ಕೊರೊನಾ ಆ್ಯಂಟಿಜೆನ್ ಪರೀಕ್ಷೆ ಕಡಿಮೆ ಮಾಡಿ: ಯಡಿಯೂರಪ್ಪ ಸೂಚನೆ!
ಬೆಂಗಳೂರು, ಅ. 08: ರಾಜ್ಯದಲ್ಲಿ ಕೊರೊನಾ ವೈರ್ ನಿಯಂತ್ರಣದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವು ಮಹತ್ವದ ಸಭೆ ನಡೆಸಿದರು. ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಡಳಿತದ ಜೊತೆಗೆ ಮಹತ್ವದ ಸಭೆ ನಡೆಸಿದರು.
ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡಲು ಮುಖ್ಯವಾಗಿ ಟಿಪಿಸಿಆರ್ ಪರೀಕ್ಷೆ ಜಾಸ್ತಿ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಆಂಟಿಜೆನ್ ಟೆಸ್ಟ್ ಕಡಿಮೆ ಮಾಡಿ ಎಂದೂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಆದರೆ ಆ್ಯಂಟಿಜೆನ್ ಪರೀಕ್ಷೆ ಕಡಿಮೆ ಮಾಡಿ, ಟಿಪಿಸಿಆರ್ ಪರೀಕ್ಷೆ ಹೆಚ್ಚು ಮಾಡುವ ಮೂಲಕ ಶೀಘ್ರ ಚಿಕಿತ್ಸೆ ಕೊಟ್ಟು ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಒತ್ತು ನೀಡಿ ಎಂದು ಜಿಲ್ಲಾಡಳಿತಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Recommended Video
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ , ಕಂದಾಯ ಸಚಿವ ಆರ್. ಅಶೋಕ್, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications