ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಗೆ ಯಡಿಯೂರಪ್ಪ; ಸಂಪುಟ ವಿಸ್ತರಣೆ ಲೆಕ್ಕಾಚಾರಗಳು

|
Google Oneindia Kannada News

Recommended Video

BS Yediyurappa is going to Delhi discuss about state cabinet expansion | BS YEDDI | DELHI | BJP

ಬೆಂಗಳೂರು, ಜನವರಿ 29 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಗೆ ಹೋಗುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ಭೇಟಿಯ ವಿಚಾರ ತಿಳಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಲೆಕ್ಕಾಚಾರಗಳು ಆರಂಭವಾಗಿವೆ.

ಬುಧವಾರ ಸಂಜೆ ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ, "ಗುರುವಾರ 11 ಗಂಟೆಗೆ ದೆಹಲಿಗೆ ತೆರಳಿ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾರನ್ನು ಭೇಟಿ ಮಾಡಿ ಅಭಿನಂದಿಸಿ ಶುಭ ಕೋರುತ್ತೇನೆ. ಬಳಿಕ ಪ್ರಧಾನಿ ನರೇಂದ್ರ ಮೋದಿ, ಗೃಹ ಮಂತ್ರಿಗಳಾದ ಅಮಿತ್ ಶಾರನ್ನು ಭೇಟಿ ಮಾಡಲಾಗುವುದು" ಎಂದರು.

ಸಂಪುಟ ವಿಸ್ತರಣೆಗೆ ಗಡುವು ಕೊಟ್ಟ ಶಾಸಕ ಯತ್ನಾಳ..!ಸಂಪುಟ ವಿಸ್ತರಣೆಗೆ ಗಡುವು ಕೊಟ್ಟ ಶಾಸಕ ಯತ್ನಾಳ..!

"ಸಚಿವ ಸಂಪುಟ ವಿಸ್ತರಣೆ ಮಾಡಲು ಇನ್ನೆರಡು ದಿನದಲ್ಲಿ ಪ್ರಯತ್ನ ಮಾಡಲಾಗುವುದು. ಜನವರಿ 31ರಂದು ರಾಜ್ಯಕ್ಕೆ ವಾಪಸ್ ಆಗುತ್ತೇನೆ" ಎಂದು ಯಡಿಯೂರಪ್ಪ ಹೇಳಿದರು. ಯಡಿಯೂರಪ್ಪ ಹೇಳಿಕೆ ಬಳಿಕ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆಯ ಲೆಕ್ಕಾಚಾರಗಳು ಆರಂಭವಾಗಿವೆ.

ಸಂಪುಟ ವಿಸ್ತರಣೆ ಹಿನ್ನೆಲೆ ಸಚಿವ ಶ್ರೀರಾಮುಲು ಟೆಂಪಲ್ ರನ್ಸಂಪುಟ ವಿಸ್ತರಣೆ ಹಿನ್ನೆಲೆ ಸಚಿವ ಶ್ರೀರಾಮುಲು ಟೆಂಪಲ್ ರನ್

ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ 16 ಸಚಿವ ಸ್ಥಾನಗಳು ಖಾಲಿ ಇವೆ. ಖಾಲಿ ಇರುವ ಸ್ಥಾನಕ್ಕಾಗಿ 2 ಡಜನ್‌ಗೂ ಅಧಿಕ ಆಕಾಂಕ್ಷಿಗಳಿದ್ದಾರೆ. ಅದರಲ್ಲೂ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರಿದ್ದಾರೆ. ಮೂಲ ಬಿಜೆಪಿ ಶಾಸಕರು ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಸಂಪುಟ ವಿಸ್ತರಣೆ; ಶಾಸಕರ ಸ್ಥಿತಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಸಂಪುಟ ವಿಸ್ತರಣೆ; ಶಾಸಕರ ಸ್ಥಿತಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್

ಯಡಿಯೂರಪ್ಪ ಹೇಳಿಕೆ

ಯಡಿಯೂರಪ್ಪ ಹೇಳಿಕೆ

ಬುಧವಾರ ಬೆಳಗಾವಿ ಪ್ರವಾಸ ಕೈಗೊಂಡಿದ್ದ ಯಡಿಯೂರಪ್ಪ ಅವರು, ಉಪ ಚುನಾವಣೆಯಲ್ಲಿ ಗೆದ್ದ ಒಂದಿಬ್ಬರು ಶಾಸಕರನ್ನು ಹೊರತುಪಡಿಸಿದರೆ ಬಹುತೇಕರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಸುಳಿವು ನೀಡಿದ್ದಾರೆ. ಆದರೆ, ಮತ್ತೊಂದು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ಪಟ್ಟಿಗಳು ಸಿದ್ಧ

ಎರಡು ಪಟ್ಟಿಗಳು ಸಿದ್ಧ

ದೆಹಲಿಗೆ ತೆರಳಲಿರುವ ಯಡಿಯೂರಪ್ಪ ಎರಡು ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಒಂದು ಪಟ್ಟಿಯಲ್ಲಿ ಉಪ ಚುನಾವಣೆಯಲ್ಲಿ ಗೆದ್ದ 7 ಶಾಸಕರಿಗೆ ಸಚಿವ ಸ್ಥಾನ ಸಿಕ್ಕಲಿದೆ ಎಂದು ತಿಳಿದುಬಂದಿದೆ. 50:50 ಸಚಿವ ಸ್ಥಾನ ಸಿಗಬಹುದು ಎಂಬ ಶಾಸಕರ ಹೆಸರುಗಳು ಪಟ್ಟಿಯಲ್ಲಿವೆ.

ಸಂಭ್ಯಾವ್ಯ ಶಾಸಕರ ಪಟ್ಟಿ

ಸಂಭ್ಯಾವ್ಯ ಶಾಸಕರ ಪಟ್ಟಿ

ಸಂಭಾವ್ಯ ಪಟ್ಟಿಯ ಪ್ರಕಾರ ರಮೇಶ್ ಜಾರಕಿಹೊಳಿ, ಬಿ. ಸಿ. ಪಾಟೀಲ್, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜ, ಗೋಪಾಲಯ್ಯ, ಸುಧಾಕರ್, ಆನಂದ್ ಸಿಂಗ್‌ಗೆ ಸಚಿವ ಸ್ಥಾನ ಸಿಗಲಿದೆ. ಶಿವರಾಂ ಹೆಬ್ಬಾರ್, ನಾರಾಯಣ ಗೌಡ, ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ.

ಬಿಜೆಪಿಯಿಂದ ಯಾರಿಗೆ ಸ್ಥಾನ?

ಬಿಜೆಪಿಯಿಂದ ಯಾರಿಗೆ ಸ್ಥಾನ?

ಮೂಲ ಬಿಜೆಪಿ ಶಾಸಕರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಾಲಪ್ಪ ಆಚಾರ್ ಹೆಸರು ಕೇಳಿ ಬರುತ್ತಿದೆ. ಇವರಲ್ಲಿ ಯಾರು ಸಂಪುಟ ಸೇರಲಿದ್ದಾರೆ? ಎಂದು ಕಾದು ನೋಡಬೇಕು.

English summary
Karnataka chief minister B. S. Yediyurappa to meet high command leaders on January 30, 2020. Here are the calculations of cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X