ಶಿಕಾರಿಪುರದಲ್ಲಿ ಬಿಎಸ್ವೈ 'ಶಿಕಾರಿ'ಗೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್?
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರನ್ನು ಅವರ ರಾಜಕೀಯ ಕರ್ಮಭೂಮಿಯಲ್ಲೇ ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯತಂತ್ರ. ಶಿಕಾರಿಪುರ ಕ್ಷೇತ್ರದಲ್ಲಿ ಪ್ರಭಲ ಅಭ್ಯರ್ಥಿಯನ್ನು ನಿಲ್ಲಿಸಲು, ಸಿದ್ದರಾಮಯ್ಯ ರಣತಂತ್ರ.
Recommended Video

ಒಂದು ಕಡೆ ಅಮಿತ್ ಶಾ ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಭಾರೀ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಪ್ರತಿ ರಣತಂತ್ರ ರೂಪಿಸುತ್ತಿದ್ದಾರೆ.
ಯಡಿಯೂರಪ್ಪ ಮನೆಯಲ್ಲಿ ದಲಿತರಿಗೆ ಊಟ, ಇದಕ್ಕೆ ಸಿದ್ದರಾಮಯ್ಯ ಲೇವಡಿ, ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗಲಿ ಮುಂತಾದ ಬಿಜೆಪಿ, ಕಾಂಗ್ರೆಸ್ ವಾಕ್ಸಮರದ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಅವರ ರಾಜಕೀಯ ಕರ್ಮಭೂಮಿಯಲ್ಲೇ ಹಣಿಯಲು ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಬೇರು ಮಟ್ಟದಲ್ಲಿ ಪಕ್ಷ ಸಂಘಟಿಸಿ, ಕಾರ್ಯಕರ್ತರನ್ನು ಹುರಿದುಂಬಿಸಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಯಡಿಯೂರಪ್ಪನವರನ್ನು, ಅವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲೇ ಸೋಲಿಸಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ನಡೆಸುತ್ತಿದ್ದಾರೆಂದು ಟಿವಿ9 ವರದಿ ಮಾಡಿದೆ.
ಯಡಿಯೂರಪ್ಪನವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮತ್ತು ಯಡಿಯೂರಪ್ಪ ಸತತವಾಗಿ ಶಿಕಾರಿಪುರದಿಂದ ಗೆಲುವು ಸಾಧಿಸಲು ಪರದೆಯ ಹಿಂದಿನ ಶಕ್ತಿಯಾಗಿರುವ ಮಹಾಲಿಂಗಪ್ಪನವರನ್ನು ಯಡಿಯೂರಪ್ಪ ವಿರುದ್ದ ಕಣಕ್ಕಿಳಿಸಲು ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನುವ ಸುದ್ದಿ ಚಾಲ್ತಿಯಲ್ಲಿದೆ.
ತನ್ನ ಕ್ಷೇತ್ರವನ್ನು ಮೊದಲು ಉಳಿಸಿಕೊಳ್ಳುವ ಅನಿವಾರ್ಯತೆಗೆ ಯಡಿಯೂರಪ್ಪ ಅವರನ್ನು ದೂಡಿ, ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ನಡೆಸಲು ಯಡಿಯೂರಪ್ಪಗೆ ಹಿನ್ನಡೆ ತರುವುದು ಸಿದ್ದರಾಮಯ್ಯ ಗೇಮ್ ಪ್ಲ್ಯಾನ್ ಎನ್ನಲಾಗುತ್ತಿದೆ. ಮುಂದೆ ಓದಿ..

ಯಡಿಯೂರಪ್ಪನವರಿಗೆ ಬೆನ್ನಿಗೆ ಬೆನ್ನಾಗಿ ನಿಂತಿದ್ದ ಪರಮಾಪ್ತ
ಸತತವಾಗಿ ಶಿಕಾರಿಪುರ ಕ್ಷೇತ್ರದಿಂದ ಗೆದ್ದು ಬರುತ್ತಿರುವ ಯಡಿಯೂರಪ್ಪನವರಿಗೆ ಬೆನ್ನಿಗೆ ಬೆನ್ನಾಗಿ ನಿಂತಿದ್ದ ಮಹಾಲಿಂಗಪ್ಪನವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿ ಮತ್ತೆ ಆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸುವಂತೆ ಮನವೊಲಿಸಿದ್ದಾರೆ ಎನ್ನುವ ಮಾಹಿತಿಯಿದೆ.

ಬಿಎಸ್ವೈ ಸೋಲಿಸಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆ
1999ರ ಅಸೆಂಬ್ಲಿ ಚುನಾವಣೆಯಲ್ಲಿ (ಶಿಕಾರಿಪುರ) ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಹಾಲಿಂಗಪ್ಪ, ಯಡಿಯೂರಪ್ಪನವರನ್ನು ಸೋಲಿಸಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಆನಂತರ ಇಬ್ಬರು ನಾಯಕರ ಸಂಧಾನದ ನಂತರ ಮಹಾಲಿಂಗಪ್ಪ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆ ಚುನಾವಣೆಯಲ್ಲಿ ಮಹಾಲಿಂಗಪ್ಪ 7561 ಮತಗಳ ಅಂತರದಿಂದ ಬಿಎಸ್ವೈ ಅವರನ್ನು ಸೋಲಿಸಿದ್ದರು. ಮಹಾಲಿಂಗಪ್ಪಗೆ 55852 ಮತಗಳು, ಯಡಿಯೂರಪ್ಪಗೆ 48291 ಮತಗಳು ಬಂದಿದ್ದವು.

ಯಡಿಯೂರಪ್ಪನವರಿಗೆ ಸಾಥ್ ನೀಡಿದ್ದ ಮಹಾಲಿಂಗಪ್ಪ
ಅಂದಿನ ಸುಮಾರು ಹದಿನೆಂಟು ವರ್ಷಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಯಡಿಯೂರಪ್ಪನವರಿಗೆ ಸಾಥ್ ನೀಡಿದ್ದ ಮಹಾಲಿಂಗಪ್ಪ, ಚುನಾವಣಾ ಈ ವರ್ಷದಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಯಿದೆ.

ಸಾದರ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡ
ಸಾದರ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಮಹಾಲಿಂಗಪ್ಪ ಅವರನ್ನು ಕಣಕ್ಕಿಳಿಸುವ ಮೂಲಕ, ಲಿಂಗಾಯಿತ ಮತಬ್ಯಾಂಕ್ ಅನ್ನು ಇಬ್ಬಾಗಿಸಿ, ಯಡಿಯೂರಪ್ಪನವರನ್ನು ಸೋಲಿಸುವ ರಾಜಕೀಯ ತಂತ್ರ ಸಿದ್ದರಾಮಯ್ಯ ಬಳಸುವ ಸಾಧ್ಯತೆಯಿದೆ.

ಸಹಕಾರ ನೀಡುವುದಾಗಿ ಸಿದ್ದರಾಮಯ್ಯ ಅಭಯ
ಟಿವಿ9 ವರದಿ ಪ್ರಕಾರ, ಸಿಎಂ ಸಿದ್ದರಾಮಯ್ಯ, ಮಹಾಲಿಂಗಪ್ಪನವರ ಜೊತೆ ಮಾತುಕತೆ ನಡೆಸಿ ಕಾಂಗ್ರೆಸ್ ಸೇರುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಎಲ್ಲಾ ರೀತಿಯಿಂದ ಸಹಕಾರ ನೀಡುವುದಾಗಿ ಅಭಯ ನೀಡಿದ್ದಾರೆಂದು ವಾಹಿನಿ ವರದಿ ಮಾಡಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications