ವರ್ಷಾಂತ್ಯ ವಿಶೇಷ : 2015 ಜೂನ್‌ನಲ್ಲಿ ವಿದ್ಯಮಾನಗಳು ನೆನಪಿವೆಯೇ?
ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರವಿಲ್ಲ : ಜೂನ್ 01 : ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದ ಭಾನುವಾರದ ವಾಹನ ಸಂಚಾರ ನಿಷೇಧವನ್ನು ಶಾಶ್ವತವಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದರು. ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಅವರು ಪ್ರತಿ ಭಾನುವಾರ ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತದೆ ಎಂದು ಘೋಷಿಸಿದರು.
ಪಂಚಾಯಿತಿ ಫಲಿತಾಂಶ ಪ್ರಕಟ : ಜೂನ್ 5 : ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿತು. ಒಟ್ಟು 5,735 ಗ್ರಾಮ ಪಂಚಾಯಿತಿಗಳ 84,854 ಸ್ಥಾನಗಳಿಗೆ, ಮೇ 29 ಮತ್ತು ಜೂನ್ 2ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿತ್ತು. ಲೋಕಸಭೆ ಮತ್ತು ವಿಧಾನಸಭೆ ಚುಣಾವಣೆಗಿಂತಲೂ ಹೆಚ್ಚಿನ ಕುತೂಹಲವನ್ನು ಪಂಚಾಯಿತಿ ಚುನಾವಣೆ ಫಲಿತಾಂಶ ಹುಟ್ಟು ಹಾಕಿತ್ತು. [ಪಂಚಾಯಿತಿ ಫಲಿತಾಂಶ : ಯಾರು, ಏನು ಹೇಳಿದರು?]

ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್ ಸೇವೆ : ಜೂನ್ 11 : ಮೈಸೂರಿನ ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ, ಮಲೆಮಹದೇಶ್ವರ ಸೇರಿದಂತೆ ರಾಜ್ಯದ 11 ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಸೇವೆ ಮತ್ತು ವಸತಿ ವ್ಯವಸ್ಥೆಯನ್ನು ಆನ್‌ಲೈನ್ ಮೂಲಕ ಬುಕ್ ಮಾಡುವ ಸೇವೆಗೆ ಚಾಲನೆ ನೀಡಲಾಯಿತು. ವಾರ್ಷಿಕ 5 ಕೋಟಿಗಿಂತ ಹೆಚ್ಚಿನ ಆದಾಯವಿರುವ ದೇವಾಲಯಗಳನ್ನು ಆನ್‌ಲೈನ್ ವ್ಯವಸ್ಥೆ ವ್ಯಾಪ್ತಿಗೆ ತರಲಾಯಿತು. [ದೇವಾಲಯದ online ಸೇವೆ ಪಡೆಯುವುದು ಹೇಗೆ?]
ಅಧಿಕಾರ ಸ್ವೀಕರಿಸಿದ ಲಕ್ಷ್ಮೀ ಹೆಬ್ಬಾಳ್ಕರ್ : ಜೂನ್ 12 : ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಧಿಕಾರ ಸ್ವೀಕರಿಸಿದರು. ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಹೆಬ್ಬಾಳ್ಕರ್ ಅವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಕೆಎಸ್ಒಯು ಮಾನ್ಯತೆ ರದ್ದು ಮಾಡಿದ ಯುಜಿಸಿ : ಜೂನ್ 18 : 2012-13ರ ನಂತರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ (ಕೆಎಸ್‌ಒಯು) ಪಡೆದ ಎಲ್ಲಾ ಕೋರ್ಸ್‌ಗಳ ಮಾನ್ಯತೆಯನ್ನು ರದ್ದುಪಡಿಸಿ ಯುಜಿಸಿ ಆದೇಶ ಹೊರಡಿಸಿತು. ವ್ಯಾಪ್ತಿ ಮೀರಿ ಚಟುವಟಿಕೆ ವಿಸ್ತರಣೆ, ನಿಯಮ ಉಲ್ಲಂಘಿಸಿ ತಾಂತ್ರಿಕ ಮತ್ತು ವೃತ್ತಿ ಶಿಕ್ಷಣ ಕೋರ್ಸ್ ಆರಂಭಿಸಿರುವ ಕಾರಣ ಮಾನ್ಯತೆ ರದ್ದುಗೊಳಿಸಲಾಗಿದೆ ಎಂದು ಯುಜಿಸಿ ತಿಳಿಸಿತು.
ಅರ್ಕಾವತಿ ಬಡಾವಣೆ ಹಗರಣದ ತನಿಖೆ ಆರಂಭ : ಜೂನ್ 21 : ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೆಂಗಳೂರಿನ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದ ಕುರಿತ ತನಿಖೆಯನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇತೃತ್ವದ ತನಿಖಾ ಆಯೋಗ ಆರಂಭಿಸಿತು. ಅರ್ಕಾವತಿ ಡಿನೋಟಿಫಿಕೇಷನ್ ಆರೋಪ ಕೇಳಿ ಬಂದ ನಂತರ ಸರ್ಕಾರ ಪ್ರಕರಣದ ತನಿಖೆಗೆ 2014ರ ಆಗಸ್ಟ್‌ನಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತ್ತು.

