ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ : ಉತ್ತರ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮೂಲಕ ಪರಿಸ್ಥಿತಿ ಅಧ್ಯಯನ ನಡೆಸಿದರು.

ಸೋಮವಾರ ಬೆಂಗಳೂರಿನಿಂದ ಬಳ್ಳಾರಿಯ ತೋರಣಗಲ್‌ನಲ್ಲಿರುವ ಜಿಂದಾಲ್‌ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಆಗಮಿಸಿದರು. ಅಲ್ಲಿಂದ ವೈಮಾನಿಕ ಸಮೀಕ್ಷೆ ಮಾಡಲು ವಿಶೇಷ ಹೆಲಿಕಾಪ್ಟರ್ ಮೂಲಕ ತೆರಳಿದರು.

ಉತ್ತರ ಕರ್ನಾಟಕ ಪ್ರವಾಹ : ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಪರೆನ್ಸ್ಉತ್ತರ ಕರ್ನಾಟಕ ಪ್ರವಾಹ : ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಪರೆನ್ಸ್

Yediyurappa Conducts Aerial Survey Of Rain Hit Areas Of North Karnataka

ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚನೆ ನೀಡಲಿದ್ದಾರೆ.

ದೆಹಲಿ ಭೇಟಿ ರದ್ದುಗೊಳಿಸಲು ಯಡಿಯೂರಪ್ಪಗೆ ಎಚ್‌.ಕೆ.ಪಾಟೀಲ್ ಪತ್ರದೆಹಲಿ ಭೇಟಿ ರದ್ದುಗೊಳಿಸಲು ಯಡಿಯೂರಪ್ಪಗೆ ಎಚ್‌.ಕೆ.ಪಾಟೀಲ್ ಪತ್ರ

Yediyurappa Conducts Aerial Survey Of Rain Hit Areas Of North Karnataka

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕೊಯ್ನಾ ಡ್ಯಾಂ ಭರ್ತಿಯಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ನೀರನ್ನು ಹೊರಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!

ಕೃಷ್ಣಾ ನದಿ ಪ್ರವಾಹದಿಂದಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ 20 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಜಿಲ್ಲಾಧಿಕಾರಿಗಳು ಭಾನುವಾರವೂ ಕೆಲಸ ಮಾಡಬೇಕು ಎಂದು ಯಡಿಯೂರಪ್ಪ ಸೂಚಿಸಿದ್ದರು.

ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗಾಗಿ ಸರ್ಕಾರಿ ಶಾಲೆಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇವಲ ಗಂಜಿಯನ್ನು ಮಾತ್ರ ನೀಡದೆ ಗುಣಮಟ್ಟದ ಆಹಾರ ನೀಡಬೇಕು ಎಂದು ಯಡಿಯೂರಪ್ಪ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

English summary
Karnataka Chief Minister B.S.Yediyurappa on August 5, 2019 conducted aerial survey of rain hit areas of North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X