ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಬೆಂಗಳೂರು, ಡಿ. 13: ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತ ಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ ಎಂದು ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಪ್ರವಚನಕಾರ, ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ಅವರು ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರು ಇಂದು ತಮ್ಮ ಉಡುಪಿಯ ಅಂಬಲಪಾಡಿ ನಿವಾಸದಲ್ಲಿ ನಿಧನರಾಗಿದ್ದಾರೆ.












Click it and Unblock the Notifications