ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್‌ ತನಕ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ!

|
Google Oneindia Kannada News

Recommended Video

ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಯಾವಾಗ ಗೊತ್ತಾ?

ಬೆಂಗಳೂರು, ಮೇ 03 : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಸುದ್ದಿ ಹಬ್ಬಿದೆ. ಆದರೆ, ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಕಾದು ನೋಡುವ ತಂತ್ರ ಅನುಸರಿಸಲಿದೆ.

76 ವರ್ಷದ ಯಡಿಯೂರಪ್ಪ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಹೊಂದಿದ್ದಾರೆ. ಆದರೆ, ಆಗಸ್ಟ್‌ ತಿಂಗಳ ತನಕ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದಿಲ್ಲ.

ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?

2016ರಲ್ಲಿ ಕರ್ನಾಟಕ ಸೇರಿ 4 ರಾಜ್ಯಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರ ನೇಮಕ ಪಕ್ಷದ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಪ್ರಕ್ರಿಯೆ. ಆದ್ದರಿಂದ, ಪಕ್ಷ ಲೋಕಸಭಾ ಚುನಾವಣೆ ಮುಗಿದ ತಕ್ಷಣ ರಾಜ್ಯಾಧ್ಯಕ್ಷರ ಬದಲಾವಣೆಗೆ ಕೈ ಹಾಕುವುದಿಲ್ಲ.

ಯಡಿಯೂರಪ್ಪ ಟೀಕೆಗೆ ಟ್ವಿಟರ್‌ನಲ್ಲಿ ಉತ್ತರ ಕೊಟ್ಟ ಕುಮಾರಸ್ವಾಮಿಯಡಿಯೂರಪ್ಪ ಟೀಕೆಗೆ ಟ್ವಿಟರ್‌ನಲ್ಲಿ ಉತ್ತರ ಕೊಟ್ಟ ಕುಮಾರಸ್ವಾಮಿ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿಲ್ಲ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಆದ್ದರಿಂದ, ಬಿಜೆಪಿ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರಿಕೆಯ ಹೆಜ್ಜೆ ಇಡಲಿದೆ. ಯಡಿಯೂರಪ್ಪ ನಂತರ ಮುಂದಿನ ಅಧ್ಯಕ್ಷರು ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ....

ಕಾದು ನೋಡುವ ತಂತ್ರ

ಕಾದು ನೋಡುವ ತಂತ್ರ

ಕೇಂದ್ರ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಕಾರ್ಯಕ್ಕೆ ಕೈ ಹಾಕುವುದಿಲ್ಲ. ಕಾದು ನೋಡುವ ತಂತ್ರ ಅನುಸರಿಸಲಿದ್ದಾರೆ. ಆಗಸ್ಟ್‌ ತಿಂಗಳ ತನಕ ಯಡಿಯೂರಪ್ಪ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಬಳಿಕ ಬದಲಾವಣೆಯಾಗುವ ನಿರೀಕ್ಷೆ ಇದೆ.

ಇತರ ರಾಜ್ಯಗಳಲ್ಲೂ ಬದಲಾವಣೆ

ಇತರ ರಾಜ್ಯಗಳಲ್ಲೂ ಬದಲಾವಣೆ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ರಾಷ್ಟ್ರಮಟ್ಟದಲ್ಲಿ ನಡೆಯುವ ಪ್ರಕ್ರಿಯೆ. 2016ರಲ್ಲಿ ಕರ್ನಾಟಕ ಸೇರಿ 4 ರಾಜ್ಯಗಳಿಗೆ ಒಟ್ಟಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಈಗ ಕೇವಲ ಒಂದು ರಾಜ್ಯದ ಅಧ್ಯಕ್ಷರನ್ನು ಬದಲಾವಣೆ ಮಾಡುವುದಿಲ್ಲ, ಎಲ್ಲಾ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಬದಲಾವಣೆ ಪ್ರಕ್ರಿಯೆ ಆರಂಭಿಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ನಾನಿಲ್ಲ : ಶೋಭಾ ಕರಂದ್ಲಾಜೆ ಬಿಜೆಪಿ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ನಾನಿಲ್ಲ : ಶೋಭಾ ಕರಂದ್ಲಾಜೆ

ಸರ್ಕಾರ ಬಿದ್ದು ಹೋದರೆ?

ಸರ್ಕಾರ ಬಿದ್ದು ಹೋದರೆ?

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಬಿದ್ದು ಹೋಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಆಗುವ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ನೇಮಕವನ್ನು ಮಾಡಲಾಗುತ್ತದೆ.

ಹಿಂದೆಯೂ ಕೇಳಿಬಂದಿತ್ತು

ಹಿಂದೆಯೂ ಕೇಳಿಬಂದಿತ್ತು

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಯಡಿಯೂರಪ್ಪ ಬದಲಾವಣೆ ಬಗ್ಗೆ ಚರ್ಚೆ ನಡೆದಿತ್ತು. ಯಡಿಯೂರಪ್ಪ ಅವರು ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹೊಂದಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಂತೆ ಬದಲಾವಣೆ ಆಗಬೇಕು ಎಂದು ಚರ್ಚೆಯಾಗಿತ್ತು.

English summary
Rumours that Karnataka BJP president B.S.Yeddyurappa may be changed soon after Lok sabha elections 2019 result. But party central leadership may wait till August for any change
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X