ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಬೆಂಗಳೂರು ಪ್ರದಕ್ಷಿಣೆ ನಾಟಕ: ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : "ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರು ನಗರದ ಪರಿವೀಕ್ಷಣೆ ಎಂಬ ನಾಟಕವಾಡುತ್ತಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

Recommended Video

ಯಡಿಯೂರಪ್ಪ ನೀಡಿದ ಎಚ್ಚರಿಕೆ ಕೇಳಿ ಬೆಚ್ಚಿಬಿದ್ದ ಬಿಜೆಪಿ ಶಾಸಕರು. | dk shivakumar

ಭಾನುವಾರ ಟ್ವಿಟರ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಕರ್ನಾಟಕ ಸರ್ಕಾರವನ್ನು ಟೀಕಿಸಿದರು. "ಪರಿಹಾರ ಧನವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿರೋದು ನಮ್ಮ ರಾಜ್ಯದ ದುರ್ದೈವ" ಎಂದು ದೂರಿದರು.

ಮಲೆನಾಡಿನಲ್ಲಿ ಆರ್ಭಟಿಸಿದೆ ಮಳೆ; ಆವರಿಸಿದ ಭೀತಿಮಲೆನಾಡಿನಲ್ಲಿ ಆರ್ಭಟಿಸಿದೆ ಮಳೆ; ಆವರಿಸಿದ ಭೀತಿ

"ಚಂದ್ರಯಾನ ವೀಕ್ಷಿಸಲು ಬೆಂಗಳೂರಿಗೆ ಮಾನ್ಯ ಪ್ರಧಾನಿ ನರೇಂದ್ರ ‌ಮೋದಿಯವರು ಬಂದು ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ. ಆದರೆ, ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು, ಮಕ್ಕಳನ್ನು ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರವನ್ನೂ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ" ಎಂದು ಹೇಳಿದರು.

ಕರ್ನಾಟಕ ಪ್ರವಾಹ : ನಷ್ಟದ ಲೆಕ್ಕ ಕೊಟ್ಟ ಸರ್ಕಾರಕರ್ನಾಟಕ ಪ್ರವಾಹ : ನಷ್ಟದ ಲೆಕ್ಕ ಕೊಟ್ಟ ಸರ್ಕಾರ

Yediyurappa Bengaluru City Rounds Is A Drama Says Kumaraswamy

"ರಾಜ್ಯದಲ್ಲಿ ‌ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಪ್ರಧಾನಿಗಳು ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ಪರಿಹಾರ ಧನವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿರೋದು ನಮ್ಮ ರಾಜ್ಯದ ದುರ್ದೈವ" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಧಾರವಾಡದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್‌ಗಳ ಆಸರೆಧಾರವಾಡದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್‌ಗಳ ಆಸರೆ

"ಯಡಿಯೂರಪ್ಪನವರು ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ, ಬೆಂಗಳೂರು ನಗರದ ಪರಿವೀಕ್ಷಣೆ ಎಂಬ ನಾಟಕವಾಡುತ್ತಿದ್ದಾರೆ" ಎಂದು ಕುಮಾರಸ್ವಾಮಿ ಆರೋಪಿಸಿದರು.

ಮುಖ್ಯಮಂಮತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಭಾನುವಾರ ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಯಡಿಯೂರಪ್ಪ ಬಳಿಯೇ ಇದೆ.

English summary
Karnataka Chief Minister B.S.Yediyurappa Bengaluru city rounds is a drama said former CM H.D.Kumaraswamy. Yediyurappa failed to bring fund for flood hit districts of state he alleged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X