'ವಿಮಾನ ನಿಲ್ದಾಣಕ್ಕೆ ಮರುನಾಮಕರಣದ ಅಗತ್ಯವಿಲ್ಲ'
ಬೆಂಗಳೂರು, ನವೆಂಬರ್ 11 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಗಿರೀಶ್ ಕಾರ್ನಾಡ್ ನೀಡಿರುವ ಹೇಳಿಕೆಯನ್ನು ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ಅಪರಾಧಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು, 'ಇತಿಹಾಸ ಏನೇ ಇರಬಹುದು, ಆದರೆ ಈಗಾಗಲೇ ನಾಮಕರಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವ ಹೇಳಿಕೆ ನೀಡಿರುವುದು ಸರಿಯಲ್ಲ' ಎಂದು ಹೇಳಿದ್ದಾರೆ. [ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಿ : ಕಾರ್ನಾಡ್]

'ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಸರಿಯಲ್ಲ. ಈ ಹೇಳಿಕೆ ಸಮಾಜದಲ್ಲಿ ಅಶಾಂತಿ ಮತ್ತು ಗೊಂದಲದ ವಾತಾವರಣ ಸೃಷ್ಟಿಸುವುದರಲ್ಲಿ ಸಂಶಯವಿಲ್ಲ. ಸಾಹಿತಿಗಳ ಹೇಳಿಕೆಯನ್ನು ನಾನು ಖಂಡಿಸುತ್ತೇನೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.[ಮಡಿಕೇರಿಯಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣ]
ಘಟನೆ ಬಗ್ಗೆ ಸೂಕ್ತ ತನಿಖೆಯಾಗಬೇಕು : ಸಮಾಜ ಘಾತಕ ಶಕ್ತಿಗಳನ್ನು ನಿಗ್ರಹಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿರುವ ಯಡಿಯೂರಪ್ಪ ಅವರು, ಮಡಿಕೇರಿಯಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕಾರ್ನಾಡ್ ಏನು ಹೇಳಿದ್ದರು? : ನವೆಂಬರ್ 10ರ ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗಿರೀಶ್ ಕಾರ್ನಾಡ್ ಅವರು, 'ಕೆಂಪೇಗೌಡರು ಬೆಂಗಳೂರನ್ನು ಕಟ್ಟಿರಬಹುದು. ಆದರೆ, ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ. ಆದ್ದರಿಂದ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕು' ಎಂದು ಹೇಳಿದ್ದರು.
My Statement on Tipu Jayanti.State Govt. completely failed in controlling law and order situation. http://yeddyurappa.in/news-and-events/bsy-statement-on-tipu-jayanti/
Posted by BS Yeddyurappa onTuesday, November 10, 2015












Click it and Unblock the Notifications