ಮೋದಿ, ಅಮಿತ್ ಶಾಗೆ ಅಭಿನಂದನೆ ಸಲ್ಲಿಸಿದ ಪೂಜಾರಿ!

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಏಪ್ರಿಲ್ 09 : ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಮಾತನಾಡಬಾರದು, ಅದು ಸಾಧ್ಯವೂ ಇಲ್ಲ ಎಂದು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಶನಿವಾರ ಈ ಬಗ್ಗೆ ಮಾತನಾಡಿದ್ದಾರೆ. ಅನೇಕ ಆರೋಪದಲ್ಲಿ ಸಿಲುಕಿಕೊಂಡಿರುವ ಯಡಿಯೂರಪ್ಪ ಅವರು ಮತ್ತೆ ಬಿಜೆಪಿ ಅಧಿಕಾರ ಪಡೆಯುವ ಕನಸು ಕಾಣುತ್ತಿದ್ದಾರೆ ಎಂದು ನಾಯಕರು ವ್ಯಂಗ್ಯವಾಡಿದ್ದಾರೆ. [ಬಿಜೆಪಿಯಲ್ಲಿ ಯಡಿಯೂರಪ್ಪ ಏನು ಬದಲಾವಣೆ ತರಬಲ್ಲರು?]

mallikarjun kharge

ಖರ್ಗೆ ಹೇಳಿದ್ದೇನು? : ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, 'ಬಿಜೆಪಿಗೆ ರಾಜ್ಯಾಧ್ಯಕ್ಷರು ಯಾರಾದರೂ ಎಂಬುದು ನಮಗೆ ಮುಖ್ಯವಲ್ಲ' ಎಂದು ಹೇಳಿದರು. [ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಆಯ್ಕೆ]

'ಒಬ್ಬರು ವ್ಯಕ್ತಿಯ ಮೇಲೆ ಪಕ್ಷ ನಿಂತಿಲ್ಲ. ಅವರು ರಾಜ್ಯಾಧ್ಯಕ್ಷರಾದ ತಕ್ಷಣ ಸರ್ಕಾರವೇನು ಪತನಗೊಳ್ಳುವುದಿಲ್ಲ. ರಾಜ್ಯದ ಜನರಿಗೆ ಏನು ಸಹಾಯ ಮಾಡುತ್ತೇನೆ ಎಂದು ಹೇಳುವುದು ಬಿಟ್ಟು, ಯಡಿಯೂರಪ್ಪ ಅವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಮಾತನ್ನಾಡುತ್ತಿದ್ದಾರೆ' ಎಂದು ಖರ್ಗೆ ವ್ಯಂಗ್ಯವಾಡಿದರು.

ಮೋದಿ, ಅಮಿತ್ ಶಾಗೆ ಅಭಿನಂದನೆ : ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅಭಿನಂದನೆ ಸಲ್ಲಿಸಿದರು.

janardhana poojary

ಶನಿವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, 'ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಕಾಂಗ್ರೆಸ್ ಪಾಲಿಗೆ ವರದಂತಾಗಿದೆ. ಆದ್ದರಿಂದ ಬಿಜೆಪಿ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ' ಎಂದು ವ್ಯಂಗ್ಯವಾಡಿದರು.

'ರಾಜ್ಯದ ಆಡಳಿತ ಪಕ್ಷವನ್ನು ಕಿತ್ತೊಗೆಯುವ ರಾಜ್ಯವನ್ನು ಕಾಂಗ್ರೆಸ್ ಮುಕ್ತವಾಗಿಸುವ ಮಾತುಗಳನ್ನು ಯಡಿಯೂರಪ್ಪ ಆಡಿದ್ದಾರೆ. ಆದರೆ, ಅವರ ಜನ್ಮದಲ್ಲಿ ಇದು ಅಸಾಧ್ಯ. ಬಾಯಿಗೆ ಬಂದಂತೆ ಮಾತನಾಡುವ ಅವರು ತಮ್ಮ ಬಾಯಿಗೆ ಕಡಿವಾಣ ಹಾಕಿಕೊಳ್ಳದಿದ್ದರೆ ಅವರ ಜನ್ಮ ಜಾಲಾಡುತ್ತೇವೆ' ಎಂದು ಪೂಜಾರಿ ಎಚ್ಚರಿಕೆ ನೀಡಿದರು.

'ಪ್ರೇರಣಾ ಟ್ರಸ್ಟ್ ಹಗರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಭ್ರಷ್ಟಾಚಾರವನ್ನು ಜನರು ಮರೆತಿಲ್ಲ. ಹಲವು ಆರೋಪಗಳ ಸುಳಿಯಲ್ಲಿ ಸಿಲುಕಿರುವ ಅವರು, ಅಧಿಕಾರದ ಕನಸು ಕಾಣುತ್ತಿದ್ದಾರೆ' ಎಂದು ಪೂಜಾರಿ ಕುಟುಕಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
It doesn’t matter to us who becomes BJP's state president, be it B.S.Yeddyurappa or anyone else said, Congress leader Mallikarjun Kharge.
Please Wait while comments are loading...