ಬಿಬಿಎಂಪಿ ಚುನಾವಣೆ ಸರ್ಕಾರಕ್ಕೆ ಹಿನ್ನಡೆ : ಜೂನ್ 22 : 2011ರ ಜನಗಣತಿ ಅನ್ವಯ ಕ್ಷೇತ್ರ ಪುನರ್ ವಿಂಗಡನೆ ಮಾಡಲು ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. 2011ರ ಜನಗಣತಿ ವರದಿ ಆಧರಿಸಿ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಅನುಮತಿ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ವರದಿ ಕೇಳಿದ ಉಪ ಲೋಕಾಯುಕ್ತರು : ಜೂನ್ 22 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಕುರಿತು ವರದಿ ನೀಡುವಂತೆ ಉಪ ಲೋಕಾಯುಕ್ತರು ಸೂಚಿಸಿದರು. ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣದ ಕುರಿತು, ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಂದ ವರದಿ ಕೇಳಿದರು. [ಲೋಕಾಯುಕ್ತದ ಹಗರಣದ Timeline]

ಬಿಬಿಎಂಪಿ ಚುಣಾವಣೆ ವೇಳಾಪಟ್ಟಿ ಪ್ರಕಟ : ಜೂನ್ 25 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣಾ ಘೋಷಣೆಯಾಯಿತು. ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಅವರು ಬಿಬಿಎಂಪಿ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದರು. ಅವಿಭಜಿತ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಒಂದೇ ಹಂತದಲ್ಲಿ ಜುಲೈ 28ರಂದು ಚುನಾವಣೆ ನಡೆಸುವುದಾಗಿ ವೇಳಾಪಟ್ಟಿ ಪ್ರಕಟಿಸಲಾಯಿತು.
ಲೋಕಾಯುಕ್ತ ಹಗರಣ ಸಿಸಿಬಿಗೆ : ಜೂನ್ 26 : ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಹೇಳಿದರು. ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸಲಾಗುತ್ತದೆ. ತಮ್ಮ ಮೇಲಿನ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ಲೋಕಾಯುಕ್ತರು ತಿಳಿಸಿದರು.
ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ : ಬೆಳಗಾವಿ, ಜೂ. 29 : ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಮೊದಲ ಬಾರಿಗೆ ಮುಂಗಾರು ಅಧಿವೇಶನ ಆರಂಭವಾಯಿತು. 10 ದಿನಗಳ ಕಾಲ ನಡದ ಅಧಿವೇಶನದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಿತು.

ಲೋಕಾಯುಕ್ತದ ಹಗರಣದ ತನಿಖೆ ಎಸ್‌ಐಟಿಗೆ : ಜೂನ್ 30 : ಲೋಕಾಯುಕ್ತದಲ್ಲಿನ ಹಣದ ಬೇಡಿಕೆ ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ದಳವನ್ನು ರಚನೆ ಮಾಡಿತು. ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬುದು ಆರೋಪ. ಹಗರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದ ಸರ್ಕಾರ, ಕಾರಾಗೃಹ ಇಲಾಖೆ ಎಡಿಜಿಪಿ ಕಮಲ್ ಪಂತ್ ಅವರನ್ನು ಎಸ್‌ಐಟಿಯ ಮುಖ್ಯಸ್ಥರಾಗಿ ನೇಮಿಸಿತು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications