ಡಿಕೆ ರವಿ ಸಾವು, ಗೌತಮಿ ಶೂಟೌಟ್ ಇತರ ಸುದ್ದಿ
ಪೀಣ್ಯ ಬಸ್ ನಿಲ್ದಾಣ ಸ್ಥಳಾಂತರ : ಮಾರ್ಚ್ 1 : ಕೆಎಸ್ಆರ್‌ಟಿಸಿ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಮೆಜೆಸ್ಟಿಕ್‌ಗೆ ಸ್ಥಳಾಂತರ ಮಾಡಿತು. ಪೀಣ್ಯದಿಂದ ಸಂಚಾರ ನಡೆಸುತ್ತಿದ್ದ 298 ವೇಗದೂತ ಬಸ್ಸುಗಳು ಮಾರ್ಚ್ 1ರಿಂದಲೇ ಮೆಜೆಸ್ಟಿಕ್‌ನಿಂದ ಸಂಚಾರ ಆರಂಭಿಸಿದವು. 2014ರ ಸೆಪ್ಟೆಂಬರ್‌ನಲ್ಲಿ ಪೀಣ್ಯ ಬಸ್ ನಿಲ್ದಾಣ ಕಾರ್ಯಾರಂಭ ಮಾಡಿತ್ತು. ನಷ್ಟದ ನೆಪ ಹೇಳಿ ಬಸ್ ನಿಲ್ದಾಣವನ್ನು ಸ್ಥಳಾಂತರ ಮಾಡಲಾಯಿತು.

ಹುಬ್ಬಳ್ಳಿಗೆ ಪುನಃ ವಿಮಾನ ಸೇವೆ ಆರಂಭ : ಮಾರ್ಚ್ 02 : ಸುಮಾರು ಆರು ತಿಂಗಳ ನಂತರ ಹುಬ್ಬಳ್ಳಿಗೆ ಸ್ಪೈಸ್ ಜೆಟ್ ವಿಮಾನ ಸೇವೆ ಆರಂಭಿಸಿತು. ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಕಾರ್ಯದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಬಂದ್ ಆಗಿತ್ತು. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿತು.
ಬೆಂಗಳೂರಿಗೆ ಚಿಕಿತ್ಸೆಗೆ ಬಂದ ಕೇಜ್ರಿವಾಲ್ : ಮಾರ್ಚ್ 5 : ಕೆಮ್ಮು ಮತ್ತು ಮಧುಮೇಹಕ್ಕೆ ಚಿಕಿತ್ಸೆ ಪಡೆಯಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಗಳೂರಿಗೆ ಆಗಮಿಸಿದರು. ಕೇಜ್ರಿವಾಲ್ ಅವರನ್ನು ಕೆಮ್ಮಿನ ಸಮಸ್ಯೆ ದೀರ್ಘಕಾಲದಿಂದ ಕಾಡುತ್ತಿತ್ತು. ಕೆಮ್ಮಿನ ಜೊತೆಗೆ ಮಧುಮೇಹವನ್ನು ನಿಯಂತ್ರಣಕ್ಕೆ ತರಲು ಕೇಜ್ರಿವಾಲ್ ಒಂದು ವಾರಕ್ಕೂ ಹೆಚ್ಚು ಕಾಲ ಚಿಕಿತ್ಸೆ ಪಡೆದರು. [ಕೇಜ್ರಿವಾಲ್ ಚಿಕಿತ್ಸೆಯ ಚಿತ್ರಗಳು]

ಹುಬ್ಬಳ್ಳಿಯಲ್ಲಿ ತಪ್ಪಿದ ಭಾರೀ ಅನಾಹುತ : ಮಾರ್ಚ್ 08 : ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಸ್ಪೈಸ್‌ಜೆಟ್ ವಿಮಾನ ಲ್ಯಾಂಡ್ ಆಗುವ ವೇಳೆ ಅಪಘಾತ ಸಂಭವಿಸಿತು. 77 ಪ್ರಯಾಣಿಕರು ಆಶ್ಚರ್ಯಕರ ರೀತಿಯಲ್ಲಿ ಪಾರಾದರು. ವಿಮಾನದಲ್ಲಿ ಸಚಿವ ರೋಷನ್ ಬೇಗ್ ಮತ್ತು ಧಾರವಾಡ ಹೈಕೋರ್ಟ್ ಪೀಠದ ನಾಲ್ವರು ನ್ಯಾಯಮೂರ್ತಿಗಳಿದ್ದರು. ವಿಮಾನದ ಲ್ಯಾಂಡಿಂಗ್ ವೇಳೆ, ಟೈರ್ ಸ್ಫೋಟಗೊಂಡು ರನ್‌ವೇಯಿಂದ ಜಾರಿದ ವಿಮಾನ ಪಕ್ಕದ ಸಿಗ್ನಲ್ ದೀಪಕ್ಕೆ ಡಿಕ್ಕಿ ಹೊಡೆದು, ರನ್‌ವೇ ಪಕ್ಕದ ಮಣ್ಣಿನಲ್ಲಿ ಸಿಕ್ಕಿಕೊಂಡಿತು.
ಮೊಯ್ಲಿಗೆ ಸರಸ್ವತಿ ಸಮ್ಮಾನ್ ಪುರಸ್ಕಾರ : ಮಾರ್ಚ್ 10 : ಹಿರಿಯ ಕಾಂಗ್ರೆಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಯಿತು. ವೀರಪ್ಪ ಮೊಯ್ಲಿ ಅವರಿಗೆ 'ರಾಮಾಯಣ ಮಹಾನ್ವೇಷಣಂ' ಮಹಾಕಾವ್ಯಕ್ಕಾಗಿ 2014ನೇ ಸಾಲಿನ 'ಸರಸ್ವತಿ ಸಮ್ಮಾನ್' ಪುರಸ್ಕಾರ ಲಭಿಸಿತು.
ಜಯಲಲಿತಾ ಅರ್ಜಿ ವಿಚಾರಣೆ ಮುಕ್ತಾಯ : ಮಾರ್ಚ್ 11 : ಕರ್ನಾಟಕ ಹೈಕೋರ್ಟ್ ವಿಶೇಷ ಪೀಠ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತು. ಆಸ್ತಿಗಳಿಕೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಯಲಲಿತಾ ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ಮಕ್ತಾಯಗೊಳಿಸಿತು.
ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ : ಮಾರ್ಚ್ 13 : ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 13ರಂದು 2015-16ನೇ ಸಾಲಿನ ಬಜೆಟ್ ಮಂಡಿಸಿದರು. ಇದು ಸಿದ್ದರಾಮಯ್ಯ ಅವರು ಮಂಡಿಸಿದದ ಹತ್ತನೇ ಬಜೆಟ್. 2015-16ನೇ ಸಾಲಿನ ಬಜೆಟ್ ಗಾತ್ರ 1,42, 534 ಕೋಟಿ ರೂ.[ಸಿದ್ದರಾಮಯ್ಯ ಬಜೆಟ್ ಮುಖ್ಯಾಂಶಗಳು]

