಜ್ಯ ಬಿಜೆಪಿಯಲ್ಲಿ ನಿಜಕ್ಕೂ ಹೊಸ ಬಿರುರಾಳಿ ಎಬ್ಬಿಸಿದೆ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಯತ್ನಾಳ್ ಅವರಿಗಿರುವ ಜನಪ್ರಿಯತೆ, ಹಿಂದೂ ಫೈರ್ ಬ್ರ್ಯಾಂಡ್, ಅವರ ಪ್ರಭಾವ ಮತ್ತು ಕಾರ್ಯಕರ್ತರ ನೆಟ್‌ವರ್ಕ್, ಮುಂದಿನ ಚುನಾವಣೆಗಳಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಹೊಸ ಪಕ್ಷದ ಘೋಷಣೆ ಮೂಲಕ ರಾಜಕೀಯ ವಲಯದಲ್ಲಿ ಯತ್ನಾಳ್ Vs BJP ಎಂಬ ಹೊಸ ಅಖಾಡ ಆರಂಭವಾಗಿದೆ. ಇಬ್ಬರ ಮಧ್ಯೆ ನಡೆಯಲಿರುವ ರಾಜಕೀಯ ಹೋರಾಟ ರಾಜ್ಯದ ಜನತೆಗೆ ಹೊಸ ಕುತೂಹಲ ತಂದುಕೊಟ್ಟಿದೆ.
ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ. ನಾವು ಪ್ರತಾಪ್ ಸಿಂಹ ಒಂದಾಗಿ ಹೊಸ ಸರ್ಕಾರ ತರುತ್ತೇವೆ. ಬಿಜೆಪಿಯವರು ನನ್ನ ಗೌರವಯುತವಾಗಿ ತೆಗೆದುಕೊಳ್ಳದಿದ್ರೆ ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ. ಹೊಸ ಪಕ್ಷದ ಗುರುತು JCB ಎಂದು ಘೋಷಿಸಿದ ಯತ್ನಾಳ್, ಸಿಎಂ ಸಿದ್ದರಾಮಯ್ಯ ಸರ್ಕಾರ ಔರಂಗಜೇಬ್ ಸರ್ಕಾರ. ಈ ಸರ್ಕಾರದಲ್ಲಿ ಸಾಬರಿಗೆ ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದೆ. ವಕ್ಫ್ ದೇಣಿಗೆ ಕೊಡುತ್ತಿರುವ ಮುಸ್ಲಿಂ ಸರ್ಕಾರ ಬೇಕಾ? ಕರ್ನಾಟಕಕ್ಕೆ ಒಬ್ಬ ಬುಲ್ಡೋಜರ್ ಬಾಬ ಬೇಕೋ ಹೇಳಿ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಲು ಬಿಡಲ್ಲ. ಇವರು ಕಟ್ಟಿದ ಮಸೀದಿಗಳು ಅಕ್ರಮ. ಇನ್ಮುಂದೆ ಕರ್ನಾಟಕದಲ್ಲಿ ಇದು ನಡೆಯಲ್ಲ. ನನಗೆ ಆಶೀರ್ವಾದ ಮಾಡಿದ್ರೆ ರಾಜ್ಯಾದ್ಯಂತ ಅಕ್ರಮ ಮಸೀದಿ ತೆರವುಗೊಳಿಸುತ್ತೇನೆ ಎಂದು ಹೇಳಿದರು.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications