ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ನಿಗಮ/ಮಂಡಳಿ ಅಧ್ಯಕ್ಷರ ನೇಮಕ ರದ್ದುಗೊಳಿಸಿದ ಸಿಎಂ

|
Google Oneindia Kannada News

ಬೆಂಗಳೂರು, ಜುಲೈ 29 : ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುತ್ತಿದ್ದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿಗಮ-ಮಂಡಳಿ ಕಡೆ ಗಮನ ಹರಿಸಿದ್ದಾರೆ. ಎಲ್ಲಾ ನಿಗಮ-ಮಂಡಳಿ ಅಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ನಿಗಮ/ಮಂಡಳಿ/ಪ್ರಾಧಿಕಾರ/ಆಯೋಗ ಸಂಸ್ಥೆಗಳಲ್ಲಿನ ಅಧಿಕಾರೇತರ ಅಧ್ಯಕ್ಷರು/ಉಪಾಧ್ಯಕ್ಷರು/ನಿರ್ದೇಶಕರು/ಸದಸ್ಯರ ನಾಮ ನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.

ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆದಿತ್ತು. ಹೊಸ ಸರ್ಕಾರ ಬರುತ್ತಿದ್ದಂತೆ ಎಲ್ಲಾ ನೇಮಕಾತಿಗಳನ್ನು ರದ್ದುಪಡಿಸಲಾಗಿದೆ. ಸರ್ಕಾರ ಶೀಘ್ರದಲ್ಲಿಯೇ ಹೊಸ ನೇಮಕಗಳನ್ನು ಮಾಡಲಿದೆ.

ವಿಶ್ವಾಸಮತ ಗೆದ್ದ ಯಡಿಯೂರಪ್ಪ, 6 ತಿಂಗಳು ಸರ್ಕಾರ ಸೇಫ್ವಿಶ್ವಾಸಮತ ಗೆದ್ದ ಯಡಿಯೂರಪ್ಪ, 6 ತಿಂಗಳು ಸರ್ಕಾರ ಸೇಫ್

Yediyurappa Cancelled All Board And Corporation Appointment

ಈ ಬಗ್ಗೆ ಮುಂದಿನ ಆದೇಶ ಆಗುವ ತನಕ ಈ ನಿಗಮ/ಮಂಡಳಿ/ಪ್ರಾಧಿಕಾರ/ಆಯೋಗ ಸಂಸ್ಥೆಗಳಿಗೆ ಸಂಬಂಧಪಟ್ಟ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೂ ನಿಂತಿಲ್ಲ ಆಪರೇಷನ್ ಕಮಲ?ಬಿಜೆಪಿ ಅಧಿಕಾರಕ್ಕೆ ಬಂದರೂ ನಿಂತಿಲ್ಲ ಆಪರೇಷನ್ ಕಮಲ?

ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಿಗಮ/ಮಂಡಳಿ ನೇಮಕದ ವಿಚಾರದಲ್ಲಿ ಜಟಾಪಟಿ ನಡೆದಿತ್ತು. ಕಾಂಗ್ರೆಸ್ ಶಿಫಾರಸು ಮಾಡಿದ್ದ 19 ನಿಗಮ/ಮಂಡಳಿಗಳ ಪೈಕಿ 14 ಜನರನ್ನು ಮಾತ್ರ ನೇಮಕ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟಿದ್ದರು.

ಮತ್ತೊಂದು ಕಡೆ ಜೆಡಿಎಸ್‌ನ ಶಾಸಕರನ್ನು ನಿಗಮ/ಮಂಡಳಿಗಳಿಗೆ ನೇಮಕ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಶಾಸಕರ ನೇಮಕದ ಬಗ್ಗೆ ಚರ್ಚೆ ಆರಂಭವಾಗಿತ್ತು. ಆದರೆ ಮೈತ್ರಿ ಸರ್ಕಾರ ಬಹುಮತವಿಲ್ಲದೇ ಪತನಗೊಂಡು ಹೊಸ ಸರ್ಕಾರ ಬಂದಿದೆ.

English summary
Karnataka Chief Minister B.S.Yediyurappa cancelled all board and corporation president appointment with immediate effect. New government will appointment presidents soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X