ಮೈಸೂರಿನಲ್ಲಿ ನಾಯಕ ನಟನ ಕೊಲೆ : ಮಾರ್ಚ್ 16 : 'ಹಾಯ್ ಕೃಷ್ಣ' ಚಿತ್ರದ ನಾಯಕ, ನಿರ್ಮಾಪಕ ನವೀನ್ ಅವರನ್ನು ದುಷ್ಕರ್ಮಿಗಳ ಗುಂಪು ಕೊಲೆ ಮಾಡಿತು. ಮೈಸೂರಿನ ಬೆಳವಾಡಿಯ ಮಾರಮ್ಮ ದೇಗುಲದ ಬಳಿ ನವೀನ್ ಮೃತದೇಹ ಪತ್ತೆಯಾಯಿತು.
ಐಎಎಸ್ ಅಧಿಕಾರಿ ಡಿಕೆ ರವಿ ಸಾವು : ಮಾರ್ಚ್ 16 : 2009ರ ಬ್ಯಾಚ್‌ನ ಐಎಎಸ್ ಅಧಿಕಾರಿ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಡಿ.ಕೆ.ರವಿ ಅವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು. ಕೋರಮಂಗಲ ಬಳಿಯ ತಾವರೆಕೆರೆ ರಸ್ತೆಯಲ್ಲಿರುವ ಪ್ರೆಸ್ಟೀಜ್ ಗ್ರೂಪ್‌ಗೆ ಸೇರಿದ 'ಸೇಂಟ್ ಜಾನ್ಸ್‌ವುಡ್ ಅಪಾರ್ಟ್‌ಮೆಂಟ್'ನಲ್ಲಿ ಡಿ.ಕೆ.ರವಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು. [ಡಿಕೆ ರವಿ ನಿಗೂಢ ಸಾವು]

ಡಿಕೆ ರವಿ ಸಾವಿನ ತನಿಖೆ ಸಿಬಿಐಗೆ : ಮಾರ್ಚ್ 23 : ವಿವಿಧ ಸಂಘಟನೆಗಳ ಆಕ್ರೋಶಕ್ಕೆ ಮಣಿದು, ಜನರ ಭಾವನೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವುದಾಗಿ ಘೋಷಿಸಿದರು.
ಕುಲಸಚಿವರು ಲೋಕಾಯುಕ್ತ ಬಲೆಗೆ : ಮಾ. 24 : ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಕಾಟೇಪಾಗ ವಿಜಯಕುಮಾರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು. 1 ಲಕ್ಷ ಲಂಚ ಪಡೆಯುತ್ತಿದ್ದಾಗ ಅವರು ಸಿಕ್ಕಿಬಿದ್ದರು. ಬಳ್ಳಾರಿ ನಗರದಲ್ಲಿರುವ ರಾಯಲ್ ಬಿಇಡಿ ಕಾಲೇಜಿನ ಮಾನ್ಯತೆಯನ್ನು ನವೀಕರಿಸಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದರು.
ಸಕಾಲದಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ : ಮಾರ್ಚ್ 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶ ನೀಡಿತು. ಬಿಜೆಪಿಯ ಬಿಬಿಎಂಪಿ ಸದಸ್ಯರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿತು. ಬಿಬಿಎಂಪಿ ವಿಭಜನೆ ಪ್ರಸ್ತಾಪ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಬೇಡಿ ಎಂದು ಹೈಕೋರ್ಟ್ ಸೂಚಿಸಿತು.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುಂಡಿಗೆ ಬಲಿ : ಮಾರ್ಚ್ 31 : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗೌತಮಿಯನ್ನು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಕಾಡುಗೋಡಿಯಲ್ಲಿ ನಡೆಯಿತು. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗೌತಮಿ ಪ್ರಗತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿನ ಆಫೀಸ್ ಬಾಯ್ ಮಹೇಶ್ ಗೌತಮಿಯನ್ನು ಕೊಲೆ ಮಾಡಿದ ಆರೋಪಿ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications