ಚಿತ್ರಗಳು : ಬಿಎಸ್‌ವೈಗೆ ಅಧ್ಯಕ್ಷ ಪಟ್ಟ, ಬಿಜೆಪಿ ಕಚೇರಿ ಮುಂದೆ ದೀಪಾವಳಿ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 09 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಪಕ್ಷದಲ್ಲಿ ಹೊಸ ಸಂಚಲನ ಉಂಟು ಮಾಡಿದೆ. ಯಡಿಯೂರಪ್ಪ ಅಭಿಮಾನಿಗಳು, ಯುಗಾದಿ ದಿನವಾದ ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಿಸಿ ದೀಪಾವಳಿ ಆಚರಣೆ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಯಡಿಯೂರಪ್ಪ ಅವರನ್ನು ಸ್ವಾಗತ ಮಾಡಿದ ರಾಜ್ಯದ ನಾಯಕರು, 'ಯಡಿಯೂರಪ್ಪನವರೇ ನಮ್ಮ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ' ಎಂದು ಘೋಷಣೆ ಮಾಡಿದರು. [ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಆಯ್ಕೆ]

bjp

ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಸಂಸದೆ ಶೋಭಾ ಕರಂದ್ಲಾಜೆ, ವಿವಿಧ ಜಿಲ್ಲೆಗಳ ಬಿಜೆಪಿ ನಾಯಕರು, ಪರಿಷತ್ ಸದಸ್ಯರು, ಬಿಜೆಪಿ ಬಿಬಿಎಂಪಿ ಸದಸ್ಯರು, ಹೂಗುಚ್ಚ ನೀಡಿ ಯಡಿಯೂರಪ್ಪ ಅವರನ್ನು ಅಭಿನಂದಿಸಿದರು. [ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ, ಮುಂದೇನು?]

-
-
-
-
-

ಬಿಜೆಪಿ ಕಚೇರಿ ಮುಂದೆ ಮಾತನಾಡಿದ ಅನಂತಕುಮಾರ್ ಅವರು, 'ಇಂದು ಯುಗಾದಿಯಲ್ಲ, ದೀಪಾವಳಿ. ಯಡಿಯೂರಪ್ಪ ಅವರು, 4ನಾಲ್ಕನೇ ಬಾರಿ ಅಧ್ಯಕ್ಷರಾಗಿ ಬೌಂಡರಿ ಹೊಡೆದಿದ್ದಾರೆ. 2018ರಲ್ಲಿ ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ' ಎಂದರು.

ಕಾಂಗ್ರೆಸ್ ಧೂಳೀಪಟ : ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರು, 'ಮುಂದಿನ ಚುನಾವಣೆ ನಂತರ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡುತ್ತಾರೆ' ಎಂದು ಹೇಳಿದರು.

-
-
-
-

ಪಕ್ಷವನ್ನು ಅಧಿಕಾರಕ್ಕೆ ತರಬೇಕು : ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅವರು, 'ತಮಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ ಹೈಕಮಾಂಡ್ ನಾಯಕರಿಗೆ ಧನ್ಯವಾದ ಸಲ್ಲಿಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಮುಂದಿನ ಗುರಿ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former Chief Minister of Karnataka, B.S. Yeddyurappa has been named as the president of the BJP in Karnataka. The much anticipated decision was taken by the party top brass on Friday. A large number of BJP leaders in Karnataka have welcomed the decision.
Please Wait while comments are loading...