ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ದೆಹಲಿ ಭೇಟಿ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾನುವಾರ ದೆಹಲಿಯಲ್ಲಿದ್ದಾರೆ. ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅವರು ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಭೇಟಿಯಾದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಯಡಿಯೂರಪ್ಪ ದೆಹಲಿ ಭೇಟಿಯ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಇದು "ರಾಜಕೀಯ ನಾಟಕ" ಎಂದು ಆರೋಪಿಸಿದ್ದಾರೆ.

ಪ್ರವಾಹ; ರಾಜ್ಯ ಕೇಳಿದ್ದು ಕೇವಲ 3 ಸಾವಿರ ಕೋಟಿ ಅನುದಾನಪ್ರವಾಹ; ರಾಜ್ಯ ಕೇಳಿದ್ದು ಕೇವಲ 3 ಸಾವಿರ ಕೋಟಿ ಅನುದಾನ

ಭಾನುವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ರಾಜಕೀಯ ನಾಟಕ" ಎಂದು ದೂರಿದ್ದಾರೆ.

ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳಿದ ಬಾಗಲಕೋಟೆ ಯುವಕಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳಿದ ಬಾಗಲಕೋಟೆ ಯುವಕ

Yediyurappa Delhi Visit Political Drama Says HD Kumaraswamy

"ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ" ಎಂದು ಕುಮಾರಸ್ವಾಮಿ ಟೀಟ್‌ನಲ್ಲಿ ಟೀಕಿಸಿದ್ದಾರೆ.

ನೆರೆಗೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ: ತೇಜಸ್ವಿ ಸೂರ್ಯನೆರೆಗೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ: ತೇಜಸ್ವಿ ಸೂರ್ಯ

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸಹ ಯಡಿಯೂರಪ್ಪ ದೆಹಲಿ ಭೇಟಿ ಟೀಕಿಸಿದ್ದು, "ಕುರ್ಚಿ ಉಳಿಸಿಕೊಳ್ಳಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಅವರಿಗೆ ರಾಜ್ಯದ ಜನರ ಸಂಕಷ್ಟ ಬೇಕಾಗಿಲ್ಲ. ಸರ್ಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲು ಸಿದ್ದವಾಗಿದ್ದಾರೆ" ಎಂದು ಆರೋಪಿಸಿದರು.

ಯಡಿಯೂರಪ್ಪ ಹೇಳುವುದೇನು? : ದೆಹಲಿಯಲ್ಲಿ ಮಾತನಾಡಿದ ಯಡಿಯೂರಪ್ಪ, "ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ನಿಭಾಯಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ" ಎಂದರು.

"ಪ್ರವಾಹ ಪರಿಸ್ಥಿತಿ ಎದುರಾಗಿ ಒಂದು ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ‌ಆದಷ್ಟು ಶೀಘ್ರ ಹಣಕಾಸಿನ ನೆರವು ಬಿಡುಗಡೆ ಮಾಡಲು ಕೋರಲಾಗಿದೆ. ಎರಡು ದಿನಗಳಲ್ಲಿ ಕೇಂದ್ರದ ನೆರವು ಸಿಗಲಿದೆ. ನೆರೆ ಪರಿಹಾರ ಬಿಡುಗಡೆ ಗೆ ನೀತಿ ಸಂಹಿತೆ ಅಡ್ಡಿಯಾಗಲ್ಲ" ಎಂದು ಸ್ಪಷ್ಟನೆ ನೀಡಿದರು.

English summary
Karnataka former CM H.D.Kumaraswamy alleged that Chief Minister B.S.Yediyurappa New Delhi visit is a political drama. Yediyurappa met the BJP president Amit Shah on September 22, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X