ಎರಡು ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಖುಲಾಸೆ

ಬೆಂಗಳೂರು, ನವೆಂಬರ್ 29 : ಎರಡು ಚುನಾವಣೆ ನೀತಿ ಸಂಹಿತೆ ಪ್ರಕರಣದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖುಲಾಸೆಗೊಂಡಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು.

ಗುರುವಾರ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಿದೆ. ಸಾಕ್ಷ್ಯಧಾರಗಳ ಕೊರತೆ ಹಿನ್ನಲೆಯಲ್ಲಿ ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯೂರ್ತಿ ಬಿ.ವಿ.ಪಾಟೀಲ್ ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಐಪಿಸಿ ಸೆಕ್ಷನ್ 171 ಅಡಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಇಂದು ನ್ಯಾಯಾಲಯಕ್ಕೆ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿದ್ದರು.

Yeddyurappa acquitted in 2 cases

ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಹಣ ನೀಡಿದ ಪ್ರಕರಣ, ಬಿಜೆಪಿಗೆ ಮತ ನೀಡುವಂತೆ ಪ್ರಮಾಣ ಮಾಡಿಸಿಕೊಂಡಿದ್ದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ನ್ಯಾಯಮೂರ್ತಿ ಬಿ.ವಿ.ಪಾಟೀಲ್ ಅವರು ಸಾಕ್ಷ್ಯಧಾರಗಳ ಕೊರತೆ ಹಿನ್ನಲೆಯಲ್ಲಿ ಎರಡು ಪ್ರಕರಣಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷರಿಗೆ ರಿಲೀಫ್ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+