• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಈಶ್ವರಪ್ಪ ಪತ್ರ

|

ಬೆಂಗಳೂರು, ಮಾರ್ಚ್ 31; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ನಡುವೆ ಅಸಮಾಧಾನ ಉಂಟಾಗಿದೆ. ಈ ಕುರಿತು ಈಶ್ವರಪ್ಪ ರಾಜ್ಯಪಾಲರಿಗೆ ಪತ್ರವನ್ನು ಬರೆದು ದೂರು ನೀಡಿದ್ದಾರೆ.

ಕೆ. ಎಸ್. ಈಶ್ವರಪ್ಪ ರಾಜ್ಯಪಾಲ ವಜುಭಾಯಿ ವಾಲಾಗೆ ಬರೆದಿರುವ 5 ಪುಟಗಳ ಪತ್ರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ವರಿಷ್ಠರಿಗೆ ಸಹ ಪತ್ರವನ್ನು ಕಳುಹಿಸಿ ಕೊಡಲಾಗಿದೆ.

ಸಿದ್ದರಾಮಯ್ಯ ಶೇ.100ರಷ್ಟು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಈಶ್ವರಪ್ಪ ಭವಿಷ್ಯ

ಕಳೆದ ಒಂದು ವರ್ಷದಿಂದ ನನ್ನ ಇಲಾಖೆಯಲ್ಲಿ ಮುಖ್ಯಮಂತ್ರಿಗಳು ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ತರದೇ ಇಲಾಖೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಹಿರಿಯ ಸದಸ್ಯನಾದ ನನಗೆ ಇದು ಮುಜುಗರ ತರುತ್ತಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಸಿಡಿ ವಿಚಾರ ಕೇಳಬೇಡಿ ವಾಕರಿಕೆ ಬರುತ್ತೆ; ಕೆ. ಎಸ್. ಈಶ್ವರಪ್ಪ

ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಇದಕ್ಕಾಗಿ ಹಲವು ಉದಾಹರಣೆಗಳನ್ನು ಈಶ್ವರಪ್ಪ ನೀಡಿದ್ದಾರೆ.

ನೈಜ ಭಾರತೀಯರು ನಕಲಿ ರೈತ ಹೋರಾಟ ಬೆಂಬಲಿಸಬಾರದು; ಈಶ್ವರಪ್ಪ

ಪತ್ರದಲ್ಲಿನ ವಿವರ; ಹಣಕಾಸು ಇಲಾಖೆ 2020-21ರ ಬಜೆಟ್‌ನಲ್ಲಿ ಪ್ರಕಟಿಸಿದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲಿಲ್ಲ.

ಆದರೆ, ಕಳೆದ ಒಂದೂವರೆ ವರ್ಷದಲ್ಲಿ ವಿಶೇಷ ಅನುದಾನದ ಹೆಸರಿನಲ್ಲಿ 1439.25 ಕೋಟಿಗೆ ಅನುಮೋದನೆ ನೀಡಿದೆ. ಹಣಕಾಸು ಇಲಾಖೆ 81 ವಿಧಾನಸಭಾ ಕ್ಷೇತ್ರಗಳಿಗೆ 775 ಕೋಟಿ ಅನುಮೋದನೆ ನೀಡಿದೆ. ಒದೊಂದು ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿಯಿಂದ 23 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಹಣಕಾಸು ಇಲಾಖೆಯ ದೊಡ್ಡ ಮೊತ್ತದ ಅನುಮೋದನೆ ಬೇಕಾಬಿಟ್ಟಿ ನೀಡುವುದರಿಂದ ಗ್ರಾಮೀಣ ಮೂಲ ಸೌಕರ್ಯ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಇಲಾಖೆ ಯೋಜನೆಗಳ ಮೇಲೆ ದೀರ್ಘಾವಧಿಯಲ್ಲಿ ಪರಿಣಾಮ ಬೀರಲಿದೆ.

ಹಣಕಾಸು ಇಲಾಖೆಯ ಆದೇಶದಲ್ಲಿ ಬಿಜೆಪಿ ಮತ್ತು ಇತರ ಪಕ್ಷಗಳ ಶಾಸಕರಿಗೂ ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿದ್ದಾರೆ. ಬಿಜೆಪಿ 32, ಜೆಡಿಎಸ್ 18, ಕಾಂಗ್ರೆಸ್ 30, ಬಿಎಸ್‌ಪಿ 1 ಹೀಗೆ 81 ಶಾಸಕರಿಗೆ ಅನುದಾನ ನೀಡಲಾಗಿದೆ.

2020-21 ಬಜೆಟ್‌ ಪ್ಯಾರಾ 147ರಲ್ಲಿ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಗ್ರಾಮೀಣ ಸುಮಾರ್ಗ ಯೋಜನೆಯನ್ನು ಪ್ರಕಟಿಸಲಾಗಿತ್ತು. ಈ ಯೋಜನೆಯಡಿ 5 ವರ್ಷಗಳಲ್ಲಿ 20 ಸಾವಿರ ಕಿ. ಮೀ. ಅಭಿವೃದ್ಧಿಪಡಿಸಲು 780 ಕೋಟಿ ನಿಗದಿ ಮಾಡಲಾಗಿತ್ತು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30 ಕಿ. ಮೀ. ರಸ್ತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ನಮ್ಮ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿತ್ತು. ನಿಗದಿ ಮಾಡಿದ ಹಣವನ್ನು ಹಣಕಾಸು ಇಲಾಖೆ ನಿಡಲೇ ಇಲ್ಲ. ಪದೇ ಪದೇ ಪತ್ರ ಬರೆದರೂ ಹಣ ಬಿಡುಗಡೆ ಮಾಡಲೇ ಇಲ್ಲ. ಇದಕ್ಕೆ ಕಾರಣವೂ ಗೊತ್ತಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಗೆ 3998.56 ಕೋಟಿ ಅನುಮೋದನೆ ನೀಡಿದ್ದು, ಅದರಲ್ಲಿ 1600.42 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಆಗದೇ ಇರುವ ಮೊತ್ತ 2398.18 ಕೋಟಿ. ಇಲಾಖೆಯಲ್ಲಿ ಜಾರಿಯಲ್ಲಿರುವ ಯೋಜನೆಗಳನ್ನು ಕಡೆಗಣಿಸಲಾಗುತ್ತಿದೆ.

ಹಣಕಾಸು ಇಲಾಖೆಯ ಪ್ರಕ್ರಿಯೆಗಳಿಂದ ನಮ್ಮ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ಮುಂದೆ ಮುಜುಗರಕ್ಕೆ ಒಳಗಾಗಿದ್ದೇನೆ. ಪಕ್ಷದಲ್ಲಿ ಅಧಿಕಾರದಲ್ಲಿದ್ದು, ನಮ್ಮ ಪಕ್ಷದ ಶಾಸಕರನ್ನು ಕಡೆಗಣಿಸಲಾಗಿದೆ. ರಾಜ್ಯ ಮತ್ತು ಪಕ್ಷದ ಹಿತದೃಷ್ಟಿಯಿಂದ ಈಗಿನ ಆಡಳಿತ ಶೈಲಿಯನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

   ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

   ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

   English summary
   In a letter to party high command and governor Vajubhai Vala rural development and panchayat raj minister K. S. Eshwarappa explained chief minister B. S. Yediyurappa of direct interference in his ministry.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X