ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 2018 ರಿಂದ ನಡೆದಿರುವ ಫೋನ್ ಟ್ಯಾಪಿಂಗ್ ಬಗ್ಗೆ ಸಿಬಿಐ ತನಿಖೆ

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಫೊನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಘೊಷಿಸಿದ್ದ ಯಡಿಯೂರಪ್ಪ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.

2018 ರ ಆಗಸ್ಟ್‌ 1 ನೇ ತಾರೀಖಿನಿಂದ ಕುಮಾರಸ್ವಾಮಿ ಅವರ ಅವಧಿ ಮುಗಿಯುವವರೆಗೂ ಆಗಿರಬಹುದಾದ ಫೋನ್ ಕದ್ದಾಲಿಕೆಯ ಬಗ್ಗೆ ಸಿಬಿಐ ತನಿಖೆ ನಡೆಸಲಿದೆ. ಈ ಬಗ್ಗೆ ಯಡಿಯೂರಪ್ಪ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಫೋನ್ ಟ್ಯಾಪಿಂಗ್ ಪ್ರಕರಣ ಬಿಜೆಪಿಗೆ ಸಿಕ್ಕ ಬ್ರಹ್ಮಾಸ್ತ್ರ!ಫೋನ್ ಟ್ಯಾಪಿಂಗ್ ಪ್ರಕರಣ ಬಿಜೆಪಿಗೆ ಸಿಕ್ಕ ಬ್ರಹ್ಮಾಸ್ತ್ರ!

ತನಿಖೆಯ ಅವಧಿಯನ್ನು ನಿಗದಿಗೊಳಿಸಿರುವುದು ಗಮನಿಸಿದಲ್ಲಿ ಕುಮಾರಸ್ವಾಮಿ ಅವರ ವಿರುದ್ಧವೇ ತನಿಖೆಯ ಗುರಿ ನೆಟ್ಟಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಫೋನ್ ಟ್ಯಾಪಿಂಗ್ ಆರೋಪ ಬಂದಿರುವುದು ಅವರ ಮೇಲೆಯೇ ಆದ್ದರಿಂದ ಇದು ನಿರೀಕ್ಷಿತವೂ ಆಗಿದೆ.

Yeddyurappa order to hand over phone tapping case to CBI

ಸಿದ್ದರಾಮಯ್ಯ ಒತ್ತಾಯದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುತ್ತಿರುವುದಾಗಿ ಈ ಮುಂಚೆ ಹೇಳಿದ್ದ ಯಡಿಯೂರಪ್ಪ ಅವರು ವರಸೆ ಬದಲಿಸಿದ್ದು 'ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಅಂತಿಮ ಮೊಳೆ ಹೊಡೆಯುವ ಬಿಜೆಪಿ ಮಾಸ್ಟರ್ ಪ್ಲ್ಯಾನ್? ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಅಂತಿಮ ಮೊಳೆ ಹೊಡೆಯುವ ಬಿಜೆಪಿ ಮಾಸ್ಟರ್ ಪ್ಲ್ಯಾನ್?

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಅವರು ಈಗಾಗಲೇ ಖಂಡಿಸಿದ್ದಾರೆ. ಆಪರೇಷನ್ ಕಮಲ ಪ್ರಕರಣವನ್ನೂ ಸಿಬಿಐ ತನಿಖೆಗೆ ಕೊಡಿ ಎಂದು ಅವರು ಒತ್ತಾಯಿಸಿದ್ದಾರೆ. ಸಿಬಿಐ ಪಾರದರ್ಶಕವಾಗಿ ತನಿಖೆ ನಡೆಸುವ ಬಗ್ಗೆಯೂ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

English summary
Yediyurappa ordered today to hand over the phone tapping case to CBI. CBI will investigate phone tapping happened from last year August.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X