ಬಿಎಸ್ವೈ ತಮ್ಮ ಪ್ರಮಾಣವಚನಕ್ಕೆ ವಿಶೇಷವಾಗಿ ಆಹ್ವಾನಿಸಿದ್ದು ಇಬ್ಬರನ್ನೇ
Recommended Video
ಬೆಂಗಳೂರು, ಜುಲೈ 26: ನಾಲ್ಕನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರಿಗೆ ಶುಕ್ರವಾರ ಸಂಜೆ ಆರು ಗಂಟೆಯ ಸಮಯವನ್ನು ರಾಜ್ಯಪಾಲರು ನಿಗದಿ ಮಾಡಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾಗುವ ಮುನ್ನ ಆಂಜನೇಯಸ್ವಾಮಿಯ ದರ್ಶನ ಪಡೆದಿರುವ ಯಡಿಯೂರಪ್ಪ, ಉಡುಪಿ ಪೇಜಾವರ ಶ್ರೀಗಳ ಆಶೀರ್ವಾದವನ್ನೂ ಪಡೆದಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾದ ನಂತರ ಮಾಧ್ಯಮದವರ ಮುಂದೆ ಮಾತನಾಡುತ್ತಾ ಯಡಿಯೂರಪ್ಪ, ಪ್ರಮಾಣವಚನ ಸಮಾರಂಭಕ್ಕೆ ವಿಶೇಷವಾಗಿ ಇಬ್ಬರನ್ನು ಆಹ್ವಾನಿಸುತ್ತಿದ್ದೇನೆಂದು ಹೇಳಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ 'ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಆಗಮಿಸಿ ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ. ಈ ಸಂಬಂಧ ಪತ್ರ ಬರೆಯಲಿದ್ದು, ದೂರವಾಣಿ ಮೂಲಕವೂ ಸಂಪರ್ಕ ಮಾಡುತ್ತೇನೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರ (ಜುಲೈ 25) ತಡರಾತ್ರಿಯವರೆಗೂ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಯಾವುದೇ ಸ್ಪಷ್ಟನೆ ಯಡಿಯೂರಪ್ಪವರಿಗೆ ಸಿಕ್ಕಿರಲಿಲ್ಲ. ಆದರೆ, ಶುಕ್ರವಾರ ಬೆಳಗ್ಗೆ ಕರೆಮಾಡಿ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕುಮಂಡಿಸಿ ಎಂದು ಶಾ ಸೂಚಿಸಿದರು ಎಂದು ಹೇಳಲಾಗುತ್ತಿದೆ.
ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯುತ್ತಿರುವುದರಿಂದ, ಪ್ರಮಾಣವಚನ ಕಾರ್ಯಕ್ರಮಕ್ಕೆ ಕೇಂದ್ರದಿಂದ ಯಾವ ನಾಯಕರು ಬರಲಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.











Click it and Unblock the Notifications