ತುಮಕೂರು, ಜನವರಿ 12: ಮುಂದಿನ ಚುನಾವಣೆಯಲ್ಲಿ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡಿದರೆ ನಿಮ್ಮ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಅವರು ಎಚ್ಚರಿಸಿದ್ದಾರೆ.
ಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್ವೈ ಟ್ವೀಟ್ ಬಾಣ
ಗುರುವಾರ ತುಮಕೂರಿನ ಶಿರಾದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, "ಮೂರು ನಾಲ್ಕು ತಿಂಗಳ ನಂತರ ನಾನು ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂಬುದನ್ನು ನಾನು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹೇಳಲು ಇಚ್ಛಿಸುತ್ತೇನೆ," ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
"ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಕಾನೂನಿಗೆ ವಿರುದ್ಧವಾಗಿ ನಮ್ಮ ಕಾರ್ಯಕರ್ತರ ಹೆಸರನ್ನು ರೌಡಿಗಳ ಪಟ್ಟಿಗೆ ಸೇರಿಸಿ ಭಯದ ವಾತಾವರಣ ಸೃಷ್ಟಿಸುವ, ಕಾಂಗ್ರೆಸ್ ಸರಕಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಅಧಿಕಾರಿಗಳ ಪರಿಸ್ಥಿತಿ ಸರಿ ಇರುವುದಿಲ್ಲ ಎಂಬ ಎಚ್ಚರಿಕೆಯನ್ನು ನಾನು ನೀಡಲು ಇಚ್ಛಿಸುತ್ತೇನೆ," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರ.subscribe to Kannada Oneindia.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!