ಸಿದ್ದಸಿರಿ ಎಥೆನಾಲ್ ಕೈಗಾರಿಕೆ: ಯತ್ನಾಳ್, ಈಶ್ವರ್ ಖಂಡ್ರೆ ನಡುವೆ ಮುಂದುವರೆದ ಸಮರ
ಬೀದರ್, ಸೆಪ್ಟೆಂಬರ್ 17: ಸಿದ್ದಸಿರಿ ಎಥೆನಾಲ್ ಕೈಗಾರಿಕೆ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಈಶ್ವರ್ ಖಂಡ್ರೆ ನಡುವೆ ಶೀತನ ಸಮರ ಮುಂದುವರೆದಿದೆ. ಗುಲ್ಬರ್ಗಾ ಜಿಲ್ಲೆ ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸಕ್ಕರೆ ಮತ್ತು ಡಿಸ್ಟಿಲರಿ ಕಾರ್ಖಾನೆ ಪ್ರಕರಣ ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿದೆ, ಈ ಹಂತದಲ್ಲಿ ರೈತರಿಂದ ಪ್ರತಿಭಟನೆ ಮಾಡಿಸಿ, ಒತ್ತಡ ಹೇರುವುದು ಸರಿಯಾದ ಕ್ರಮವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬಿಜೆಪಿ ಶಾಸಕರಿಗೆ ನ್ಯಾಯಾಲಯದ ಮೇಲೆ ಗೌರವ ಇದ್ದರೆ ತೀರ್ಪು ಬರುವ ತನಕ ಕಾಯಬೇಕು, ಸುಪ್ರೀಂಕೋರ್ಟ್ ಕಾರ್ಖಾನೆಗೆ ಅನುಮತಿ ನೀಡುವಂತೆ ಸೂಚಿಸಿದರೆ ಸರ್ಕಾರ ಅನುಮತಿ ನೀಡುತ್ತದೆ, ಇದರಲ್ಲಿ ರಾಜಕೀಯ ದ್ವೇಷದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ ಪಿಸಿಬಿ) ಈ ಪ್ರಕರಣದಲ್ಲಿ ರಾಜ್ಯ ಘನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಯತ್ನಾಳ್ ಅವರಿಗೆ ಸೇರಿದ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಗಮ (ಎಸ್ಎಸ್ಎಸ್ಎನ್) ಕಾನೂನು, ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಾಚರಣೆ ಮಾಡಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ, ಬಿಜೆಪಿ ಶಾಸಕರಿಗೆ ಪ್ರತ್ಯೇಕ ಕಾನೂನು ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಾರ್ಯಾಚರಣೆ ಸಮ್ಮತಿ ಪತ್ರ (ಸಿ.ಎಫ್.ಓ.) ಪಡೆಯದೆ ಕೈಗಾರಿಕೆ ನಡೆಸಿರುವುದು ಕಾನೂನು ಬದ್ಧವೇ ಎಂದು ಪ್ರಶ್ನಿಸಿರುವ ಖಂಡ್ರೆ, ಕಾರ್ಖಾನೆ ಪೂರ್ವಾನುಮತಿ ಇಲ್ಲದೆ ತನ್ನ ಸಾಮರ್ಥ್ಯ ವಿಸ್ತರಣೆ ಮಾಡಿ ಕಾನೂನು ಬಾಹಿರವಾಗಿ ಕಾರ್ಯಾಚರಣೆ ನಡೆಸಿರುವ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಇಲಾಖೆಯೇ 1.58 ಕೋಟಿ ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.
ಕಾನೂನು ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯದ ಮೊರೆ ಹೋಗುವುದರಲ್ಲಿ ತಪ್ಪೇನು. ಜೊತೆಗೆ ನದಿಗೆ ಕೈಗಾರಿಕಾ ತ್ಯಾಜ್ಯ ಹರಿಯಬಿಟ್ಟಿರುವ ಆರೋಪವೂ ಈ ಕೈಗಾರಿಕೆಯ ಮೇಲಿದೆ. ರೈತರೇ ಈ ಬಗ್ಗೆ ಪ್ರತಿಭಟನೆ ಮಾಡಿದ್ದಾರೆ. ಇದು ಜಲ ಕಾಯಿದೆ ಮತ್ತು ಪರಿಸರ ಸಂರಕ್ಷಣಾ ಕಾಯಿದೆಯ ಉಲ್ಲಂಘನೆಯಾಗುತ್ತದೆ ಪರಿಸರ ಸಚಿವನಾಗಿ ಪ್ರಕೃತಿ, ಪರಿಸರ ಉಳಿಸುವ ಜವಾಬ್ದಾರಿ ನಿರ್ವಹಣೆ ಮಾಡಲೇ ಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ..
ನಿಯಮ ಉಲ್ಲಂಘಿಸುವ ಒಬ್ಬರಿಗೆ ಪೂರ್ವಾನ್ವಯವಾಗಿ ಸಿಎಫ್ಓ ಪಡೆಯಲು ಅನುಮತಿಸಿದರೆ, ಅದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತದೆ. ಹೀಗಾಗಿ ಕೆ.ಎಸ್.ಪಿ.ಸಿ.ಬಿ. ಕಾನೂನು ರೀತ್ಯ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದೆ ಅಷ್ಟೇ. ಇದರಲ್ಲಿ ಯಾವುದೇ ರಾಜಕೀಯ ದ್ವೇಷದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದೆಲ್ಲವೂ ಕಪೋಲ ಕಲ್ಪಿತ ಎಂದು ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಬಿಜೆಪಿ ಶಾಸಕರು ಕಾಯಬೇಕು, ಹೀಗೆ ರೈತರಿಂದ ಪ್ರತಿಭಟನೆ ಮಾಡಿಸಿ ಒತ್ತಡ ಹೇರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications