• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಸ್ತೂರಿ ರಂಗನ್ ವರದಿ ಏಕ ರೂಪದ ಅಧಿಸೂಚನೆ ತಿರಸ್ಕಾರ

|

ಬೆಂಗಳೂರು, ಮೇ 21: ''ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಸ್ತೂರಿ ರಂಗನ್ ವರದಿ ಬಗ್ಗೆ ವಾದ ಮಂಡಿಸಿದ್ದಾರೆ.

   ಮನುಷ್ಯರಿಗೆ ಕಚ್ಚುವುದು ಹೆಣ್ಣು ಸೊಳ್ಳೆಗಳಾ ಅಥವಾ ಗಂಡು ಸೊಳ್ಳೆಗಳಾ? | Female Mosquito

   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತು ಚರ್ಚಿಸಿದರು.

   ರೇಷ್ಮೆ ಬೆಳೆಗಾರರಿಗೆ ಸಂತಸದ ಸುದ್ದಿ ನೀಡಿದ ಕರ್ನಾಟಕ ಸರ್ಕಾರ

   ಈ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ.

   ಕಸ್ತೂರಿ ರಂಗನ್ ವರದಿ: ಕೇಂದ್ರದ ಅಧಿಸೂಚನೆಗೆ ಕರ್ನಾಟಕದ ವಿರೋಧ

   ಪ್ರತಿ ರಾಜ್ಯದೊಂದಿಗೆ ಪ್ರತ್ಯೇಕ ಮಾತುಕತೆ

   ಪ್ರತಿ ರಾಜ್ಯದೊಂದಿಗೆ ಪ್ರತ್ಯೇಕ ಮಾತುಕತೆ

   ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತ ಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು.

   ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು/ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

   2015ರ ಕರಡು ಅಧಿಸೂಚನೆ

   2015ರ ಕರಡು ಅಧಿಸೂಚನೆ

   ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಹರಡಿಕೊಂಡಿರುವ ಜೀವ ವೈವಿಧ್ಯ ತಾಣ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆ ನಡೆಸದಂತೆ ನಿರ್ಬಂಧ ಹೇರಿ ಕೇಂದ್ರ ಸರ್ಕಾರ 2015ರಲ್ಲಿ ಕರಡು ಅಧಿಸೂಚನೆ ಹೊರಡಿಸಿತ್ತು. ರಾಜ್ಯದ ಪಶ್ಚಿಮ ಘಟ್ಟದ ನೂರಾರು ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿ ಆಧಾರದಲ್ಲಿ ಕೇಂದ್ರ ಸರಕಾರ 'ಪರಿಸರ ಸೂಕ್ಷ್ಮ' ಪ್ರದೇಶ ಎಂದು ಘೋಷಿಸಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

   ಜನ ವಸತಿ ಪ್ರದೇಶಗಳು ಜೀವಸೂಕ್ಷ್ಮ ಪ್ರದೇಶ'

   ಜನ ವಸತಿ ಪ್ರದೇಶಗಳು ಜೀವಸೂಕ್ಷ್ಮ ಪ್ರದೇಶ'

   ಕಸ್ತೂರಿ ರಂಗನ್ ವರದಿ ಆಧಾರದಲ್ಲಿ ಅರಣ್ಯದ ಆಸು ಪಾಸು ಸೇರಿದಂತೆ ಜನ ವಸತಿ ಪ್ರದೇಶಗಳನ್ನೂ 'ಜೀವಸೂಕ್ಷ್ಮ ಪ್ರದೇಶ'ಗಳೆಂದು ಪರಿಗಣಿಸಲು ವರದಿ ಶಿಫಾರಸು ಮಾಡಿತ್ತು. ಆದರೆ ಕನಾ೯ಟಕ ಸರಕಾರವು ಇದನ್ನು ಮೀಸಲು ಅರಣ್ಯಕ್ಕೆ ಮಾತ್ರ ಸೀಮಿತಗೊಳಿಸಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಸರಕಾರ ರಾಜ್ಯದ ಮನವಿ ಪರಿಗಣಿಸದೇ ಕರಡು ಅಧಿಸೂಚನೆ ಹೊರಡಿಸಿದ್ದನ್ನು ಈ ಹಿಂದಿನ ಸರ್ಕಾರಗಳು ವಿರೋಧಿಸಿವೆ.

   ಕರ್ನಾಟಕದ ವಾದಕ್ಕೆ ಮನ್ನಣೆ ಸಿಕ್ಕಿಲ್ಲ

   ಕರ್ನಾಟಕದ ವಾದಕ್ಕೆ ಮನ್ನಣೆ ಸಿಕ್ಕಿಲ್ಲ

   ಕರ್ನಾಟಕದ ವಾದ ಏನಂದರೆ, ಕಸ್ತೂರಿ ರಂಗನ್ ವರದಿಯನ್ನು ರಾಷ್ಟ್ರೀಯ ಉದ್ಯಾನ, ವನ್ಯಜೀವಿಧಾಮ ಮತ್ತು ಸಂರಕ್ಷಿತ ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಬೇಕೆಂಬುದಾಗಿದೆ. ಇದನ್ನ ರಾಜ್ಯ ಸರ್ಕಾರ ವರದಿಯಲ್ಲಿ ಕೂಡಾ ತಿಳಿಸಿತ್ತು. ಕರ್ನಾಟಕದ ಮನವಿಗೆ ಉತ್ತರಿಸದ ಕೇಂದ್ರ ಸರ್ಕಾರ , ಕೇರಳದ ಆಕ್ಷೇಪಣೆಯನ್ನು ಮನ್ನಿಸಿ ಅಲ್ಲಿನ ಕೆಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಿಂದ ಹೊರಗಿಟ್ಟಿತ್ತು.

   ಸೂಕ್ಷ್ಮ ಪ್ರದೇಶಗಳಿಂದ 19 ಕಿ.ಮೀ ವ್ಯಾಪ್ತಿಯವರೆಗೆ ನಿರ್ಬಂಧ

   ಸೂಕ್ಷ್ಮ ಪ್ರದೇಶಗಳಿಂದ 19 ಕಿ.ಮೀ ವ್ಯಾಪ್ತಿಯವರೆಗೆ ನಿರ್ಬಂಧ

   ಕೇಂದ್ರ ಸರ್ಕಾರ ‘ಪರಿಸರ ಸೂಕ್ಷ್ಮ' ಎಂದು ಘೋಷಿಸಿದ ಪ್ರದೇಶದಲ್ಲಿ ಮುಂದೆ ಯಾವುದೇ ಅಭಿವೃದ್ಧಿ ಚಟುವಟಿಕೆ ನಡೆಸಲು ಅನುಮತಿ ಇಲ್ಲ. ಒಂದು ವೇಳೆ ಇಂತಹ ಪ್ರಯತ್ನ ಮಾಡಿದರೇ ಅದು ಕಾನೂನು ಬಾಹಿರವಾಗುತ್ತದೆ. ಅಷ್ಟೇ ಅಲ್ಲ, ಆ ಭೂಮಿಯನ್ನು ಮಾರಾಟ ಮಾಡುವಂತಿಲ್ಲ. ಅಲ್ಲಿ ಮನೆ ನಿರ್ಮಾಣ ಮಾಡುವಂತಿಲ್ಲ. ಇದರ ಜೊತೆಗೆ ಇಂತಹ ಸೂಕ್ಷ್ಮ ಪ್ರದೇಶಗಳಿಂದ 19 ಕಿ.ಮೀ ವ್ಯಾಪ್ತಿಯವರೆಗೆ ನಿರ್ಬಂಧ ವಿಧಿಸಲಾಗಿದೆ.

   English summary
   Kasturi Rangan report implementation: CM BS Yediyruppa attends video conference chaired by Union Minister Prakash Javadekar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X