ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಡಿಸಿಎಂ ಹುದ್ದೆಯ ಬದಲಿಗೆ ಜಲಸಂಪನ್ಮೂಲ ಖಾತೆ'

|
Google Oneindia Kannada News

ಬೆಂಗಳೂರು, ಫೆ. 10: ಬಯಸಿದಂತೆಯೆ ಜಲಸಂಪನ್ಮೂಲ ಖಾತೆಯನ್ನು ಸಚಿವ ರಮೇಶ್ ಜಾರಕಿಹೊಳಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿರುವ ಪಟ್ಟಿ 'ಒನ್ ಇಂಡಿಯಾ'ಕ್ಕೆ ಲಭ್ಯವಾಗಿದ್ದು, ಸಂಜೆ ಹೊತ್ತಿಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರ ಅಂಕಿತದೊಂದಿಗೆ ಅಧಿಕೃತವಾಗಿ ಪ್ರಕಟಗೊಳ್ಳಲಿದೆ.

ಜಲಸಂಪನ್ಮೂಲ ಖಾತೆಗೆ ಪಟ್ಟು ಹಿಡಿದಿದ್ದ ಸಚಿವ ರಮೇಶ್ ಜಾರಕಿಹೊಳಿ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಡಿಸಿಎಂ ಹುದ್ದೆಯ ಬದಲಿಗೆ ಜಲಸಂಪನ್ಮೂಲ ಖಾತೆ ಕೊಡುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಿಎಂ ಸಮಾಧಾನ ಮಾಡಿದ್ದಾರೆ. ಜೊತೆಗೆ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಎಂಎಸ್‌ಐಎಲ್ ಅಧ್ಯಕ್ಷ ಸ್ಥಾನ ಕೊಡಲಾಗಿದ್ದು, ಸಂಜೆ ವೇಳೆಗೆ ಸಿಎಂ ಅಧಿಕೃತ ಮುದ್ರೆ ಒತ್ತಲಿದ್ದಾರೆ.

ಯಡಿಯೂರಪ್ಪ ಸಚಿವ ಸಂಪುಟ: ಯಾರಿಗೆ ಯಾವ ಖಾತೆ ಅಧಿಕೃತ ಪಟ್ಟಿ ಯಡಿಯೂರಪ್ಪ ಸಚಿವ ಸಂಪುಟ: ಯಾರಿಗೆ ಯಾವ ಖಾತೆ ಅಧಿಕೃತ ಪಟ್ಟಿ

ಇನ್ನು ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಸಿಎಂ ಯಡಿಯೂರಪ್ಪ ಮತ್ತೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಡಿಸಿಎಂ ಲಕ್ಷ್ಣಣ ಸವದಿ ಅವರ ಬಳಿಯಿದ್ದ ಕೃಷಿ ಖಾತೆಯನ್ನು ಬಸವರಾಜ್ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆ ಹೆಚ್ಚುವರಿಯಾಗಿ ಕೊಡಲಾಗಿದೆ. ಡಿಸಿಎಂ ಲಕ್ಷ್ಮಣ ಸವದಿ ಅವರಲ್ಲಿ ಸಾರಿಗೆ ಖಾತೆ ಮಾತ್ರ ಉಳಿಸಲಾಗಿದೆ.

Yeddyurappa has allocated portfolios to the ministers

ಉಳಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಾತೆಗಳನ್ನು ಹಂಚಿಕೆ ಮಾಡಿರುವ ವಿವರ ಹೀಗಿದೆ:

ಎಸ್ ಟಿ ಸೋಮಶೇಖರ್- ಸಹಕಾರ ಇಲಾಖೆ ಖಾತೆ

ಬಿ.ಸಿ. ಪಾಟೀಲ್ - ಅರಣ್ಯ ಖಾತೆ

ಡಾ. ಸುಧಾಕರ್ - ವೈದ್ಯಕೀಯ ಶಿಕ್ಷಣ

ನಾರಾಯಣಗೌಡ - ಪೌರಾಡಳಿತ ಹಾಗೂ ತೋಟಗಾರಿಕೆ

ರಾಜಭವನಕ್ಕೆ ಖಾತೆ ಹಂಚಿಕೆ ಪಟ್ಟಿ ಕಳಿಸಿದ ಸಿಎಂ ಯಡಿಯೂರಪ್ಪರಾಜಭವನಕ್ಕೆ ಖಾತೆ ಹಂಚಿಕೆ ಪಟ್ಟಿ ಕಳಿಸಿದ ಸಿಎಂ ಯಡಿಯೂರಪ್ಪ

ಶಿವರಾಂ ಹೆಬ್ಬಾರ್ - ಕಾರ್ಮಿಕ ಖಾತೆ

ಆನಂದ ಸಿಂಗ್ - ಆಹಾರ ಮತ್ತು ನಾಗರಿಕ ಪೂರೈಕೆ

ಬೈರತಿ ಬಸವರಾಜು - ನಗರಾಭಿವೃದ್ಧಿ ಇಲಾಖೆ ಖಾತೆ

ಕೆ. ಗೋಪಾಲಯ್ಯ-ಸಣ್ಣ ಕೈಗಾರಿಕೆ

ಶ್ರೀಮಂತ ಪಾಟೀಲ್ - ಜವಳಿ ಖಾತೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಂಚಿಕೆ ಮಾಡಿದ್ದಾರೆ. ರಾಜ್ಯಪಾಲರ ಅಂಕಿತ ಹಾಕುವುದು ಮಾತ್ರ ಬಾಕಿಯಿದೆ.

English summary
CM Yeddyurappa has allocated portfolios to the ministers and sent the list to the Rajabhavan for the Governor's signature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X