ಜೆಡಿಎಸ್ ಸೇರಿದ ಯಡಿಯೂರಪ್ಪ ಆಪ್ತ ಹೇಳಿದ್ದೇನು?
Recommended Video

ಬೆಂಗಳೂರು, ಜನವರಿ 24 : ಒಂದು ಕಾಲದಲ್ಲಿ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಆರ್.ಎಂ.ಮಂಜುನಾಥ ಗೌಡರು ಜೆಡಿಎಸ್ ಸೇರಿದ್ದಾರೆ. 2018ರ ಚುನಾವಣೆಯಲ್ಲಿ ಅವರು ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಜೆಡಿಎಸ್ ಸೇರಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಂಜುನಾಥ ಗೌಡರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಂಜುನಾಥ ಗೌಡರು ಜೆಡಿಎಸ್ ಸೇರುತ್ತಿದ್ದಂತೆ ತೀರ್ಥಹಳ್ಳಿಯಲ್ಲಿಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 1,793 ಮತಗಳ ಅಂತರದಿಂದ ಸೋತಿದ್ದ ಮಂಜುನಾಥ ಗೌಡರು, ಜೆಡಿಎಸ್ ಸೇರಿರುವುದು ಕ್ಷೇತ್ರದ ರಾಜಕೀಯ ಚಿತ್ರವಣನ್ನು ಬದಲಾಯಿಸಿದೆ.
'ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಕಟ್ಟಲು ಬದ್ಧವಾಗಿರುತ್ತೇನೆ ಎಂದು ದೇವೇಗೌಡರಿಗೆ ವಾಗ್ದಾನ ನೀಡಿದ್ದೇನೆ' ಎಂದು ಮಂಜುನಾಥ ಗೌಡರು ಹೇಳಿದ್ದಾರೆ. ತೀರ್ಥಹಳ್ಳಿಯ ಮತ್ತಷ್ಟ ನಾಯಕರು ಶೀಘ್ರದಲ್ಲಿಯೇ ಜೆಡಿಎಸ್ ಸೇರುವ ಸಾಧ್ಯತೆ ಇದೆ. 'ವಿವಿಧ ಪಕ್ಷಗಳ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ' ಎಂದು ಮಂಜುನಾಥ ಗೌಡರು ಕೆಲವು ದಿನಗಳ ಹಿಂದೆ ಹೇಳಿದ್ದರು.

ವಾಪಸ್ ಬಂದಿದ್ದು ಸಂತಸ ತಂದಿದೆ
'ಮಾತೃ ಪಕ್ಷಕ್ಕೆ ವಾಪಸ್ ಆಗುತ್ತಿರುವುದು ಸಂತಸ ತಂದಿದೆ. 1986-96ರ ತನಕ ನಾನು ಜೆಡಿಎಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ' ಎಂದು ಆರ್.ಎಂ.ಮಂಜುನಾಥ ಗೌಡರು ಹೇಳಿದರು.

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ
'ಜನವರಿ 9ರಂದು ತೀರ್ಥಹಳ್ಳಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಸಿದ್ದೆ. ಆಗ ಎಲ್ಲರೂ ಜೆಡಿಎಸ್ ಸೇರಿ ಎಂದು ಸಲಹೆ ನೀಡಿದ್ದರು. ಅವರ ತೀರ್ಮಾನದಂತೆ ಪಕ್ಷ ಸೇರಿದ್ದೇನೆ' ಎಂದು ಮಂಜುನಾಥ ಗೌಡರು ಹೇಳಿದ್ದಾರೆ.

ಬೃಹತ್ ಸಮಾವೇಶ ಆಯೋಜನೆ
'ಮುಂದಿನ ದಿನಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದೇನೆ. ಶಿವಮೊಗ್ಗದಲ್ಲಿ ಪಕ್ಷ ಕಟ್ಟಲು ಬದ್ಧವಾಗಿದ್ದೇನೆ' ಎಂದರು.

ಕೆಜೆಪಿ ಅಭ್ಯರ್ಥಿಯಾಗಿದ್ದರು
ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಆರ್.ಎಂ.ಮಂಜುನಾಥ ಗೌಡರು ಕಳೆದ ಚುನಾವಣೆಯಲ್ಲಿ ತೀರ್ಥಹಳ್ಳಿಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.35, 817 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications