ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

16 ಶಾಸಕರಿಗೆ ಸಿಎಂ ಯಡಿಯೂರಪ್ಪ ಕರೆ: ಯಾರ್ಯಾರು ಸಂಪುಟ ಸೇರಲಿದ್ದಾರೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಖಚಿತ ಇರುವ ಶಾಸಕರಿಗೆ ಪ್ರಮಾಣವಚನಕ್ಕೆ ಬರುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಹ್ವಾನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆಗಸ್ಟ್ 20ರಂದು ಬೆಳಗ್ಗೆ 10.30ರ ಸುಮಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆಲವು ಸಂಭಾವ್ಯ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. ವಿ ಸೋಮಣ್ಣ, ಸಿಟಿ ರವಿ, ಶ್ರೀರಾಮುಲು, ಅಶ್ವತ್ಥನಾರಾಯಣ, ಶಶಿಕಲಾ ಜೊಲ್ಲೆ, ಕೆಎಸ್‌ಈಶ್ವರಪ್ಪ, ಜಗದೀಶ್ ಶೆಟ್ಟರ್, ಎಚ್‌ ನಾಗೇಶ್ ಕರೆ ಮಾಡಿದ್ದಾರೆ ಎನ್ನಲಾಗಿದೆ. ಒಟ್ಟು 16 ಮಂದಿ ಶಾಸಕರಿಗೆ ಕರೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಚಿವ ಸಂಪುಟ ವಿಸ್ತರಣೆ: ಆಪ್ತರಿಗೆ ಯಡಿಯೂರಪ್ಪ ಕೊಟ್ಟ ಸಂದೇಶ ಏನು? ಸಚಿವ ಸಂಪುಟ ವಿಸ್ತರಣೆ: ಆಪ್ತರಿಗೆ ಯಡಿಯೂರಪ್ಪ ಕೊಟ್ಟ ಸಂದೇಶ ಏನು?

ಸಂಪುಟ ವಿಸ್ತರಣೆಗೆ ಇನ್ನೂ ಕೆಲವೇ ಗಂಟೆಗಳು ಉಳಿದಿದ್ದು, ಇದುವರೆಗೂ ಬಿಜೆಪಿ ಹೈಕಮಾಂಡ್‌ನಿಂದ ಸಚಿವರ ಪಟ್ಟಿ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಖಚಿತವಿರುವ ಶಾಸಕರಿಗೆ ಕರೆ ಮಾಡಿ ಪ್ರಮಾಣವಚನಕ್ಕೆ ಆಹ್ವಾನಿಸಿದ್ದಾರೆ ಎನ್ನುವ ಮಾಹಿತಿ ಬಿಜೆಪಿ ಮೂಲದಿಂದ ಬಂದಿದೆ.

Yeddyurappa Making A Call To Probable Ministers

ಅರುಣ್ ಜೇಟ್ಲಿಯವರ ಆರೋಗ್ಯದ ಕುರಿತು ಏಮ್ಸ್ ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಬಳಿಕ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದು ನಂತರವಷ್ಟೇ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಇದುವರೆಗೂ ಸಚಿವರ ಪಟ್ಟಿ ಹೊರಬಿದ್ದಿಲ್ಲ.

ಸಚಿವರ ಪಟ್ಟಿ ಇಂದು ಅಂತಿಮ; ಆಕಾಂಕ್ಷಿಗಳಲ್ಲಿ ಢವ ಢವ! ಸಚಿವರ ಪಟ್ಟಿ ಇಂದು ಅಂತಿಮ; ಆಕಾಂಕ್ಷಿಗಳಲ್ಲಿ ಢವ ಢವ!

ಈಗಾಗಲೇ ರಾಜಭವನದ ಬಳಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. 8 ಡಿಸಿಪಿ ನೇತೃತ್ವದಲ್ಲಿ 800ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ವಿಧಾನಸೌಧ ಹಾಗೂ ರಾಜಭವನದ ಎದುರು ಭದ್ರತೆ ಕಲ್ಪಿಸಲಾಗಿದೆ.

English summary
Cabinet Expansion: Chief minister BS Yeddyurappa making call to probable ministers for swearing ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X