ಕರ್ನಾಟಕಕ್ಕೆ ರಾಹುಲ್ ಗಾಂಧಿ, ಸ್ವಾಗತ ಕೋರಿದ ಯಡಿಯೂರಪ್ಪ!

Posted By: Gururaj
Subscribe to Oneindia Kannada

ಬೆಂಗಳೂರು, ಫೆಬ್ರವರಿ 09 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ.10ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿ ಟ್ವಿಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ರಾಜ್ಯ ಪ್ರವಾಸ : ಕಾರ್ಯಕ್ರಮಗಳ ಪಟ್ಟಿ

ಫೆ.10ರಂದು ರಾಹುಲ್ ಗಾಂಧಿ ಬಳ್ಳಾರಿಗೆ ಆಗಮಿಸಲಿದ್ದು ಬಹೃತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಫೆ.13ರ ತನಕ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಕರ್ನಾಟಕ ಬರಲಿರುವ ರಾಹುಲ್ ಗಾಂಧಿಗೆ ದಲಿತರಿಂದ ಪ್ರತಿಭಟನೆ ಸ್ವಾಗತ

ಯಡಿಯೂರಪ್ಪ ಶುಕ್ರವಾರ ಸಂಜೆ ಟ್ವಿಟ್ ಮಾಡಿ. 'ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ ಎಂದು ಹೇಳಿದ್ದಾರೆ. ಈ ಹಿಂದೆ ಅವರು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ರಾಹುಲ್ ಬರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ' ಎಂದು ಹೇಳಿದ್ದಾರೆ.

Yeddyurappa welcomes Rahul Gandhi to Karnataka

ಟ್ವಿಟ್‌ನಲ್ಲಿ ಯಡಿಯೂರಪ್ಪ ವಿಡಿಯೋವೊಂದನ್ನು ಸೇರಿಸಿದ್ದಾರೆ. ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣ ವಿಡಿಯೋ ತುಣುಕು ಇದಾಗಿದೆ.

'ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲ. ರಾಯಬರೇಲಿ ಮತ್ತು ಅಮೇಥಿಯಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಯೋಗಿ ಆದಿತ್ಯನಾಥ್ ಕ್ರಾಂತಿಕಾರಕ ಬದಲಾವಣೆಗಳನ್ನು ಮಾಡಿದ್ದಾರೆ'

'ಹೀಗಾಗಿ ಎಲ್ಲೂ ಅವರಿಗೆ ಅವಕಾಶಗಳಿಲ್ಲ. ಆದ್ದರಿಂದ ಮುಂದಿನ ಲೋಕಸಭೆ ಚುನಾವಣೆಗೆ ಬಳ್ಳಾರಿಯಿಂದ ಸ್ಪರ್ಧಿಸಬಹುದಾ? ಎಂದು ಜನ ಸೇರಿಸಲು ಬಂದಿದ್ದಾರೆ' ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ರಾಹುಲ್ ಭೇಟಿ ಸಂತೆ ಮುಂದೂಡಿಕೆ : ಕುಷ್ಟಗಿ ಪಟ್ಟಣದಲ್ಲಿ ಫೆ. 11 ರಂದು ನಡೆಯಬೇಕಿದ್ದ ವಾರದ ಸಂತೆಯನ್ನು ಮುಂದೂಡಲಾಗಿದೆ. ರಾಹುಲ್ ಗಾಂಧಿ ಅವರು ಕುಷ್ಟಗಿಯಲ್ಲಿ ಫೆ.11ರಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಾನುವಾರ ನಡೆಯುವ ವಾರದ ಸಂತೆಯನ್ನು ಮುಂದೂಡಿದ್ದು, ಫೆ. 11 ರಂದು ರೈತರು ಜಾನುವಾರುಗಳನ್ನು ಮಾರುಕಟ್ಟೆಗೆ ಮಾರಾಟಕ್ಕೆ ಅಥವಾ ಖರೀದಿಗಾಗಿ ತರಬಾರದು ಎಂದು ಕುಷ್ಟಗಿ ಎಪಿಎಂಸಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP president B.S.Yeddyurappa welcomes AICC president Rahul Gandhi to Karnataka. Rahul Gandhi will tour in poll bound state from February 10 to 13, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