ನ.29ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಯಡಿಯೂರಪ್ಪ
ಬೆಂಗಳೂರು, ನವೆಂಬರ್ 25 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಳಗಾವಿ ಅಧಿವೇಶನದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ನವೆಂಬರ್ 29ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಎಲ್ಲಾ 104 ಶಾಸಕರಿಗೆ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಬೆಳಗಾವಿ ಅಧಿವೇಶನ ಆರಂಭವಾಗುವುದಕ್ಕೂ ಮೊದಲು ಈ ಸಭೆ ಕರೆಯಲಾಗಿದೆ.
ನವೆಂಬರ್ 29ರಂದು ಮಧ್ಯಾಹ್ನ 2 ಗಂಟೆಗೆ ಸಭೆ ಕರೆಯಲಾಗಿದೆ. ಸಭೆಯ ಬಳಿಕ ಕೇಂದ್ರ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಗುತ್ತದೆ.

ಡಿಸೆಂಬರ್ 10ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಹೊರಗೆ ಮತ್ತು ಸದನದೊಳಗೆ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಅಧಿವೇಶನದ ಆರಂಭವಾಗುವ ದಿನ ಸುಮಾರು 1 ಲಕ್ಷ ರೈತರನ್ನು ಸೇರಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.












Click it and Unblock the Notifications