ಯಡಿಯೂರಪ್ಪಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ

ಬೆಂಗಳೂರು, ಆ.16 :ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನರೇಂದ್ರ ಮೋದಿ ಅವರ ಜೊತೆ ಸೇರಿ ಪಕ್ಷ ಕಟ್ಟುವ ಕನಸು ಈಡೇರಿದೆ ಎಂದು ಚಿಕ್ಕೋಡಿಯಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡುತ್ತಿದ್ದರು. ಸದ್ಯ ರಾಷ್ಟ್ರೀಯ ಉಪಾಧ್ಯಕ್ಷ ಹುದ್ದೆ ಸಿಕ್ಕಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಸಮಾಧಾನವಾಗಿರಬಹುದು ಎಂದು ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

B.S.Yeddyurappa

ಹಿಂದಿನ ಸುದ್ದಿ : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ-ಮಾನ ನೀಡಬೇಕು ಎಂಬ ರಾಜ್ಯ ಬಿಜೆಪಿ ನಾಯಕರ ಮನವಿಗೆ ಮಾನ್ಯತೆ ದೊರಕಿದೆ.

ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಿರುವ ಕುರಿತು ಆದೇಶ ಹೊರಡಿಸಲಾಗಿದೆ.

ಉಳಿದಂತೆ ಕರ್ನಾಟಕ ಇಬ್ಬರನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದ್ದು, ಸಂಘಟನಾ ಕಾರ್ಯದರ್ಶಿಯಾಗಿ ರಾಜ್ಯದ ಸತೀಶ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಸಂತೋಷ್ ಅವರಿಗೂ ಸಂಘಟನಾ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಸಚಿವ ಸ್ಥಾನ ವಂಚಿತರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಮಟ್ಟದಲ್ಲಿ ಸೂಕ್ತ ಸ್ಥಾನ-ಮಾನ ನೀಡಬೇಕೆಂದು ಕರ್ನಾಟಕ ಬಿಜೆಪಿ ನಾಯಕರು ರಾಷ್ಟ್ರೀಯ ನಾಯಕರಿಗೆ ಒತ್ತಾಯಿಸುತ್ತಿದ್ದರು. ಒಂದು ವೇಳೆ ಕೇಂದ್ರದಲ್ಲಿ ಸ್ಥಾನ ನೀಡದಿದ್ದರೆ, ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು. [ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ?]

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಆಯ್ಕೆಯಾದ ನಂತರ ಅವರು ರಾಷ್ಟ್ರೀಯ ಪದಾಧಿಕಾರಿಗಳನ್ನು ಬದಲಾವಣೆ ಮಾಡಿದ್ದು ಶನಿವಾರ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಹುದ್ದೆ ದೊರಕಿದೆ. ಹೊಸ ಪಟ್ಟಿಯ ಪ್ರಕಾರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ಕರ್ನಾಟಕದ ನಾಯಕರ ಕೈ ತಪ್ಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+